ದಾವಣಗೆರೆ | ಅಕ್ರಮವಾಗಿ ಅಳವಡಿಸಿದ್ದ ಫ್ಲೆಕ್ಸ್ ತೆರವು; ಕ್ರಮ ಕೈಗೊಳ್ಳುವ ಎಚ್ಚರಿಕೆ

Date:

ದಾವಣಗೆರೆ ಜಿಲ್ಲೆ ಹರಿಹರ ನಗರಸಭೆಯಿಂದ ಪರವಾನಗಿ ಪಡೆಯದೆ ಮುಖ್ಯ ವೃತ್ತಗಳಲ್ಲಿ ಅಳವಡಿಸಿದ್ದ ಬೋರ್ಡ್‌, ಪ್ಲೆಕ್ಸ್ ತೆರವುಗೊಳಿಸಲು ಹರಿಹರ ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ನಗರಸಭಾ ಆರೋಗ್ಯ ನಿರೀಕ್ಷಕರ ತಂಡ ಕಾರ್ಯಾಚರಣೆಗೆ
ಮುಂದಾಯಿತು.

ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಆಯುಕ್ತರು, “ಅನಧಿಕೃತವಾಗಿ ಅಳವಡಿಸಿದ್ದ ಪ್ಲೆಕ್ಸ್ ಹಾಗೂ ಭಿತ್ತಿ ಪತ್ರಗಳಿಂದ ಅಂದಗೆಟ್ಟಿದ್ದ ನಗರದಲ್ಲಿ ನಗರಸಭೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತದೆ. ಯಾವುದೇ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು, ಇತರೆ ವ್ಯಕ್ತಿಗಳು ನಗರಸಭೆಯಿಂದ ಅನುಮತಿ ಪಡೆಯದೆ ಅಕ್ರಮವಾಗಿ ನಗರದ ನಾನಾ ಕಡೆಗಳಲ್ಲಿ ಪ್ಲೆಕ್ಸ್ ಹಾಗೂ ಜನ್ಮದಿನದ ಶುಭಾಷಯ ಕೋರುವ ಭಿತ್ತಿಪತ್ರಗಳನ್ನು ಸರ್ಕಾರಿ ಕಚೇರಿ ಗೋಡೆ, ಕಾಂಪೌಂಡ್ ಆವರಣ‌ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗುತ್ತಿದೆ. ಇದರಿಂದ ನಗರಸಭೆಯ ಸೌಂದರ್ಯ ಹಾಳು ಮಾಡಲಾಗುತ್ತಿದೆ. ನಗರಸಭೆಯಿಂದ ಪರವಾನಿಗೆ ಪಡೆಯದೆ ಅಳವಡಿಸಿದ ಅನಧಿಕೃತ ಪ್ಲೆಕ್ಸ್ ಬೋರ್ಡ್‌ಗಳನ್ನು ಯಾವುದೇ ಮುಲಾಜಿಲ್ಲದೇ ನಗರಸಭೆಯಿಂದ ತೆರವುಗೊಳಿಸಿ ಕಾನೂನು ರೀತಿ ಕ್ರಮಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಿದ್ದ ಮಾದರಿಯ ಸಾಮಾಜಿಕ ಸಂರಕ್ಷಣೆ ಮೀರಿ ಬೆಳೆಯಬೇಕು: ಬರಗೂರು ರಾಮಚಂದ್ರಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನು ಮುಂದೆ ಯಾವುದೇ ಪ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಬೇಕಾದರೆ ನಗರಸಭೆಯಿಂದ ಪರವಾನನಗಿ ಪಡೆದು ಅಳವಡಿಸಬೇಕು” ಎಂದು ತಿಳಿಸಿದರು.

ಹಿರಿಯ ಆರೋಗ್ಯ ಅಧಿಕಾರಿ ಸಂತೋಷ್ ನಾಯ್ಕ, ನಗರಸಭೆ ಆರೋಗ್ಯ ಇಲಾಖೆಯ ಟ್ರೈನರ್ ಸೌಜನ್ಯ, ಅಬ್ದುಲ್ ರೆಹಮಾನ್, ನಗರಸಭೆ ಸಿಬ್ಬಂದಿ ಪೌರಕಾರ್ಮಿಕರು ತೆರವು ಕಾರ್ಯಚರಣೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...