ದಾವಣಗೆರೆ | ಸಿಎಂ ಬದಲಾವಣೆ ಪರಿಸ್ಥಿತಿ ಬಂದರೆ ನಾನೂ ಸಿಎಂ ಆಕಾಂಕ್ಷಿ: ಶಾಮನೂರು ಶಿವಶಂಕರಪ್ಪ

Date:

ಮುಖ್ಯಮಂತ್ರಿಯನ್ನಾಗಿ ಮಾಡುವುದು ಹೈಕಮಾಂಡಿನದು. ಸಿಎಂ ಬದಲಾವಣೆಯಂಥ ಪ್ರಸಂಗ ಎದುರಾದರೆ ನಾನೂ ಸಿಎಂ ಆಕಾಂಕ್ಷಿ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನಲ್ಲಿನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಗೃಹಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರೇ ಮುಂದುವರಿಯುತ್ತಾರೆ. ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯರ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕಾಂಗ್ರೆಸ್ ಹೈಕಮಾಂಡ್ ಆಶೀರ್ವಾದ ಇರುವವರೆಗೂ ಸಿಎಂ ಸಿದ್ದರಾಮಯ್ಯರು ಮುಖ್ಯಮಂತ್ರಿಯಾಗಿ ಇರುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಶಾಸಕರು ಶಾಸಕಾಂಗ ನಾಯಕನ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಂತಿಮ ನಿರ್ಧಾರ ಹೈಕಮಾಂಡಿನದು. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದರಲ್ಲಿ ಪ್ರಯೋಜನವಿಲ್ಲ. ನಾನು ಹಿರಿಯನಿದ್ದು, ಸಿಎಂ ಆಗಬೇಕೆಂದು ಹೇಳಿಕೊಂಡು ಓಡಾಡಿದರೆ ಹಗುರ ಆಗ್ತಾರೆ ಅಷ್ಟೇ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹ; ದಸಂಸದಿಂದ ಬೃಹತ್ ತಮಟೆ ಚಳವಳಿ

“ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಎಂಬ ಪ್ರಶ್ನೆ ಬರುವುದಿಲ್ಲ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಮತ ಹಾಕಿದರೆ ಬಹುಮತ ಪಡೆದವರು ಮುಖ್ಯಮಂತ್ರಿಯಾಗುತ್ತಾರೆ. ಹಾಗಾಗಿ ನಾನೂ ಸಿಎಂ ಹುದ್ದೆ ಬಿಡುವುದಿಲ್ಲ. ನಾನೂ ಸ್ಪರ್ಧೆಯಲ್ಲಿರುತ್ತೇನೆ” ಎಂದು ಸೂಚ್ಯವಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...