ದಾವಣಗೆರೆ | ಸ್ಲಂ ಜನರ ಮತ ಜಾಗೃತಿ ಸಮಾವೇಶ; ಸ್ಲಂ ಜನರ ಪ್ರಣಾಳಿಕೆ-2024 ಬಿಡುಗಡೆ

Date:

ದೇಶದ ರಕ್ಷಣೆ, ಸಾರ್ವಭೌಮತ್ವದ ಸಂವಿಧಾನದ ರಕ್ಷಣೆ ಮಾಡುವ ಅಭ್ಯರ್ಥಿಗೆ ನಾವು ಮತ ನೀಡಲಿದ್ದೇವೆ ಎಂದು ಸ್ಲಂ ಜನಾಂದೋಲನ ಹಾಗೂ ಸಾವಿತ್ರಿಬಾಯಿ ಫುಲೆ ಸಂಘಟನೆ ದಾವಣಗೆರೆ ಜಿಲ್ಲಾ ಗೌರವಾಧ್ಯಕ್ಷ ಎಸ್ ಎಲ್ ಆನಂದಪ್ಪ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ “ಲೋಕಸಭಾ ಚುನಾವಣೆ-2024 ಸ್ಲಂ ಜನರ ಪ್ರಣಾಳಿಕೆ” ಬಿಡುಗಡೆ ಮಾಡಿ ಮಾತನಾಡಿ, “ಕೊಳಗೇರಿಯಲ್ಲಿ ನಿವಾಸಿಗಳು ಯಾರಿಗೆ ಮತ ನೀಡಬೇಕೆಂದು ಚರ್ಚಿಸಲಾಗಿದೆ. ಪ್ರಸ್ತುತ ಪವಿತ್ರ ಸಂವಿಧಾನಕ್ಕೆ ಧಕ್ಕೆಯಾಗುತ್ತಿದೆ. ದೇಶದಲ್ಲಿ ಏಕತೆ ದೂರವಾಗುತ್ತಿದೆ. ಆದ್ದರಿಂದ ಭಾರತ ಸಂವಿಧಾನ ಮತ್ತು ದೇಶ ರಕ್ಷಣೆಗಾಗಿ ಸ್ಲಂ ಜನರ ಮತ ಎಂಬ ಜಾಗೃತಿ ಸಮಾವೇಶವನ್ನು ಏಪ್ರಿಲ್‌ 27ರಂದು ಹಮ್ಮಿಕೊಳ್ಳಲಾಗಿದೆ” ಎಂದರು.

“ಸಂಸತ್ ಸದಸ್ಯರ ನಿಧಿಯಲ್ಲಿ ಸ್ಲಂಗಳ ಅಭಿವೃದ್ಧಿಗೆ ಹಣ ಮೀಸಲಿಡಲಿಬೇಕು. ನಿವೇಶನ ರಹಿತರು ಹಾಗೂ ವಸತಿ ರಹಿತರಿಗೆ ನೀವೇಶನ/ವಸತಿ ದೊರೆಯಲು ರಾಷ್ಟ್ರೀಯ ನಗರ ಲ್ಯಾಂಡ್ ಬ್ಯಾಂಕ್ ನೀತಿ ಜಾರಿಗೊಳಿಸಬೇಕು. ವಸತಿ ಹಕ್ಕು ಕಾಯಿದೆ ಜಾರಿ ಮಾಡಬೇಕು. ದೇಶದ ಎಲ್ಲ ಪ್ರಜೆಗಳಿಗೆ ಉಚಿತ ಮತ್ತು ಕಡ್ಡಾಯ ಚಿಕಿತ್ಸೆ ನೀಡುವ ಹೆಲ್ತ್ ಗ್ಯಾರೆಂಟಿಯನ್ನು ಜಾರಿಗೊಳೊಸಬೇಕು. ರೈಟ್ ಟು ಎಜುಕೇಶನ್ ಅರ್ಥಪೂರ್ಣಗೊಳಿಸಲು ಸಮಾನ ಶಿಕ್ಷಣ ಜಾರಿಗೊಳಿಸಿ ʼರಾಷ್ಟ್ರೀಯ0 ಶಿಕ್ಷಣ ನೀತಿʼ ಕಾಯಿದೆ ರದ್ದುಗೊಳಿಸಬೇಕು. ದೇಶದ ಎಲ್ಲ ನಾಗರಿಕರಿಗೆ ಉದ್ಯೋಗ ಭದ್ರತೆ ನೀಡಲು ‘ರಾಷ್ಟ್ರೀಯ ನಗರ ಉದ್ಯೋಗ ಖಾತ್ರಿʼ ಯೋಜನೆ ಜಾರಿಗೊಳಿಸಬೇಕು ಮತ್ತು ಪ್ರತಿ ಕುಟುಂಬಕ್ಕೊಂದು ಸರ್ಕಾರಿ ಕೆಲಸ ನೀಡಬೇಕು. 1931ರ ನಂತರದಲ್ಲಿ ದೇಶದಲ್ಲಿ ಜನಗಣತಿ ನಡೆದಿರುವುದಿಲ್ಲ. ಆದ್ದರಿಂದ ಜಾತಿವಾರು ಜನಗಣತಿಯನ್ನು ನಡೆಸಬೇಕು” ಎಂಬ ಬೇಡಿಕೆಗಳು ಸೇರಿದಂತೆ ಹಲವು ಸ್ಲಂ ನಿವಾಸಿಗಳ ಸಾರ್ವತ್ರಿಕ ಬೇಡಿಕೆಗಳನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಏಮ್ಸ್ ಮಂಜೂರು ಮಾಡದಿದ್ದರೆ ಚುನಾವಣೆ ಬಹಿಷ್ಕಾರ; ಎಚ್ಚರಿಕೆ

ಸುದ್ದಿಗೋಷ್ಟಿಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ರೇಣುಕಾ ಯಲ್ಲಮ್ಮ, ಎಂ ಶಬ್ಬಿರ್ ಯೂಸುಫ್ ಸಾಬ್, ಬಾಲಪ್ಪ, ಮಂಜುಳಾ, ಜಂಶಿದ್ ಬಾನು, ಗೀತಮ್ಮ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...