ದಾವಣಗೆರೆ | ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಮನೆಗೆ ನುಗ್ಗಿದ ಕಾರು!

Date:

ದಾವಣಗೆರೆ ಹೊರವಲಯದ ಕುಕ್ಕವಾಡ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದ ಕಾರು ತಡೆಗೋಡೆಯನ್ನು ಛಿದ್ರಗೊಳಿಸಿರುವ ಘಟನೆ ಸೋಮವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ.

ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವೃತ್ತದ ಬೆಂಚ್ ಮತ್ತು ಗೋಡೆಗೆ ಬಡಿದು ವೃತ್ತದ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್‌ಗೆ ಬಡಿದು ನಂತರ ಮನೆಯ ಗೋಡೆಗೆ ನುಗ್ಗಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮನೆಯ ಗೋಡೆಯೂ ಕುಸಿದು ಬಿದ್ದುಹೋಗಿದ್ದು, ರೂಮಿನಲ್ಲಿ ಮಲಗಿದ್ದ ವೃದ್ಧೆ ಗಾಯಗೊಂಡಿದ್ದು, ಮನೆಯ ಕಾಂಪೌಂಡ್ ಗೋಡೆ ಕೂಡ ಕುಸಿದಿದೆ.

ಮನೆಗೆ ನುಗ್ಗಿದ ಕಾರು 1

ಕಾರು ತ್ಯಾವಣಿಗೆ ರಸ್ತೆಯ ಕಡೆಯಿಂದ ದಾವಣಗೆರೆ ಕಡೆಗೆ ಸಾಗುತ್ತಿದ್ದು, ಕಾರಿನಲ್ಲಿ ನಾಲ್ವರು ಇದ್ದರು ಎನ್ನಲಾಗಿದೆ. ಸ್ಥಳೀಯರ ಪ್ರಕಾರ ಅಪಘಾತಕ್ಕೆ ಅತಿ ವೇಗವೇ ಕಾರಣ, ಕಾರಿನಲ್ಲಿದ್ದ ನಾಲ್ವರೂ ಕೂಡ ಮದ್ಯಪಾನ ಸೇವಿಸಿದ್ದರು ಎಂಬುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮನೆಗೆ ನುಗ್ಗಿದ ಕಾರು 2

ಕಾರು ಬಡಿದು ಗೋಡೆ ಕುಸಿದು ಬಿದ್ದಿರುವ ಮನೆ ನಿವೃತ್ತ ಶಿಕ್ಷಕ ದಿವಂಗತ ಸುರೇಂದ್ರಪ್ಪ ಎನ್ನುವವರಿಗೆ ಸೇರಿದ್ದು ಎನ್ನಲಾಗಿದ್ದು, ರೂಮಿನಲ್ಲಿ ಮಲಗಿದ್ದ ಅವರ ಧರ್ಮ ಪತ್ನಿ ಲಲಿತಮ್ಮ ಅವರಿಗೆ ಕೆಲವು ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | 14ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಪ್ರೊ. ಎ ಬಿ ರಾಮಚಂದ್ರಪ್ಪ ಆಯ್ಕೆ

ಕಾರು ಬಡಿದ ತೀವ್ರತೆಗೆ ಅಂಬೇಡ್ಕರ್ ವೃತ್ತದಲ್ಲಿ ಪಾದಾಚಾರಿಗಳು ಕುಳಿತುಕೊಳ್ಳಲು ಹಾಕಿರುವ ಸಿಮೆಂಟ್ ಆಸನ ಮತ್ತು ಕಾಂಪೌಂಡ್‌ನ ಮೂಲೆ ಕೂಡ ನುಜ್ಜುಗುಜ್ಜಾಗಿ ಬಿದ್ದಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...