ದಾವಣಗೆರೆ | ಪ್ರಕೃತಿ ವಿಕೋಪ ಎದುರಿಸುವ ಕುರಿತು ಎಸ್‌ಡಿಆರ್‌ಎಫ್‌ ತಂಡದಿಂದ ಶಾಲಾ ಮಕ್ಕಳಿಗೆ ತರಬೇತಿ

Date:

ಪಕೃತಿ ವಿಕೋಪ ಸೇರಿದಂತೆ ಅನೇಕ ತುರ್ತು ಸಂದರ್ಭದಲ್ಲಿ ಸಾರ್ವಜನಿಕರನ್ನು ಆಪತ್ತಿನಿಂದ ಕಾಪಾಡಲು ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್‌ಡಿರ್‌ಎಫ್) ಸದಾ ಸಿದ್ಧವಾಗಿರುತ್ತದೆ ಎಂದು ಎಸ್‌ಡಿಆ‌ರ್‌ಎಫ್‌ನ ಸರ್ಕಲ್ ಇನ್ಸ್‌ಪೆಕ್ಟರ್ ಎಸ್‌‌.ಎಸ್‌ ಕಿರಣ ಕುಮಾರ ತಿಳಿಸಿದರು.

ದಾವಣಗೆರೆ ನಗರದ ಪಿ ಜೆ ಬಡಾವಣೆಯಲ್ಲಿರುವ ಸೆಂಟ್ ಪಾಲ್ಸ್ ಕಾನ್ವೆಂಟ್ ಶಾಲೆಯಲ್ಲಿ ಆಯೋಜಿಸಿದ ಪ್ರಕೃತಿ ವಿಕೋಪ ನಿರ್ವಹಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯಂತೆ ಯಾವುದೇ ವಿಪತ್ತುಗಳನ್ನು ಎದುರಿಸಲು ಸನ್ನದ್ಧವಾಗಿರುವಂತೆ ಸರ್ಕಾರ ದಾವಣಗೆರೆ ಜಿಲ್ಲೆಯಲ್ಲಿ ಒಂದು ತಂಡವನ್ನು ಸ್ಥಾಪನೆ ಮಾಡಿದೆ. ಸ್ಥಳೀಯವಾಗಿ ನಡೆಯುವ ಯಾವುದೇ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ನಮ್ಮ ತಂಡ ಯಾವ ಸಮಯದಲ್ಲಿಯೇ ಆಗಲಿ, ಅವುಗಳನ್ನು ಎದುರಿಸಲು ನಮ್ಮ ರಾಜ್ಯ ವಿಪತ್ತು ಸ್ಪಂದನಾ ಪಡೆ(ಎಸ್‌ಡಿಆರ್‌ಎಫ್) ಸದಾ ಸನ್ನದ್ಧವಾಗಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಪತ್ತುಗಳನ್ನು ಎದುರಿಸಲು ಸರ್ಕಾರವು ಎನ್‌ಡಿಆರ್‌ಎಫ್‌, ಎಸ್‌ಡಿಐಎಫ್‌ ತಂಡಗಳನ್ನು ತಯಾರು ಮಾಡಿ, ತರಬೇತಿ, ಅವಶ್ಯಕವಾದ ವಸ್ತುಗಳನ್ನು ನೀಡಿದೆ. ಇದರಿಂದ ಸಾವು ನೋವುಗಳನ್ನು ತಡೆಯಲು ಶ್ರಮಿಸಬಹುದಾಗಿದೆ. ನಮ್ಮ ರಾಜ್ಯದ ಪ್ರಮುಖ ಐದು ಭಾಗಗಳಾದ ಬೆಂಗಳೂರು, ಮಂಗಳೂರು, ಬೆಳಗಾವಿ, ಕಲಬುರಗಿ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ ಈ ಎಸ್‌ಡಿಆ‌ರ್‌ಎಫ್‌ ತಂಡವನ್ನು ಆರಂಭಿಸಿದೆ. ಸರ್ಕಾರ ಪ್ರತಿಯೊಂದು ಶಾಲೆಗಳ ಮಕ್ಕಳಿಗೆ ಪ್ರಕೃತಿ ವಿಕೋಪಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಮಾಹಿತಿ ನೀಡಲು ಅವಕಾಶ ಮಾಡಿಕೊಟ್ಟಿದೆ” ಎಂದು ಹೇಳಿದರು.

ಸಿಡಿಲು ಬಡಿಯುವ ಸಂದರ್ಭ, ಮಳೆಯಿಂದ ಪ್ರವಾಹ ಬಂದ ಸಂದರ್ಭ, ವಿದ್ಯುತ್‌ ಅವಘಡ, ಅಪಘಾತವಾದ ಸಂದರ್ಭ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪಗಳು ಬಂದಾಗ ಹೇಗೆ ಎದುರಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದ್ದು, ಇದರ ಬಗ್ಗೆ ನೀವುಗಳೂ ಕೂಡ ನಿಮ್ಮ ತಂದೆ ತಾಯಿಯರಿಗೆ, ಪೋಷಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಗಳು ಏನು ಮಾಡುತ್ತಿವೆ?: ಪ್ರಗತಿಪರ ಸಂಘಟನೆಗಳು

ಶಾಲೆಯ ವ್ಯವಸ್ಥಾಪಕಿ ಸಿಸ್ಟರ್ ಮಾರ್ಜರಿ ಮಾತನಾಡಿ, “ಪ್ರಕೃತಿ ವಿಕೋಪ ಬಂದಾಗ ಎದುರಿಸುವುದು ಬಹಳ ಕಷ್ಟಕರ. ಅಂಥದರಲ್ಲಿ ಈ ತಂಡದವರು ತಮ್ಮ ಜೀವವನ್ನೂ ಲೆಕ್ಕಿಸದೇ ಇಂತಹ ಸಮಾಜಮುಖಿ ಕಾರ್ಯ ಮಾಡುತ್ತಾರೆ. ಎಲ್ಲ ಮಕ್ಕಳು ತಮ್ಮ ಓದಿನ ಜೊತೆಗೆ ಇಂತಹ ತರಬೇತಿಗಳನ್ನು ಪಡೆದು ಮುಂದೆ ನೀವೂ ಕೂಡ ಇಂತಹ ಕಾರ್ಯಗಳಲ್ಲಿ ಭಾಗವಹಿಸುವಂತಾಗಿ” ಎಂದು ಕರೆ ನೀಡಿದರು.

ಎಸ್‌ಡಿಆ‌ರ್ ಎಫ್‌ ಸಬ್ಇನ್ಸ್‌ಪೆಕ್ಟರ್ ವೆಂಕಟರಾಯ ನಾಯಕ್, ಸಿಬ್ಬಂದಿ ವರ್ಗ, ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕಿ ಎಂ ಕೆ ಮಂಜುಳಾ, ವೈಲೆಟ್, ಕ್ಲಮೆನ್ಸಿಯಾ, ಸೈಟ್ ಮಾಸ್ಟರ್ ರವೀಂದ್ರ ಸ್ವಾಮಿ, ಗೌಡ್, ಕ್ಯಾಪ್ಟನ್ ನಯನ, ಎಚ್‌ ಎಂ ರಜನಿ ಹಾಗೂ ಶಾಲಾ ಶಿಕ್ಷಕರು, ಮಕ್ಕಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...