ದಾವಣಗೆರೆ | ಕಬ್ಬೂರು ಗ್ರಾಮಸ್ಥರ ಕೆರೆ ತುಂಬಿಸುವ ಕಾರ್ಯ ಶ್ಲಾಘನೀಯ: ಶಿವಮೂರ್ತಿ ಶಿವಾಚಾರ್ಯ ಶ್ರೀ

Date:

ಅಭಿವೃದ್ಧಿ ಮತ್ತು ಯೋಜನೆಗಳಿಗೆ ಸರ್ಕಾರಗಳತ್ತ ಮುಖ ಮಾಡಿ ಕಾಯದೆ ಜನರೇ ಸ್ವಸಹಕಾರದಿಂದ ಪ್ರಯತ್ನ ಮಾಡಿದಲ್ಲಿ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರದ ಯೋಜನೆಗೆ ಪರಿತಪಿಸದೆ ಸ್ವತಃ ಕಬ್ಬೂರು ಗ್ರಾಮಸ್ಥರೇ ಕೆರೆ ತುಂಬಿಸುವ ಕಾರ್ಯ ಮಾಡಿರುವುದು ಅತ್ಯಂತ ಶ್ಲಾಘನೀಯ ಎಂದು ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಗ್ರಾಮಸ್ಥರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮಸ್ಥರ ಕೆರೆಗೆ ನೀರು ಹರಿಸುವ ಪ್ರಯತ್ನದಿಂದ ತುಂಬಿರುವ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಬಾಗಿನ ಅರ್ಪಿಸಿ ಮಾತನಾಡಿದರು.

ಬಾಗಿನ ಅರ್ಪಣೆ

“ನಿಸ್ವಾರ್ಥದಿಂದ ಕೂಡಿದ ಮನಸ್ಸುಗಳು ಸರ್ವರ, ಸಮಾಜದ ಹಿತವನ್ನು ಬಯಸುತ್ತವೆ. ಸ್ವಾರ್ಥಿಗಳಿಂದ ಸಮಾಜದ, ಗ್ರಾಮದ ಅಭಿವೃದ್ಧಿ ಸಾಧ್ಯವಿಲ್ಲ. ಸಮಾಜದಲ್ಲಿ ಇಂದು ಸ್ವಾರ್ಥಿಗಳು ಹೆಚ್ಚಾಗುತ್ತಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಗ್ರಾಮಸ್ಥರಾದ ನೀವು ಸರ್ಕಾರದ ಯೋಜನೆ ಕಡೆ ನೋಡದೆ ಕೆರೆ ತುಂಬಿಸುವ ಕಾರ್ಯ ಕೈಗೊಂಡು ಯಶಸ್ವಿಯಾಗಿರುವುದು ಅತ್ಯಂತ ಹೆಮ್ಮೆಯ ಮತ್ತು ಸಾಧನೆಯ ವಿಷಯವಾಗಿದೆ. ಭೂಮಿಯ ಮೇಲೆ ನೀರು ಸಾಕಷ್ಟಿರುತ್ತದೆ.‌ ಆದರೆ ಅದೆಲ್ಲವೂ ಕೂಡ ಉಪಯೋಗಕ್ಕೆ ಬರುವುದಿಲ್ಲ. ಕೆರೆ, ಹಳ್ಳ, ಕೊಳ್ಳ, ತೊರೆ, ನದಿಗಳ ಮೂಲಕ ಸಮುದ್ರಕ್ಕೆ ಸಾಗುವ ನೀರನ್ನು ಹಿಡಿದಿಟ್ಟುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕಿದೆ” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಊಟದ ಬಳಿಕ ಒಂದೇ ಕುಟುಂಬದ 7 ಮಂದಿ ಅಸ್ವಸ್ಥ; ‘ಕಲುಷಿತ ನೀರು ಕಾರಣ’ ಎಂದ ಗ್ರಾಮಸ್ಥರು

“ಉಬ್ರಾಣಿ ಏತನೀರಾವರಿ ಮೊದಲು ಪ್ರಾರಂಭವಾಯಿತು. ನಂತರ ಇಪ್ಪತ್ತೆರಡು ಕೆರೆ ಏತನೀರಾವರಿ ಎರಡೂ ಕೆರೆಗಳಿಗೂ ಯಶಸ್ವಿ ಆಗಲಿಲ್ಲ. ನಂತರ ಭರಮಸಾಗರ, ಜಗಳೂರು ಏತನೀರಾವರಿ ಇವುಗಳಿಗೂ ಮೊದಲು ಪ್ರಾರಂಭವಾದ ಬಹುದೊಡ್ಡ ಯೋಜನೆ, ಸಾಸ್ವೆಹಳ್ಳಿ ಏತನೀರಾವರಿ. ಇದಕ್ಕೂ ಸಾಕಷ್ಟು ಅಡೆತಡೆಗಳು ಬಂದವು. ಕೋರ್ಟ್ ಕೂಡಾ ಶೀಘ್ರ ಯೋಜನೆ ಪರವಾಗಿ ಆದೇಶ ನೀಡಿತು. ಆದ್ದರಿಂದ ಈ ವರ್ಷ ಮುತ್ತುಗದೂರು ಕೆರೆಗೆ ಪ್ರಾಯೋಗಿಕ ನೀರು ಹರಿಯಿತು. ಇನ್ನೂ ಮುಂದಿನ‌ ದಿನಗಳಲ್ಲಿ ಯೋಜನೆಯ ಎಲ್ಲ ಕೆರೆಗಳಿಗೂ ನೀರು ತಲುಪುವಂತೆ ನೋಡಿಕೊಳ್ಳಬೇಕಿದೆ. ಇದರಿಂದ ಸಾಕಷ್ಟು ಅಂತರ್ಜಲ ವೃದ್ದಿಯಾಗಿ ನಮ್ಮ ರೈತರ ಬದುಕು ಹಸನಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕಬ್ಬೂರು ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...