ದಾವಣಗೆರೆ | ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಚಕ್ರ ಬ್ಲಾಸ್ಟ್!

Date:

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗಮಧ್ಯ ಆ್ಯಂಬುಲೆನ್ಸ್ ಚಕ್ರ ಬ್ಲಾಸ್ಟ್ ಆಗಿದ್ದು, ಈ ವೇಳೆ ಸ್ಥಳೀಯ ಯುವಕರು ಚಕ್ರ ಬದಲಿಸಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿ ಮಾನವೀಯತೆ ಮೆರೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ನಡೆದಿದೆ.‌

ಚಿಕ್ಕಮಲ್ಲನಹೊಳೆ-ತೊರೆಕೋಲಮ್ಮನಹಳ್ಳಿ ಗ್ರಾಮಗಳ ನಡುವೆ ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ ಸಂಭವಿಸಿತ್ತು.
ದಾವಣಗೆರೆ ಕಡೆಯಿಂದ ಕಲ್ಯಾಣದುರ್ಗಕ್ಕೆ ಹೋಗುತ್ತಿದ್ದ ಬೊಲೆರೊ ವಾಹನ ಬೈಕ್​​ಗೆ ಡಿಕ್ಕಿ ಹೊಡೆದಿದ್ದು, ಇದರಿಂದಾಗಿ ಬೈಕ್ ಸವಾರ ಮಾರುತಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು.

ಅಪಘಾತದಲ್ಲಿ ಗಾಯಗಳಾಗಿದ್ದ ಬೈಕ್ ಸವಾರ ಮಾರುತಿಯನ್ನು ಕೊಂಡೊಯ್ಯುತ್ತಿರುವ ವೇಳೆ ಆ್ಯಂಬುಲೆನ್ಸ್ ಚಕ್ರ​ ಬ್ಲಾಸ್ಟ್ ಆಗಿತ್ತು. ಆದರೆ ಯಾವುದೇ ಅನಾಹುತ ಸಂಭವಿಸಿರಲಿಲ್ಲ. ಈ ವೇಳೆ ಆಸ್ಪತ್ರೆಗೆ ಹೋಗಲಾರದೇ ಗಾಯಾಳು ನರಳಾಡುತ್ತಿರುವುದನ್ನು ಕಂಡ ಚಿಕ್ಕಮಲ್ಲನಹೊಳೆ ಗ್ರಾಮದ ಯುವಕರು ಸಹಾಯಕ್ಕೆ ಧಾವಿಸಿದ್ದು, ಕೂಡಲೇ ಯುವಕರು ಆ್ಯಂಬುಲೆನ್ಸ್ ಚಕ್ರವನ್ನು​ ಬದಲಾಯಿಸಿ ಆಸ್ಪತ್ರೆಗೆ ಸಾಗಿಸಲು ಸಹಕಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನವಜಾತ ಶಿಶುವನ್ನು ಬಿಸಾಡಿದ್ದ ಪ್ರಕರಣ; ಪ್ರೇಮಿಗಳ ವಿರುದ್ಧ ಕೊಲೆ ಪ್ರಕರಣ ದಾಖಲು

ಗ್ರಾಮಸ್ಥರ ಸಹಾಯದಿಂದ ಗಾಯಾಳು ಮಾರುತಿಯನ್ನು ಜಗಳೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಲ್ಲನಹೊಳೆ ಗ್ರಾಮದ ಯುವಕರ ಮಾನವೀಯತೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಘಟನೆ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...