ದಾವಣಗೆರೆ | ನಾಲ್ಕು ಮದುವೆಯಾಗಿ ವಂಚನೆ; ಪತ್ನಿಯರಿಂದಲೇ ಧರ್ಮದೇಟು

Date:

ಬರೋಬ್ಬರಿ ನಾಲ್ಕು ಮದುವೆಯಾಗಿ ಪತ್ನಿಯರಿಗೆ ವಂಚಿಸಿ ಓಡಾಡುತ್ತಿದ್ದ ಆರೋಪಿಯನ್ನು ಪತ್ನಿಯರೇ ಹಿಡಿದು, ನಡು ರಸ್ತೆಯಲ್ಲೇ ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮೊಹಮ್ಮದ್ ವಾಸಿಂ ಅಲಿಯಾಸ್ ಸಲ್ಮಾನ್ ಖಾನ್ ಸಾದಿಕ್ ಎಂಬ ವ್ಯಕ್ತಿ ನಾಲ್ಕು ಮದುವೆ ಆಗಿ, ಪತ್ನಿಯರಿಂದ ಹಣ, ಚಿನ್ನಾಭರಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯಾಗಿದ್ದಾನೆ.

ದಾವಣಗೆರೆಯ ಆಜಾದ್ ನಗರದ ನಿವಾಸಿಯಾಗಿರುವ ಈತ, ವಿಧವೆಯರು ಹಾಗೂ ಗಂಡ ಬಿಟ್ಟು ಬಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ನಂಬಿಸಿ ಮದುವೆಯಾಗಿ ಮೋಸ ಮಾಡುತ್ತಿದ್ದನು. ಮದುವೆಯಾದ ಬಳಿಕ ಪತ್ನಿಯರಿಂದ ಚಿನ್ನ, ಹಣ ಪಡೆದು ವಂಚನೆ ಮಾಡಿದ್ದಾನೆಂದು ಪತ್ನಿಯರೇ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹರಿಹರದಲ್ಲಿ ಮೊದಲ ಮದುವೆ, ದಾವಣಗೆರೆಯ ಮಲೇಬೆನ್ನೂರಿನಲ್ಲಿ ಎರಡನೇ ಮದುವೆ, ಆಜಾದ್ ನಗರದಲ್ಲಿ ಮೂರನೇ ಹಾಗೂ ಭಾಷಾ ನಗರದಲ್ಲಿ ನಾಲ್ಕನೇ ವಿವಾಹವಾಗಿ ನಮ್ಮನ್ನು ವಂಚಿಸಿದ್ದಾನೆ” ಎಂದು ಪತ್ನಿಯರು ಆರೋಪಿಸಿದರು.

“ದಾವಣಗೆರೆ ನಗರದ ಬೂದಾಳ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ನಾಲ್ಕನೇ ಪತ್ನಿಯೊಂದಿಗೆ ಸಂಸಾರ ಮಾಡುತ್ತಿದ್ದ. ಆರ್‌ಟಿಒ ಕಚೇರಿ ಬಳಿಯ ಬೂದಾಳ್ ರಸ್ತೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಆಜಾದ್‌ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದೇವೆ” ಎಂದು ತಿಳಿಸಿದರು.

“2009ರಲ್ಲಿ ಮದುವೆಯಾಗಿ ಕಿರುಕುಳ ನೀಡಿದ್ದು, ಹದಿನೈದು ತೊಲ ಒಡವೆಗಳನ್ನು ಮಾರಾಟ ಮಾಡಿದ್ದ. ಮನೆಯೊಂದನ್ನು ಮಾರಾಟ ಮಾಡಿದ್ದಾನೆ. ನನ್ನನ್ನು, ಮಕ್ಕಳನ್ನು ಬೀದಿಪಾಲು ಮಾಡಿದ್ದಾನೆ” ಎಂದು ಮೊದಲ ಹೆಂಡತಿ ಆರೋಪಿಸಿದ್ದು, ದಾವಣಗೆರೆಯಲ್ಲಿ ಸಂಘಟನೆಗಳನ್ನು ಮಾಡಿದ್ದು, ನಗರದ ಹೆಣ್ಣು ಮಕ್ಕಳನ್ನೇ ಗುರಿಯಾಗಿಸಿ, ಹಣ ಕೊಡಿಸುವುದಾಗಿ ವಂಚನೆ ಮಾಡಿದ್ದಾನೆ” ಎಂದು ಪತ್ನಿಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ಲೋಪ ಆರೋಪ; ಸಮರ್ಪಕ ಆಡಳಿತಕ್ಕೆ ರಾಜ್ಯ ರೈತ ಸಂಘ ಆಗ್ರಹ

“ಸಂಘದಲ್ಲಿ ಹಣ ಕೊಡಿಸುವುದಾಗಿ 70ಕ್ಕೂ ಹೆಚ್ಚು ಮಂದಿಗೆ ಮೋಸ ಮಾಡಿದ್ದಾನೆ. ಕಮಿಷನ್ ಪಡೆದು, ಮನೆ ಲೀಸ್‌ಗೆ ಹಾಕುವುದಾಗಿ ನಂಬಿಸಿ ವಂಚನೆ ಮಾಡಿದ್ದಾನೆ. ತಮಗೆ ಲಕ್ಷಾಂತರ ರೂಪಾಯಿ ಕೊಡಬೇಕಿದೆ” ಎಂದು ದೂರಿದರು.

ಮೋಸದ ಕುರಿತಂತೆ ಈ ಹಿಂದೆಯೇ ಗಾಂಧಿನಗರ ಹಾಗೂ ಅಜಾದ್‌ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...