ದಾವಣಗೆರೆ | 7 ತಿಂಗಳಲ್ಲಿ 125 ಶಿಶುಗಳು, 28 ಮಂದಿ ಬಾಣಂತಿಯರು ಸಾವು

Date:

ದಾವಣಗೆರೆ ಜಿಲ್ಲೆಯಲ್ಲಿ ಕಳೆದ 7 ತಿಂಗಳಲ್ಲಿ 125 ನವಜಾತ ಶಿಶುಗಳು ಮತ್ತು 28 ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಅತೀ ಹೆಚ್ಚು ಮಂದಿ ಸರ್ಕಾರಿ ಆಸ್ಪತ್ರೆಯಲ್ಲೇ ಮೃತರಾಗಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬೆಳಕಿಗೆ ಬಂದಿದೆ.

2024ರ ಏಪ್ರಿಲ್ ಮತ್ತು ​ನವೆಂಬರ್ ನಡೆವೆ 125 ನವಜಾತ ಶಿಶುಗಳು ಮತ್ತು 28 ಮಂದಿ ಬಾಣಂತಿಯರು ಮೃತಪಟ್ಟಿದ್ದಾರೆ. ಈ ಪೈಕಿ, ಚಿಗಟೇರಿ ಸರ್ಕಾರಿ ಆಸ್ಪತ್ರೆಯಲ್ಲಿ 111 ಶಿಶುಗಳು ಮೃತಪಟ್ಟಿದ್ದರೆ, ದಾವಣಗೆರೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 24 ಶಿಶುಗಳು ಸಾವನ್ನಪ್ಪಿವೆ. ಮೃತಪಟ್ಟ ಬಾಣಂತಿಯರಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ 23 ಮಂದಿ ಸಾವನ್ನಪ್ಪಿದ್ದು, ಐವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಕಳೆದ 7 ತಿಂಗಳಲ್ಲಿ ದಾವಣಗೆರೆಯ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆಗೆ 732 ಮಕ್ಕಳು ದಾಖಲಾಗಿದದ್ದರು. ಅವರಲ್ಲಿ, 657 ಶಿಶುಗಳು ಆರೋಗ್ಯವಾಗಿ ಡಿಸ್ಚಾರ್ಜ್ ಆಗಿವೆ. 34 ಶಿಶುಗಳನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಅಂತೆಯೇ, ಚಿಗಟೇರಿ ಆಸ್ಪತ್ರೆಯಲ್ಲಿ 1,103 ಶಿಶುಗಳ ದಾಖಲಾಗಿದ್ದರು. ಅವರಲ್ಲಿ, 882 ಶಿಶುಗಳು ಡಿಸ್ಚಾರ್ಜ್ ಆಗಿದ್ದರೆ, 44 ಶಿಶುಗಳನ್ನು ಬೇರೆ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಎರಡೂ ಆಸ್ಪತ್ರೆಯಲ್ಲಿ ಒಟ್ಟು 125 ಮಕ್ಕಳು ಸಾವನ್ನಪ್ಪಿದ್ದರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎರಡೂ ಆಸ್ಪತ್ರೆಗಳಲ್ಲಿ ತಾಲಾ ಒಂದೊಂದು ‘ನ್ಯೂ ಬಾರ್ನ್ ​ಕೇರ್’ ಘಟಕಗಳಿವೆ. ಆದರೆ, ಜಿಲ್ಲೆಯ ಬೇರಾವುದೇ ತಾಲೂಕು ಅಸ್ಪತ್ರೆಗಳಲ್ಲಿ ಈ ಘಟಕಗಳು ಇಲ್ಲದ ಕಾರಣ, ಶಿಶುಗಳ ಆರೋಗ್ಯ ಬಿಗಡಾಯಿಸಿದ್ದ ಕೊನೆಯ ಹಂತದಲ್ಲಿ ದಾವಣಗೆರೆ ಮತ್ತು ಚಿಗಟೇರಿ ಆಸ್ಪತ್ರೆಗಳಿಗೆ ಕಳಿಸಲಾಗುತ್ತದೆ. ಆದ್ದರಿಂದ, ಆಸ್ಪತ್ರೆಗಳಲ್ಲಿ ಮಕ್ಕಳ ಮರಣ ಪ್ರಮಾಣ ಹೆಚ್ಚಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...