ದಾವಣಗೆರೆ | 24ರಂದು ಇಂಡಿಯಾ ಒಕ್ಕೂಟದ ಬೃಹತ್ ಸಭೆ

Date:

ಕೇಂದ್ರ ಸರ್ಕಾರದ ಹಿಟ್ಲರ್ ಆಡಳಿತವನ್ನು ಖಂಡಿಸಿ ದಾವಣಗೆರೆಯಲ್ಲಿ ಇದೇ 24ರಂದು ಇಂಡಿಯಾ ಒಕ್ಕೂಟದ ಪಕ್ಷಗಳು ಬೃಹತ್ ಸಭೆ ನಡೆಸಲು ತೀರ್ಮಾನಿಸಿವೆ ಎಂದು ಕಾಂಗ್ರೆಸ್‌ ಮುಖಂಡರು ಮಾಹಿತಿ ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಣೆಯಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಹಿಟ್ಲರ್ ಆಡಳಿತ ಮತ್ತು ಬೆದರಿಕೆಯಿಂದಾಗಿ ಕೋಟ್ಯಾಂತರ ಜನರು ತೊಂದರೆ ಅನುಭವಿಸುತ್ತಿದ್ದು, ಇಂತಹ ದುರಾಡಳಿತವನ್ನು ಕಿತ್ತೊಗೆಯಲು ಸಮಾಜದಲ್ಲಿ, ಅದರಲ್ಲೂ ಯುವ ಸಮುದಾಯದವರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಈ ಸಭೆ ನಡೆಸಬೇಕಾಗಿದೆ ಎಂದು ವಿವಿಧ ಪಕ್ಷಗಳು ಮತ್ತು ಸಂಘಟನೆಗಳ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಸರ್ಕಾರ ಮಹಾರಾಷ್ಟ್ರದ ಅಜಿತ್ ಪವಾರ್ ಸೇರಿದಂತೆ ಹಲವು ವಿಪಕ್ಷಗಳ ನಾಯಕರನ್ನು ಇಡಿ, ಐಟಿ ಮೂಲಕ ಪ್ರಕರಣ ದಾಖಲಿಸಿ ಬೆದರಿಸಿ, ತಮ್ಮ ಪಕ್ಷ ಸೇರಿಕೊಂಡು ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದೆ. ಆದರೆ, ಅವರದೇ ಪಕ್ಷದ ಜಿ.ಎಂ. ಸಿದ್ದೇಶ್ವರ್ ಮಾಡಿದ ಅದಿರು ಪ್ರಕರಣ ಮತ್ತು ಹವಾಲಾ ಪ್ರಕರಣಗಳನ್ನು ಮುಚ್ಚಿಹಾಕಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮ್ಯೂನಿಸ್ಟ್ ಪಕ್ಷದ ಮುಖಂಡರುಗಳಾದ ಆನಂದರಾಜ್, ಉಮೇಶ್, ಆವರಗೆರೆ ಚಂದ್ರು, ಅವರಗೆರೆ ವಾಸು, ಹರಪನಹಳ್ಳಿ ಹಾಲೇಶ್, ನಾಗರಾಜಪ್ಪ, ರೈತ ಸಂಘದ ಪರಶುರಾಮ್, ಆಮ್ ಆದ್ಮಿ ಪಕ್ಷದ ಶಿವಕುಮಾ‌ರ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಎಲ್.ಎಚ್.ಬಿ. ಮಂಜಪ್ಪ, ಆನಂದಪ್ಪ, ವಕೀಲರಾದ ಅನೀಶ್ ಪಾಷಾ, ಡಿಎಸ್ಎಸ್ ಮುಖಂಡರುಗಳು ಮಾತನಾಡಿ ಕೇಂದ್ರ ಸರ್ಕಾರದ ದುರಾಡಳಿತವನ್ನು ಉದಾಹರಣೆ ಸಮೇತ ವಿವರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ಸೈಯದ್ ಪರಮೇಶ್ ಸೈಪುಲ್ಲಾ, ಅವರಗೆರೆ, ಅನಿತಾಬಾಯಿ ಮಾಲತೇಶ್, ಸಾಗರ್, ಮಂಗಳ, ಮಂಜಮ್ಮ, ಅಲಿ ರೆಹಮಾನ್, ಖಾಲಿದ್ ಅಹ್ಮದ್, ಜಮ್ಗಳ್ಳಿ ನಾಗರಾಜ್, ಡೋಲಿ ಚಂದು ಸೇರಿದಂತೆ ಡಿಎಸ್ಎಸ್, ಕಮ್ಯೂನಿಸ್ಟ್ ಪಕ್ಷ, ರೈತ ಸಂಘ, ಆಮ್ ಆದ್ಮಿ ಪಕ್ಷಗಳ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...