ದಾವಣಗೆರೆ | ಲೋಕಸಭಾ ಟಿಕೆಟ್ ಹಂಚಿಕೆ: ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ; ವಚನಾನಂದ ಸ್ವಾಮೀಜಿ ಅಸಮಧಾನ

Date:

ರಾಜ್ಯದಲ್ಲಿ ಹೆಚ್ಚಿರುವ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಹಂಚಿಕೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಕೇಳಲಾಗಿತ್ತು.  ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಮ್ಮ ಸಮಾಜಕ್ಕೆ  ಗೌರವ ನೀಡಿಲ್ಲ. ಸಮಾಜಕ್ಕೆ ನ್ಯಾಯ ಸಿಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಇರುವ ನಮ್ಮ ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಲ್ಲಿ ಕೇವಲ ಒಂದು ಮತ್ತು ಕಾಂಗ್ರೆಸ್ ನಲ್ಲಿ ಕೇವಲ ಎರಡು ಟಿಕೆಟ್ ಹಂಚಿಕೆ ಮಾಡಲಾಗಿದೆ. ಇದು ನಮ್ಮ ಸಮಾಜಕ್ಕೆ ಆಗಿರುವ ನ್ಯಾಯವನ್ನು ಎತ್ತಿ ತೋರಿಸುತ್ತದೆ ಹಾಗಾಗಿ ನಾವು ಇತರ ವಿರುದ್ಧದ ನಿಯತ್ತಿದ್ದೇವೆ ರಾಷ್ಟ್ರೀಯ ಪಕ್ಷಗಳು ನಮ್ಮ ಸಮಾಜಕ್ಕೆ ಮನ್ನಣೆ ನೀಡಿ ಲೋಕಸಭೆ ಟಿಕೆಟ್ ಘೋಷಿಸಬೇಕಿತ್ತು ಎಂದು ಸಮಾಧಾನ ವ್ಯಕ್ತಪಡಿಸಿದರು.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಈ ವಿಚಾರ ಕುರಿತಂತೆ ರಾಜ್ಯದೆಲ್ಲೆಡೆ ಪ್ರವಾಸ ಮಾಡುತ್ತೇವೆ. ದಾವಣಗೆರೆ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ಕಲಬುರಗಿ, ಉತ್ತರ ಕನ್ನಡ, ಚಿಕ್ಕೋಡಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮಾಜ ಹೆಚ್ಚಿದೆ. ಮಾತ್ರವಲ್ಲ, ನಿರ್ಣಾಯಕ ಪಾತ್ರ ವಹಿಸುತ್ತದೆ. ಹಾಗಾಗಿ, ಹೆಚ್ಚಿನ ಪ್ರಾತಿನಿಧ್ಯ ದೊರಕದಿದ್ದರೆ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜಕ್ಕೆ ಆಗಿರುವ ಅನ್ಯಾಯ ಕುರಿತಂತೆ ಮುಖಂಡರು, ಬಾಂಧವರ ಜೊತೆ ಸಮಾಲೋಚನೆ ನಡೆಸುತ್ತೇವೆ. ಸುದೀರ್ಘವಾಗಿ ಚರ್ಚಿಸುತ್ತೇವೆ. ಹಲವು ಕ್ಷೇತ್ರಗಳಲ್ಲಿ ಹೆಚ್ಚಿನ ಮತದಾರರಿದ್ದಾರೆ. ಚುನಾವಣೆಯಲ್ಲಿ ಉತ್ತರ ನೀಡುತ್ತೇವೆ, ಕಾದು ನೋಡಿ ಎಂದು ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...