ದಾವಣಗೆರೆ | ವಿವಿಧ ಬೇಡಿಕೆ ಈಡೇರಿಸುವಂತೆ ನೇಕಾರರ ಆಗ್ರಹ

Date:

ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ ದಾವಣಗೆರೆ ನಗರದಲ್ಲಿ ಪ್ರತಿಭಟನೆ ನಡೆಸಿ, ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ನಗರ ಪಾಲಿಕೆ ಎದುರಿನ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಸಾಗಿ ಮನವಿ ಸಲ್ಲಿಸಿದ್ದಾರೆ.

ಒಕ್ಕೂಟದ ಗೌರವಾಧ್ಯಕ್ಷ ಬಸವರಾಜ ಡಿ.ಗುಬ್ಬಿ ಮಾತನಾಡಿ, ಕಳೆದ 2023ರ ಮಾರ್ಚನಲ್ಲಿ ಬಿಜೆಪಿ ಸರ್ಕಾರ ಘೋಷಣೆ ಮಾಡಿದ್ದ ನೇಕಾರರ ಅಭಿವೃದ್ಧಿ ನಿಗಮ ಇನ್ನು ಕಾರ್ಯಾರಂಭ ಮಾಡಿಲ್ಲ. ಶೀಘ್ರವೇ ನೇಕಾರ ಅಭಿವೃದ್ಧಿ ನಿಗಮ ಕಾರ್ಯಾರಂಭ ಮಾಡಬೇಕು. ನೇಕಾರರ ಅಭಿವೃದ್ಧಿಗೆ 100 ಕೋಟಿ ರೂ. ಗಳನ್ನು ಮೀಸಲಿರಿಸಬೇಕು. ದಾವಣಗೆರೆಯಲ್ಲಿ ಜವಳಿ ಪಾರ್ಕ್ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ 60 ಲಕ್ಷ ಜನಸಂಖ್ಯೆಯಿರುವ ನೇಕಾರರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು. ಆತ್ಮಹತ್ಯೆ ಮಾಡಿಕೊಂಡ ನೇಕಾರರ ಕುಟುಂಬಗಳಿಗೆ ಪರಿಹಾರ ಧನ ಶೀಘ್ರವೇ ನೀಡಬೇಕು. ಕರ್ನಾಟಕ ಹ್ಯಾಂಡ್‌ಲೂಮ್ ಡೆವಲ್ಪಮೆಂಟ್‌ ಕಾರ್ಪೊರೇಷನ್ ಮುಖಾಂತರ ರಾಜ್ಯದ ಪ್ರತಿಯೊಬ್ಬ ಸರ್ಕಾರಿ ನೌಕರನಿಗೆ ಕೈಮಗ್ಗ ನೇಕಾರ ನೇಯ್ದ ಎರಡು ಜೊತೆ ಬಟ್ಟೆ ಖರೀದಿಸುವಂತೆ ಆದೇಶಿಸಬೇಕು. ವಿದ್ಯಾರ್ಥಿಗಳಿಗೆ ಸ್ಕೂಲ್ ಯೂನಿಫಾರಂ ಬಟ್ಟೆಗಳನ್ನು ನೇಕಾರರಿಂದಲೇ ಖರೀದಿ ಮಾಡಬೇಕು ಹಾಗಿದ್ದಲ್ಲಿ ಮಾತ್ರ ಆಧುನಿಕ ಯುಗದಲ್ಲಿ ನೇಕಾರರು ಆರ್ಥಿಕವಾಗಿ ಸದೃಢರಾಗಲು ಸಾದ್ಯ ಎಂದು ಮನವಿ ಮಾಡಿದರು.

ಪವರ್ ಲೂಮ್ ಡೆವಲಪ್ ಮೆಂಟ್ ಕಾರ್ಪೊರೇಷನ್, ಹ್ಯಾಂಡೂ ಲೂಮ್ ಡೆವಲಪ್ ಮೆಂಟ್ ಕಾರ್ಪೊರೇಷನ್, ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಗಮಕ್ಕೆ ಮೂಲ ನೇಕಾರರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು. ನೇಕಾರ ಸಮ್ಮಾನ್ ಯೋಜನೆಯಿಂದ ಹೊರಗುಳಿದ ನೇಕಾರರ ಗಣತಿಯನ್ನು ಶೀಘ್ರವೇ ಪೂರ್ಣಗೊಳಿಸಿ ಅವರಿಗೆ ನೇಕಾರ ಸಮ್ಮಾನ್ ಯೋಜನೆ ತಲುಪುವಂತೆ ಆಗಬೇಕು. ಕೈಮಗ್ಗ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು. ನೇಕಾರರ ವಿದ್ಯುತ್ ಬಿಲ್ ಬಾಕಿಯನ್ನು ಸರ್ಕಾರವೇ ಭರಿಸಬೇಕು. ಸರ್ಕಾರ 10 ಹೆಚ್ಚಿಯವರೆಗೂ ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿದ್ದು, 10ರಿಂದ 20 ಹೆಚ್ ಪಿವರೆಗಿನ ವಿದ್ಯುತ್ ದರವನ್ನು 1.25 ರೂ.ವರೆಗೆ ನಿಗದಿಪಡಿಸಿ ಆದೇಶ ಹೊರಡಿಸಬೇಕು. ಅಲ್ಲದೇ ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ನೇಕಾರರಿಗೂ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಿವಕುಮಾರ್ ಪಿ.ಸುಂಕಾಪುರ, ಕೆ.ಎನ್. ವೆಂಕಟೇಶ್, ಸೋಮಶೇಖರ್ ಯಡಳ್ಳಿ, ಕರಿಬಸಪ್ಪ ಐರಣಿ, ಪರಶುರಾಮ ನಂದಿಗಾವಿ, ರಾಮಪ್ಪ, ಪರಶುರಾಮ, ಮಂಜುನಾಥ್, ರವೀಂದ್ರ, ಚಂದ್ರು, ತಿಪ್ಪೇಸ್ವಾಮಿ, ಪ್ರಮೋದ್, ವಿಠಲ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...