ದಾವಣಗೆರೆ | ಡ್ರಾಪ್ ನೆಪದಲ್ಲಿ ಸರಗಳ್ಳತನ; ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ ಮಹಿಳೆಯರು

Date:

ಡ್ರಾಪ್ ನೆಪದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಮಹಿಳೆಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಬಳಿ ನೆಡೆದಿದೆ.

ಮೂವರು ಮಹಿಳೆಯರು ಚನ್ನಗಿರಿ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದವರು. ಕೆಲಸ ಮುಗಿಸುಕೊಂಡು ಗ್ರಾಮದತ್ತ ಹೊರಟಿದ್ದರು. ಈ ಗ್ರಾಮಕ್ಕೆ ನೇರ ಬಸ್ ಸಂಪರ್ಕವಿಲ್ಲದ ಕಾರಣ ಕಾಕನೂರು ಬಳಿಯ ರಾಣಿ ಚೆನ್ನಮ್ಮ ವಸತಿ ಶಾಲೆಯ ಬಳಿ ಬಸ್‌ ಇಳಿದು, ಬಳಿಕ ಚಿಕ್ಕಬೆನ್ನೂರು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್ ಸಂತೆಬೆನ್ನೂರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಜಗದೀಶ್ ಅವರನ್ನು ಸಂಪರ್ಕಿಸಿದಾಗ, “ಕೆಲಸ ಮುಗಿಸಿಕೊಂಡು ಚಿಕ್ಕಬೆನ್ನೂರು ಗ್ರಾಮಕ್ಕೆ ಹೊರಟಿದ್ದ ಮಹಿಳೆಯರನ್ನು ಡ್ರಾಪ್ ಕೊಡುವ ನೆಪದಲ್ಲಿ ಬೈಕ್‌ಗೆ ಹತ್ತಿಸಿಕೊಂಡ ಇಬ್ಬರು ಅಪರಿಚಿತರು ಕಾಕನೂರು ಬಳಿ ಸರಗಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಕಳ್ಳತನವನ್ನು ಪ್ರತಿಭಟಿಸಿದ ರತ್ನಮ್ಮ ಗಾಯಗೊಂಡಿದ್ದು, ಜತೆಯಲ್ಲಿದ್ದ ಗೌರಮ್ಮ ಹಾಗೂ ಶಾಂತಮ್ಮ ಸೇರಿ ಒಬ್ಬ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೊಬ್ಬ ಆರೋಪಿ ಚಿನ್ನದ ಸರದೊಂದಿಗೆ ಪರಾರಿಯಾಗಿದ್ದಾನೆ” ಎಂದು ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ. ಆರೋಪಿಗಳ ಗುರುತು ಪತೆಯಾಗಿದ್ದು, ಸಧ್ಯದಲ್ಲೇ ಬಂಧಿಸುವ ವಿಶ್ವಾಸವಿದೆ” ಎಂದು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆ

ರಸ್ತೆಯಲ್ಲಿ ನೆಡೆದುಕೊಂಡು ಹೋಗುತ್ತಿದ್ದ ಮಹಿಳೆಯರನ್ನು ಕಂಡು ಬೈಕ್‌ನಲ್ಲಿ ಬಂದಿದ್ದ ಅಪರಿಚಿತರು ಡ್ರಾಪ್ ಕೊಡುವುದಾಗಿ ಮಹಿಳೆಯರನ್ನು ನಂಬಿಸಿದ್ದಾರೆ. ಬಳಿಕ ರತ್ನಮ್ಮ ಎಂಬುವವರು ಮಾತ್ರ ಬೈಕ್ ಹತ್ತಿದ್ದಾರೆ.

ಸ್ವಲ್ಪ ದೂರ ಕರೆದುಕೊಂಡು ಹೋದ ಆರೋಪಿಗಳು ಬೈಕ್‌ನಿಂದ ಕೆಳಗಿಳಿಸಿ ಸರಗಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ರತ್ನಮ್ಮ ಕೂಗಿಕೊಂಡಿದ್ದು, ಅಲ್ಲೇ ಹತ್ತಿರದಲ್ಲಿದ್ದ ಶಾಂತಮ್ಮ, ಗೌರಮ್ಮ ಇಬ್ಬರೂ ಓಡಿ ಬಂದಿದ್ದಾರೆ. ಈ ವೇಳೆ ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸಿದರೂ ಹಿಂದೆ ಓಡಿದ ರತ್ನಮ್ಮ ಹಿಂದಿನ ಸವಾರನನ್ನು ಬೆನ್ನಟ್ಟ ಹಿಡಿದು ಧೈರ್ಯದಿಂದ ಕೆಳಗೆ ಎಳೆದುಕೊಂಡಿದ್ದಾರೆ. ಘಟನೆ ನೋಡುತ್ತಿದ್ದಂತೆ ಓಡಿ ಬಂದ ಗೌರಮ್ಮ, ಶಾಂತಮ್ಮ ಇಬ್ಬರೂ ಸೇರಿ ಕಳ್ಳತನದ ಆರೋಪಿಯನ್ನು ಹಿಡಿದಿದ್ದು, ಅಲ್ಲೇ ಸುತ್ತಮುತ್ತಲಿದ್ದ ಜನರು, ಸಾರ್ವಜನಿಕರು ಸೇರಿಕೊಂಡು ಪೊಲೀಸರಿಗೆ ಮಾಹಿತಿ ತಿಳಿಸಿ ವಶಕ್ಕೆ ಒಪ್ಪಿಸಿದ್ದಾರೆ.

ಬೈಕ್‌ನಲ್ಲಿದ್ದ ಇನ್ನೊಬ್ಬ ಆರೋಪಿ ಸರದೊಂದಿಗೆ ಪರಾರಿಯಾಗಿದ್ದಾನೆ. ಸರಗಳ್ಳತನದ ಆರೋಪಿ ತಪ್ಪಿಸಿಕೊಳ್ಳುವ ಯತ್ನದಲ್ಲಿ ರತ್ನಮ್ಮನ ತಲೆಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಗಾಯಗೊಂಡು ರಕ್ತ ಸುರಿಯುತ್ತಿದ್ದರೂ ಪಟ್ಟುಬಿಡದೆ ಅವನನ್ನು ಹಿಡಿದ ರತ್ನಮ್ಮನ ಧೈರ್ಯ ಮತ್ತು ಸಹಾಯಕ್ಕೆ ಹಗೂ ಘಟನಾ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಹಿಡಿದ ಗೌರಮ್ಮ, ಶಾಂತಮ್ಮನವರ ದಿಟ್ಟತನಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಗೃಹ ಲಕ್ಷ್ಮೀ ಹಣ ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

ರತ್ನಮ್ಮ ಬೆನ್ನಟ್ಟಿ ಹಿಡಿದ ಬೈಕ್‌ನ ಹಿಂಬದಿ ಕುಳಿತಿದ್ದ ಆರೋಪಿಯನ್ನು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದ ಸುರೇಶ ಎಂದು ಗುರುತಿಸಲಾಗಿದೆ.

ಸರ ಕಿತ್ತುಕೊಂಡು ಪರಾರಿಯಾದ ಇನ್ನೊಬ್ಬ ಆರೋಪಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕನ್ನಗುಂದಿ ಗ್ರಾಮದ ಸೋಮಶೇಖರ ಎಂದು ತಿಳಿದುಬಂದಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...