ದಾವಣಗೆರೆ | ಜಿಲ್ಲಾಧಿಕಾರಿ ಆದೇಶದ ಬಳಿಕ ಅನಧಿಕೃತ ಫ್ಲೆಕ್ಸ್‌ಗಳ ತೆರವು

Date:

ಜಿಲ್ಲಾಧಿಕಾರಿಗಳ ಆದೇಶದ ಬಳಿಕ ಎಚ್ಚೆತ್ತಿರುವ ದಾವಣಗೆರೆ ಮಹಾನಗರ ಪಾಲಿಕೆಯ ಆಡಳಿತ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ತುಂಬಿಹೋಗಿದ್ದ ಾನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿದೆ.

ಇತ್ತೀಚೆಗೆ  ದಾವಣಗೆರೆಯಲ್ಲಿ ಅನಧಿಕೃತ ಫ್ಲೆಕ್ಸ್ ಗಳ ಹಾವಳಿ ಮಿತಿಮೀರಿದ್ದು ನಗರದ ಸಿಗ್‌ನಲ್‌,  ವೃತ್ತಗಳಲ್ಲಿ ನಿಂತರೆ, ಸರಿಯಾಗಿ ರಸ್ತೆಗಳೇ ಕಾಣದಿರುವಷ್ಟು ಅನಧಿಕೃತ ಫ್ಲೆಕ್ಸ್ಗಳ ಹಾವಳಿ ಜೋರಾಗಿತ್ತು. ಈ ಬಗ್ಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಮಾಡಿದರೂ ನಗರದಲ್ಲಿ  ಪಾಲಿಕೆ ಆಡಳಿತ ಈ ಬಗ್ಗೆ ಜಾಣ ಮೌನ ಅನುಸರಿಸಿತ್ತು.

ಫ್ಲೆಕ್ಸ್‌ಗಳ  ಹಾವಳಿಯಿಂದಾಗಿ ರಸ್ತೆಗಳು ಸರಿಯಾಗಿ ಕಾಣದೆ ರಸ್ತೆಗಳಲ್ಲಿ ಬರುವ ವಾಹನಗಳು ಕೂಡ ಸರಿಯಾಗಿ ಕಾಣದೆ ಅಕ್ಕ ಪಕ್ಕದ ಆಕರ್ಷಣೆಗಳಿಗೆ ವಾಹನ ಸವಾರರು, ಪಾದಚಾರಿಗಳು ಒಳಗಾಗಿ ಅಲ್ಲಲ್ಲಿ ಸಣ್ಣಪುಟ್ಟ ಅಪಘಾತಗಳಂತ ಘಟನೆಗಳು ಕೂಡ ನಡೆದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
7b81343e 0f61 40e9 9492 1c9d7cfe9ff3

ಈ ಎಲ್ಲ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ವಿಶ್ವ ಕನ್ನಡ ರಕ್ಷಣಾ ವೇದಿಕೆ ಸೇರಿ ಹಲವಾರು ಸಂಘಟನೆಗಳು ಪ್ರತಿಭಟನೆ ಕೂಡ ನಡೆಸಿದ್ದವು. ಆದರೂ ಮಹಾನಗರ ಪಾಲಿಕೆ ಆಡಳಿತ ಈ ಬಗ್ಗೆ ಕ್ರಮ ಕೈಗೊಂಡಿಲ್ಲದಿರುವುದು ಅನುಮಾನ ಮೂಡಿಸಿತ್ತು. ನಂತರ ಜಿಲ್ಲಾಧಿಕಾರಿಗಳಿಗೆ ಸಂಘಟನೆಗಳು ಪತ್ರ ಬರೆದು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದವು.

ಅಂತಿಮವಾಗಿ ಎಚ್ಚೆತ್ತಿರುವ ಜಿಲ್ಲಾಡಳಿತ ಅನಧಿಕೃತ ಫ್ಲೆಕ್ಸ್ ಗಳ ತೆರವಿಗೆ ಕ್ರಮವಹಿಸಿದೆ. ‘ನಗರದ ಸೌಂದರ್ಯ ಹಾಳು ಮಾಡುತ್ತಿರುವ ಮತ್ತು ಅವಘಡಗಳಿಗೆ ಕಾರಣವಾಗುತ್ತಿರುವ ಫ್ಲೆಕ್ಸ್ ಗಳು ನಗರದ ಜನಜೀವನಕ್ಕೆ ಮಾರಕವಾಗಿವೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಆದೇಶದಂತೆ ತೆರವು ಕಾರ್ಯಾಚರಣೆಯನ್ನು ಮಾಡಿ ಸೂಕ್ತ ಕರ್ತವ್ಯ ನಿರ್ವಹಣೆ ಕೈಗೊಳ್ಳಬೇಕು’ ಎಂದು ಜಿಲ್ಲಾಡಳಿತ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಅಕ್ರಮ ಮದ್ಯ ಮಾರಾಟ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ತಾತ್ಕಾಲಿಕ ವಾಪಸ್‌

ಇನ್ನುಮುಂದೆಯಾದರೂ ಅನಧಿಕೃತ ಫ್ಲೆಕ್ಸ್‌ ಹಾಕುವವರ ವಿರುದ್ಧ ಕ್ರಮ ಕೈಗೊಂಡು ಜಿಲ್ಲಾಡಳಿತ ಸಾರ್ವಜನಿಕ ಹಿತಾಸಕ್ತಿ ಕಾಪಾಡಲಿ ಎಂಬುದು ಸಂಘಟನೆಗಳ ಮನವಿ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...