ದಾವಣಗೆರೆ | ಕಾಂಗ್ರೆಸ್ – ಕಮ್ಯುನಿಸ್ಟ್ ಪಕ್ಷದ ಸಿದ್ಧಾಂತಗಳು ಒಂದೇ ನಾಣ್ಯದ ಎರಡು ಮುಖಗಳು: ಶಾಸಕ ಬಸವಂತಪ್ಪ

Date:

ಕಮ್ಯುನಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್‌ನ ತತ್ವ, ಸಿದ್ಧಾಂತಗಳು ಒಂದೇ ನಾಣ್ಯದ 2 ಮುಖಗಳಿದ್ದಂತೆ. ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಜಾತ್ಯತೀಯ ತತ್ವವನ್ನು ಹೊಂದಿವೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಕೆ ಬಸವಂತಪ್ಪ ಹೇಳಿದರು.

ದಾವಣಗೆರೆಯಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾನು ಬಡವರ ಪರ ಹೋರಾಟ ಮಾಡಿದ ಕುಟುಂಬದಿಂದ ಬಂದವನು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಶಾಸಕನಾಗಿ ಆಯ್ಕೆ ಆಗಿದ್ದೇನೆ. ಬಡವರ ಸಂಕಷ್ಟಗಳಿಗೆ ಸ್ಪಂದಿಸಿದರೆ, ಉತ್ತಮ ಸ್ಥಾನ ದೊರೆಯುವುದು ಶತಸಿದ್ದ. ಕ್ಷೇತ್ರದ ಜನತೆ ನನ್ನ ಕೈ ಹಿಡಿದಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದರು.

“ಸಿಪಿಐ ಹಾಗೂ ನಮ್ಮ ಸಂಬಂಧ ಅವಿನಾಭಾವವಾದುದು. ಪಂಪಾಪತಿ ಅವರ ಕಾಲದಿಂದಲೂ ನಾನು ಸಿಪಿಐ ಒಡನಾಟದಲ್ಲಿದ್ದೇನೆ. ಕಮ್ಯೂನಿಸ್ಟ್ ಪಕ್ಷ ಯಾರಿಗೆ ಶಕ್ತಿ ಇಲ್ಲವೋ, ಯಾರಿಗೆ ಧ್ವನಿ ಇದ್ದಿಲ್ಲವೋ ಅವರಿಗೆ ಶಕ್ತಿ, ಧ್ವನಿ ನೀಡುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಟ್ಟಡ ಕಾರ್ಮಿಕರ ರಾಜಾಧ್ಯಕ್ಷ ರಾಜಾಧ್ಯಕ್ಷ ಅವರಗೆರೆ ಹೆಚ್.ಜಿ.ಉಮೇಶ್ ಮಾತನಾಡಿ, “ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರಿಂದ ಪಡೆಯಲಾಗಿರುವ 4,500 ಕೋಟಿ ರೂ. ಹಣ ಇದೆ. ಅಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಕುರಿತು ಕಾರ್ಮಿಕ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಕೃಷಿ, ಹಮಾಲರು ಸೇರಿದಂತೆ ಎಲ್ಲ ವರ್ಗದ ಅಸಂಘಟಿತ ಕಾರ್ಮಿಕರ ಸೌಲಭ್ಯಕ್ಕಾಗಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಸಿಪಿಐ ಖಜಾಂಚಿ ಆನಂದರಾಜ್, ಅವರಗೆರೆ ಚಂದ್ರು, ಆವರಗೆರೆ ವಾಸು, ಶಾರದಮ್ಮ, ಸರೋಜ, ರಮೇಶ್, ಲಕ್ಷ್ಮಣ್, ಶಿವಕುಮಾರ್ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...