ದಾವಣಗೆರೆ | ಬರದ ಬವಣೆಗೆ 1 ಲಕ್ಷ 50 ಸಾವಿರ ಹೆಕ್ಟೇರ್ ಬೆಳೆ ನಾಶ

Date:

ಬರಪೀಡಿತ ದಾವಣಗೆರೆ ಜಿಲ್ಲೆಯಲ್ಲಿ ಈ ವರ್ಷ ಬರೋಬ್ಬರಿ 119 ಕೋಟಿ ರೂಪಾಯಿ ಮೌಲ್ಯದ ಅಡಕೆ ಬೆಳೆ ನಾಶವಾಗಿದ್ದು, ಇತರೆ ಬೆಳೆಗಳೂ ಒಣಗಿ ಹೋಗಿ ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ 1 ಲಕ್ಷ 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಹುತೇಕ ನಾಶವಾಗಿದೆ. ಮುಂಗಾರು ವೇಳೆ 2 ಲಕ್ಷದ 27 ಸಾವಿರ ಹೇಕ್ಟರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಮಳೆ ಕೈಕೊಟ್ಟ ಕಾರಣ 1 ಲಕ್ಷದ 50 ಸಾವಿರ ಹೇಕ್ಟರ್ ‌ಪ್ರದೇಶದ ಬೆಳೆಗೆ ಸಂಪೂರ್ಣ ಹಾನಿಯಾಗಿದೆ. ಮೆಕ್ಕೆಜೋಳ, ರಾಗಿ, ಈರುಳ್ಳಿ ಹೀಗೆ ಎಲ್ಲವೂ ಒಣಗಿ ಹೋಗಿವೆ.

ಇತ್ತೀಚಿಗೆ ಕೇಂದ್ರದ ಬರ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತ್ತು. ದಾವಣಗೆರೆ ಜಿಲ್ಲೆಯಲ್ಲಿ 47 ಸಾವಿರ ರೈತರು ಈಗಾಗಲೇ ಬೆಳೆ ವಿಮೆ ಮಾಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಅಡಕೆ ತೋಟವೂ ಒಣಗುತ್ತಿದ್ದು ಬೆಳೆ ಕೈಗೆ ಬಾರದೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದಿಂದ ಸೂಕ್ತ ಬರ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಅಂತರ್ಜಲ ಮಟ್ಟ ಕುಸಿದಿದ್ದು, ಬೋರ್‌ವೆಲ್​​ಗಳಲ್ಲಿ ನೀರು ಪಾತಾಳ ತಲುಪಿದೆ. ಕೆರೆ-ಕಟ್ಟೆಗಳು ಬತ್ತಿದ್ದು, ಹನಿ ನೀರಿಗೂ ಜನರು ಪರದಾಡುವ ಸ್ಥಿತಿಯಿದೆ. ಮೊದಲು ಬಾವಿ ಕೊರೆದರೆ 180ರಿಂದ 250 ಅಡಿಯಲ್ಲಿ ನೀರು ಸಿಗುತ್ತಿತ್ತು. ಆದರೆ, ಈಗ ಬರೋಬ್ಬರಿ 600ರಿಂದ 800 ಅಡಿ ಬೋರ್‌​ವೆಲ್ ಕೊರೆದರೂ ನೀರು ಸಿಗುತ್ತಿಲ್ಲ ಎನ್ನುತ್ತಿದ್ದಾರೆ ಜಿಲ್ಲೆಯ ರೈತರು.

ದಾವಣಗೆರೆ, ಹೊನ್ನಾಳಿ, ಹರಿಹರ, ಜಗಳೂರು, ಚನ್ನಗಿರಿ ಹಾಗೂ ನ್ಯಾಮತಿಯ ಒಟ್ಟು 6 ತಾಲೂಕುಗಳನ್ನು ಬರಪೀಡಿತ ಪ್ರದೇಶದ ಪಟ್ಟಿಗೆ ಸೇರಿಸಲಾಗಿದೆ. ಕಳೆದ 25 ವರ್ಷಗಳಲ್ಲಿ 16 ವರ್ಷ ಜಗಳೂರು ತಾಲೂಕು ಬರದಿಂದ ನಲುಗಿದೆ. ಬರದ ಹೊಡೆತ ಜಾನುವಾರುಗಳು, ಪ್ರಾಣಿ, ಪಕ್ಷಿಗಳಿಗೂ ತಟ್ಟಿದ್ದು ನೀರಿಲ್ಲದೇ ನಲುಗುತ್ತಿವೆ. ಜಾನುವಾರುಗಳಿಗಾಗಿ ಗೋ ಶಾಲೆಗಳನ್ನು ಆರಂಭಿಸಿ ಮೇವು ಪೂರೈಸುವಂತೆ ಜಿಲ್ಲೆಯ ರೈತರು ಆಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...