ದಾವಣಗೆರೆ | ಸರ್ಕಾರ ಗುರುತಿಸಿರುವ ಜಾಗದಲ್ಲಿ ಶೀಘ್ರವೇ ನಿವೇಶನಗಳನ್ನು ಹಂಚಿಕೆ ಮಾಡಲು ಒತ್ತಾಯ

Date:

ದಲಿತ ಹಾಗೂ ಹಿಂದುಳಿದ ವರ್ಗದ ವಸತಿ ರಹಿತ ಕುಟುಂಬಗಳಿಗೆ ಕಡ್ಲೆಗೊಂದಿ ಗ್ರಾಮದಲ್ಲಿ ಸರ್ಕಾರ ಗುರುತಿಸಿರುವ ಜಾಗದಲ್ಲಿ ಶೀಘ್ರವೇ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಹರಿಹರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಒತ್ತಾಯಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೆ.ಬೇವಿನಹಳ್ಳಿ ಗ್ರಾಮದ ಗ್ರಾಪಂ ಕಚೇರಿಯಲ್ಲಿ ನಡೆದ ಕಡ್ಲೆಗೊಂದಿ ಗ್ರಾಮ ಸಭೆಯಲ್ಲಿ ಭಾಗವಹಿಸಿ ಒತ್ತಾಯಿಸಿದ ಅವರು, ಗ್ರಾಮದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ 120 ವಸತಿ ರಹಿತ ಕುಟುಂಬಗಳಿವೆ. ಇವರು ಕೇವಲ ಕೂಲಿಯನ್ನೇ ನೆಚ್ಚಿಕೊಂಡಿರುವರುವ ಕುಟುಂಬಗಳಾಗಿವೆ. ಚಿಕ್ಕ ಚಿಕ್ಕ ಹೆಂಚಿನ, ಶೀಟಿನ ಮನೆಗಳಲ್ಲಿ ಕನಿಷ್ಠ ಮೂಲ ಸೌಕರ್ಯಗಳಿಲ್ಲದೆ, ಅನೈರ್ಮಲ್ಯತೆಯಲ್ಲಿ ವಾಸಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಕಡ್ಲೆಗೊಂದಿ ಗ್ರಾಮದಲ್ಲಿರುವ ಸರ್ಕಾರಿ ಜಮೀನನ್ನು ಗ್ರಾಪಂ, ತಾಪಂ ಹಾಗೂ ತಾಲೂಕು ಆಡಳಿತದವರು ಗುರುತಿಸಿದ್ದು, ಆದಷ್ಟು ಬೇಗ ಮುಂದಿನ ಪ್ರಕ್ರಿಯೆಗಳನ್ನು ಮಾಡಿ ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಆಗ್ರಹಿಸುತ್ತೇವೆ. ವಸತಿ ಸೌಲಭ್ಯ ಒದಗಿಸಲು ಆಗ್ರಹಿಸಿ ತಾಲೂಕು ಕಚೇರಿ ಎದುರು ಸಂಘಟನೆಯಿಂದ 57 ದಿನಗಳ ಕಾಲ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿ ತಾಲೂಕು ಆಡಳಿತದ ಗಮನ ಸೆಳೆಯಲಾಗಿತ್ತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ದಾವಣಗೆರೆ

ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಲಕ್ಷ್ಮಿಬಾಯಿ ಮಾತನಾಡಿ, ನಿರ್ವಸತಿಗರು ಈಗಾಗಲೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಕುಟುಂಬಗಳಿದ್ದರೆ, ಪ್ರತ್ಯೇಕ ನಿವೇಶನಕ್ಕೆ ಆಗ್ರಹ ಕೇಳಿ ಬಂದಿದ್ದು, ಆ ಕುರಿತು ಸ್ಥಳ ಪರಿಶೀಲನೆ ಮಾಡಿ ಹಿರಿಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಸಭೆಯಲ್ಲಿ ಚರ್ಚಿಸಿ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದೆಂದರು.

ಇದನ್ನು ಓದಿದ್ದೀರಾ? ರಾಯಚೂರು | ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಸಂಸದಿಂದ ಪ್ರತಿಭಟನೆ

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರೇಖಾ ಹಾಲೇಶ್, ಉಪಾಧ್ಯಕ್ಷೆ ಮಂಜಮ್ಮ ಮಂಜಪ್ಪ, ಸದಸ್ಯರಾದ ಲೋಕೇಶ್, ಯಶೋಧಮ್ಮ, ಮಾತೆಂಗೆಮ್ಮ,ಜಯಪ್ಪ, ಗಿರಿಗೌಡ್ರು, ತಿಮ್ಮಣ್ಣ, ಮಹೇಶ್ವರಪ್ಪ ಟಿ.ಕೆ., ಗ್ರಾಮದ ಮುಖಂಡರಾದ ಸಂಜೀವ್, ಹನುಮಂತಪ್ಪ, ಬಸವರಾಜ್, ಪರಮೇಶ್‌, ಲೋಕಪ್ಪ, ರಾಜಪ್ಪ, ಶೀಲಮ್ಮ, ರೇಣುಕಮ್ಮ, ಶಿವಪ್ಪ, ಅಣ್ಣಪ್ಪ, ಸಾಕಮ್ಮ, ಮಲ್ಲಮ್ಮ, ರಂಗಪ್ಪ, ಲಕ್ಷ್ಮಣರೆಡ್ಡಿ, ಕೊಟ್ರೇಶಿ, ನಿಂಗಪ್ಪ ನಂದಿಗಾವಿ ಹಾಗೂ ಇತರ ಗ್ರಾಮಸ್ಥರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...