ದಾವಣಗೆರೆ | ಬಿಸಿಯೂಟ ತಯಾರಕರ ಕನಿಷ್ಟ ವೇತನ ಜಾರಿಗೆ ಒತ್ತಾಯ

Date:

ಮುಂಬರುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ನೀಡಲು ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಬಿಸಿಯೂಟ ತಯಾರಕ ಸಂಘಟನೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನೆಡೆಯಲಿರುವ ಪ್ರತಿಭಟನೆ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಂಸದೆ ಪ್ರಿಯಾಂಕ ಗಾಂಧಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಬಿಸಿಯೂಟ ತಯಾರಕರಿಗೆ ಆರನೇ ಗ್ಯಾರಂಟಿಯಾಗಿ 6000 ವೇತನ ಕೊಡುವುದಾಗಿ ಭರವಸೆ ನೀಡಿದ್ದರು. ಈವರೆಗೆ ಅದನ್ನು ಈಡೇರಿಸಿಲ್ಲ. ಸರ್ಕಾರವು ಬಜೆಟ್‌ನಲ್ಲಿ ವೇತನ ಹೆಚ್ಚಳ ಮಾಡಬೇಕು.‌ ಅಧಿಕಾರಿಗಳ ನಿರ್ಲಕ್ಷತೆಯಿಂದ ಬಿಸಿ ಊಟ ತಯಾರಕರು ಸಮಯಕ್ಕೆ ಸರಿಯಾಗಿ ವೇತನ ಪಾವತಿ ಇಲ್ಲದೆ, ವರ್ಷಕ್ಕೆ ಎರಡು ಮೂರು ಬಾರಿ ವೇತನ ಪಡೆಯುವಂತಾಗಿದೆ. ಈ ಹಿನ್ನಲೆ ಎಐಟಿಯುಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ದಾವಣಗೆರೆ ಜಿಲ್ಲಾ ಸಮಿತಿ, ತಮಗೆ 6ನೇ ಗ್ಯಾರಂಟಿಯಾಗಿ ಘೋಷಣೆ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಫೆ. 3ರಿಂದ ಫ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಧರಣಿ ಮಾಡುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಫೈನಾನ್ಸ್‌ ಕಂಪನಿ ಕಿರುಕುಳ: ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಮೃತದೇಹ ನದಿಯಲ್ಲಿ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಎಐಟಿಯುಸಿ ಸಂಯೋಜಿತ ಬಿಸಿಯೂಟ ತಯಾರಕರ ಸಂಘಟನೆಯ ಮುಖಂಡ ಚಂದ್ರು ಆವರಗೆರೆ, ಜಿಲ್ಲಾ ಉಪಾಧ್ಯಕ್ಷೆ ಸರೋಜಾ, ಹರಿಹರ ತಾಲೂಕು ಸಂಘಟನೆಯ ಮುಖಂಡರುಗಳಾದ ನಾಗವೇಣಿ, ಶೃತಿ, ವಿಶಾಲಮ್ಮ, ಗೌರಮ್ಮ, ಮಂಗಳ, ಮಂಜುಳಾ, ಸುಧಾ ಸೇರಿದಂತೆ ಇತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...