ದಾವಣಗೆರೆ | ಗಣೇಶ ಹಬ್ಬ: ಉಚಿತ ಆರೋಗ್ಯ ತಪಾಸಣೆ ಶಿಬಿರ

Date:

ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅಂಗವಾಗಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆಯಲ್ಲಿ ವಿನಾಯಕ ಹಾಗೂ ಬಸವೇಶ್ವರ ಯುವಕರ ಸಂಘವು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ನಡೆಸಿದೆ. ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ರವಿಕುಮಾರ್ ಟಿ.ಜಿ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆದಿದೆ.

ಗ್ರಾಮದಲ್ಲಿ ಸಂಘವು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದೆ. ಅದರ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆದಿದ್ದು, ಗ್ರಾಮದ ಹಲವಾರು ಯುವಜನರು ರಕ್ತದಾನ ಮಾಡಿದ್ದಾರೆ.

ಶಿಬಿರವನ್ನು ಉದ್ದೇಶಿಸಿ ಮಾನತಾಡಿದ ಡಾ. ರವಿಕುಮಾರ್‌, “ವೇಗದ ಮತ್ತು ಆಧುನಿಕ ಜಗತ್ತಿನಲ್ಲಿ ‘ಎಲ್ಲ ಸಂಪತ್ತು, ಐಶ್ವರ್ಯಕ್ಕಿಂತಲೂ ಆರೋಗ್ಯವೇ ಭಾಗ್ಯ’ ಎಂಬ ಸತ್ಯ ಎಲ್ಲರಿಗೂ ಈಗ ಅರ್ಥವಾಗಿದೆ. ಆದರೆ, ಕೆಲಸದ ಒತ್ತಡ, ಸಮಯದ ಅಭಾವ ಮತ್ತು ಆಸ್ಪತ್ರೆಗಳ ಅಲಭ್ಯತೆ ಕಾರಣದಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ. ಆದರೆ, ಇದರಿಂದಾಗಿ ಅನಿರೀಕ್ಷಿತವಾಗಿ ದೊಡ್ಡ ಅಪಾಯಗಳು ಎದುರಾಗುವ ಸಂಭವ ಹೆಚ್ಚಿರುತ್ತದೆ. ಇದರ ಭಾಗವಾಗಿಯೇ ಇತ್ತೀಚಿಗೆ ಹೃದಯಾಘಾತ, ಮಧುಮೇಹ. ರಕ್ತದೊತ್ತಡ, ಕ್ಯಾನ್ಸರ್‌ನಂತಹ ಸಮಸ್ಯೆಗಳು ಎದುರಾಗುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂತೋಷಕರ ಜೀವನಕ್ಕೆ ಆರೋಗ್ಯವಂತ ದೇಹ ಮತ್ತು ಮನಸು ಮುಖ್ಯವಾಗುತ್ತದೆ. ಹಾಗಾಗಿ, ದೈನಂದಿನ ಕ್ರಮದಲ್ಲಿ ಉತ್ತಮ ಹವ್ಯಾಸ-ಆಹಾರಪದ್ಧತಿ, ಯೋಗ, ಧ್ಯಾನಗಳನ್ನು ರೂಢಿಸಿಕೊಳ್ಳ ಬೇಕು. ಜತೆಗೆ ಕರುಣೆ, ಸ್ನೇಹ, ಪರೋಪಕಾರ, ಪ್ರೀತಿಯೆಂಬ ಭಾವನೆಗಳನ್ನು ಮನಸ್ಸನ್ನು ಸದಾ ಆರೋಗ್ಯವಾಗಿ ಇರಿಸುತ್ತವೆ” ಎಂದು ಹೇಳಿದರು.

ತಪಾಸಣೆ ಶಿಬಿರದಲ್ಲಿ ಜಗಳೂರಿನ ಮಾಜಿ ಶಾಸಕ ಗುರುಸಿದ್ಧನಗೌಡ, ವೈದ್ಯರಾದ ಶಾಹಿದ್, ಉದ್ಯಮಿಗ ಳಾದ ನಾಗರಾಜ ಸ್ವಾಮಿ, ಟ್ರಸ್ಟ್ ಸಿಬ್ಬಂದಿಗಳಾದ ನುಂಕೇಶ್, ಪವನ್ ಶೇಪೂರ್, ಶ್ವೇತಾ, ಗೌರಿ, ವಿಜಯ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...