ದಾವಣಗೆರೆ | ದಾವಣಗೆರೆ ಮಾದರಿಯಲ್ಲಿ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗೆ ಒಮ್ಮೆ ಅವಕಾಶ ಕೊಡಿ: ಡಾ. ಪ್ರಭಾ ಮಲ್ಲಿಕಾರ್ಜುನ್

Date:

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ಸ್ಥಳೀಯ ಮುಖಂಡರೊಂದಿಗೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು.

ಅಣಜಿ ಕಿತ್ತೂರು, ಕುರುಡಿ, ಹೆಮ್ಮನಬೇತೂರು, ದ್ಯಾಮವ್ವನಹಳ್ಳಿ, ಗಾಂಧಿನಗರ, ಹುಲಿಕಟ್ಟೆ, ಕೆರೆಯಾಗಳಹಳ್ಳಿ, ಗಿರಿಯಾಪುರ, ಗೊಲ್ಲರಹಳ್ಳಿ, ಚಿಕ್ಕವ್ವನಾಗ್ತಿಹಳ್ಳಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಪ್ರತೀ ಗ್ರಾಮದಲ್ಲಿ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಅವರು, ದಾವಣಗೆರೆ ನಗರವನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರು ಮತ್ತು ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದು, ರಾಜ್ಯ ಮತ್ತು ದೇಶದಲ್ಲೇ ಮಾದರಿ ನಗರವಾಗಿದೆ. ಇದೇ ರೀತಿ ದಾವಣಗೆರೆ ಲೋಕಸಭಾ ಕ್ಷೇತ್ರ ಪ್ರತಿ ನಗರ ಮತ್ತು ಗ್ರಾಮಗಳು ಅಭಿವೃದ್ಧಿ ಹೊಂದಲು ನನಗೆ ಒಂದು ಬಾರಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾಗದಲ್ಲಿ 22 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ಹರಿಸಲು ಸ್ಥಳೀಯ ಮುಖಂಡರ ಸಹಕಾರ ಮತ್ತು ಸಿರಿಗೆರೆ ಶ್ರೀಗಳ ಸಲಹೆಯಿಂದ ಮಲ್ಲಿಕಾರ್ಜುನ್ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಇಂದಿನ ಬೇಸಿಗೆಯಲ್ಲೂ ಕೆರೆಗಳಲ್ಲಿ ನೀರು ಇರುವುದರಿಂದ ಅಂತರ್ಜಲ ಹೆಚ್ಚಾಗಿ ಕೊಳವೆ ಬಾವಿಗಳಿಂದ ರೈತರಿಗೆ ನೀರು ಸಿಗುತ್ತಿದೆ. ಇಂತಹ ಕಾರ್ಯಗಳು ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ತಲುಪಬೇಕೆಂದರೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದರು.

ಕಾಂಗ್ರೆಸ್ ಸರ್ಕಾರವು ಎಲ್ಲಾ ಸಮುದಾಯಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ, ಮಧ್ಯಕರ್ನಾಟಕ ದಾವಣಗೆರೆಯಲ್ಲಿ ಬದಲಾವಣೆಯ ಅಲೆ ಇದ್ದು, ಜನರಲ್ಲಿ ನಮ್ಮ ಮೇಲಿದ್ದ ವಿಶ್ವಾಸವನ್ನು ಹೆಚ್ಚಾಗಿದೆ. ಎಲ್ಲರಿಗೂ ನ್ಯಾಯ ಸಿಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ದೇಶದಲ್ಲಿ ಬದಲಾವಣೆಯ ಅಲೆ ಆರಂಭವಾಗಿದ್ದು, ಕಳೆದ 10 ವರ್ಷಗಳಲ್ಲಿ ರೈತರಿಗೆ ನೆರವಾಗುವ ಯಾವುದೇ ಕೆಲಸಗಳನ್ನು ಕೇಂದ್ರ ಸರ್ಕಾರವಾಗಲೀ, ದಾವಣಗೆರೆ ಸಂಸದರು ಮಾಡಲಿಲ್ಲ. ಆದರೆ, ಹಿಂದಿನ ಮನಮೋಹನ್ ಸಿಂಗ್ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಿತ್ತು ಎಂದರು.

ಇದೇ ವೇಳೆ ಮತದಾನದ ಹಕ್ಕಿನ ಮಹತ್ವವನ್ನು ತಿಳಿಸಿ ಹೇಳಿದ ಪ್ರಭಾ ಮಲ್ಲಿಕಾರ್ಜುನ್ ಅವರು ಜನರಲ್ಲಿ ಮತದಾನ ಮತ್ತು ಆರೋಗ್ಯದ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

ಜನರ ಆಶೋತ್ತರಗಳ ನಿರಾಸೆಗೊಳಿಸದೆ ಶ್ರದ್ಧೆಯಿಂದ ಪ್ರತಿನಿಧಿಸುತ್ತೇನೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರ ನಿಂತಿದೆ, ಬಾರಿಯ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದೇ ಆದರೆ, ಎಲ್ಲಾ ವರ್ಗಗಳ ಹಿತಾಸಕ್ತಿಗಳ ಪರವಾಗಿ ಪ್ರಬಲವಾಗಿ ನಿಲ್ಲುತ್ತೇನೆಂದು ಆಶ್ವಾಸನೆ ನೀಡಿದರು.

ಪ್ರಚಾರದ ವೇಳೆ ಶಾಸಕ ಬಸವಂತಪ್ಪ, ಬ್ಲಾಕ್ ಅಧ್ಯಕ್ಷ ಹನುಮಂತಪ್ಪ, ಬಿ.ಜಿ ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ. ಚಂದ್ರಣ್ಣ, ಮುದೇಗೌಡ್ರ ಗಿರೀಶ್, ಬೇತೂರು ಕರಿಬಸಪ್ಪ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...