ದಾವಣಗೆರೆ | ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ; ಕಾಂಗ್ರೆಸ್‌ ಅಧ್ಯಕ್ಷರಿಗೆ ಶಾಮನೂರು ಪತ್ರ

Date:

ಮುಂಬರುವ ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪತ್ರ ಬರೆದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು. ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್ಸಿಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವೀರಶೈವ-ಲಿಂಗಾಯತರು 1999ರವರೆಗೆ ಕಾಂಗ್ರೆಸ್‌ನ ಸಾಂಪ್ರದಾಯಿಕ ಬೆಂಬಲಿಗರಾಗಿದ್ದರು. ಎಸ್.ನಿಜಲಿಂಗಪ್ಪ, ಬಿ.ಡಿ. ಜತ್ತಿ, ಎಸ್.ಆರ್. ಕಂಠಿ, ವೀರೇಂದ್ರ ಪಾಟೀಲ್ ಸೇರಿದಂತೆ ಅನೇಕ ನಾಯಕರು ಇದ್ದರು. ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ನಮ್ಮ ಸಮಾಜದ ಪ್ರತಿನಿಧಿಗಳಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ವೀರಶೈವ-ಲಿಂಗಾಯತರ ನಾಯಕತ್ವವನ್ನು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಕಡೆಗಣಿಸುತ್ತಾ ಬರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರ ಫಲವಾಗಿ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಘಟನೆಗಳಾಗಿವೆ ಎಂದರೆ ತಪ್ಪಿಲ್ಲ. ಈಗಲೂ ಕಾಲಮಿಂಚಿಲ್ಲ ಇನ್ನಾದರೂ ನಮ್ಮ ಸಮುದಾಯದವರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಾಯಕತ್ವ ಕಲ್ಪಿಸುವ ಮೂಲಕ ಪ್ರಾತಿನಿಧ್ಯ ನೀಡುತ್ತಿರೆಂದು ನಂಬಿರುತ್ತೇವೆ ಎಂದಿದ್ದಾರೆ.

ನಮ್ಮ ರಾಜ್ಯದವರೇ ಆದ ನಿಮಗೆ ಸಮುದಾಯದ ಬಗ್ಗೆ ಪ್ರತ್ಯೇಕವಾಗಿ ಹೇಳುವುದು ಏನಿಲ್ಲ. ಏಳು ದಶಕಗಳಿಂದ ಹತ್ತಿರದಿಂದ ಸಮುದಾಯ ಬಲ್ಲವರಾಗಿದ್ದೀರಿ. ಇದನ್ನು ಸರಿಪಡಿಸುವ ಶಕ್ತಿ ನಿಮಗಿದೆ. ಹಾಗಾಗಿ‌ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...