ದಾವಣಗೆರೆ | ಬಿರುಗಾಳಿ ಸಹಿತ ಭಾರೀ ಮಳೆ; ಅಪಾರ ಪ್ರಮಾಣದ ಬೆಳೆ ಹಾನಿ

Date:

ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಭತ್ತ, ಅಡಿಕೆ, ಬಾಳೆ ಸೇರಿದಂತೆ ಅಪಾರ ಪ್ರಮಾಣ ಬೆಳೆ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು ರೂ. 10.90 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಲಾಗಿದೆ.

ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ಮೂರು ಎಕರೆ, ಜರೀಕಟ್ಟೆ ಗ್ರಾಮದಲ್ಲಿ 2.15 ಎಕರೆಯಲ್ಲಿ ಅಡಿಕೆ ಬೆಳೆ ಹಾಳಾಗಿದ್ದು, 1 ಲಕ್ಷ ರೂ. ನಷ್ಟವಾಗಿದೆ. ಗಿರಿಯಾಪುರದಲ್ಲಿ ಜಿ ಎಸ್ ಅಜ್ಜಪ್ಪ ಮತ್ತು ನಾಗರಾಜಪ್ಪ ಅವರಿಗೆ ಸೇರಿದ ಹತ್ತಾರು ಎಕರೆ ಪ್ರದೇಶದ ಭತ್ತ ನಾಶವಾಗಿದೆ.

ಹರಿಹರ ತಾಲೂಕು ವ್ಯಾಪ್ತಿಯ ಇಂಗಳಗೊಂದಿ, ಧೂಳೆಹೊಳೆ ಗ್ರಾಮದಲ್ಲಿ 30 ಎಕರೆ ಪ್ರದೇಶದಲ್ಲಿ ಭತ್ತದ ಬೆಳೆಗೆ ಹಾನಿಯಾಗಿದ್ದು, ಅಂದಾಜು 1.80 ಲಕ್ಷ ರೂ. ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗಳೂರು ತಾಲೂಕು ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಎರಡು ಕಚ್ಚಾ ಮನೆ, 15 ಎಕರೆ ಬಾಳೆ, 5 ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಬೆಳೆ ನಷ್ಟವಾಗಿದ್ದು, 6 ಲಕ್ಷ ನಷ್ಟವಾಗಿದೆ.

ಹೊನ್ನಾಳಿ ತಾಲೂಕಿನಲ್ಲಿ 20 ಎಕರೆ ಭತ್ತ ಹಾನಿಯಾಗಿದ್ದು, 2 ಲಕ್ಷ ನಷ್ಟವಾಗಿದೆ. ಚನ್ನಗಿರಿ ತಾಲೂಕು ವ್ಯಾಪ್ತಿಯಲ್ಲಿ 1 ಎಕರೆ ಬಾಳೆ ಹಾನಿಯಾಗಿದ್ದು, ಅಂದಾಜು 10 ಸಾವಿರ ರೂ. ನಷ್ಟವಾಗಿದೆ.

ಹರಿಹರ ತಾಲೂಕಿನಲ್ಲಿ 14.5 ಮಿ.ಮೀ, ಹೊನ್ನಾಳಿಯಲ್ಲಿ 13.1 ಮಿ.ಮೀ. ದಾವಣಗೆರೆಯಲ್ಲಿ 3 ಮಿ.ಮೀ, ನ್ಯಾಮತಿಯಲ್ಲಿ 12.1 ಮಿ.ಮೀ, ಜಗಳೂರಿನಲ್ಲಿ 5 ಮಿ.ಮೀ ಮಳೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...