ದಾವಣಗೆರೆ | ಗೃಹಜ್ಯೋತಿ ಕಾರ್ಯಕ್ರಮ ಚಾಲನೆ ವೇಳೆ ಪ್ರಧಾನಿ ನಿಂದನೆ ಸರಿಯಲ್ಲ: ಬಿಜೆಪಿ ಶಾಸಕ

Date:

ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಗೃಹಜ್ಯೋತಿ ಯೋಜನೆಯ ಚಾಲನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನಡೆದುಕೊಂಡ ರೀತಿ ಸರಿಯಲ್ಲ. ಪ್ರಧಾನಿಯವರು ಜನರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದು ಹೇಳಿಯೇ ಇಲ್ಲ ಎಂದು ಹರಿಹರ ಶಾಸಕ ಬಿ.ಪಿ ಹರೀಶ್ ಅಸಮಾಧಾನ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನ ಮುಖಂಡರು ಅಧಿಕಾರಕ್ಕೆ ಬರುವ ಮುನ್ನ ಕರೆಂಟ್ ‘ನಿಮಗೂ ಉಚಿತ – ನಮಗೂ ಉಚಿತ’ ಎಂದು ಹೇಳಿದ್ದರು. ಇದೀಗ ಕಂಡಿಷನ್‌ ಜೊತೆಗೆ ಯೋಜನೆ ಜಾರಿ ಮಾಡಿದ್ದಾರೆ. ಆದರೆ, ಕಾರ್ಯಕ್ರಮದಲ್ಲಿ ‘ಪ್ರಧಾನಿಯವರು 15 ಲಕ್ಷ ಹಾಕಲಿಲ್ಲ’ ಎಂದು ಸಚಿವರು ಪದೇ ಪದೇ ಹೇಳುವುದು ಸರಿಯಲ್ಲ. ಪ್ರಧಾನಿಯವರು 15 ಲಕ್ಷ ರೂಪಾಯಿಯ ಭರವಸೆ ನೀಡಿರುವ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ” ಎಂದು ಹೇಳಿದ್ದಾರೆ.

“ಗೃಹಜ್ಯೋತಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಒಬ್ಬ ಐಎಎಸ್ ಅಧಿಕಾರಿ ಕಾಂಗ್ರೆಸ್‌ ವಕ್ತಾರರಂತೆ ವರ್ತಿಸಿರುವುದು ಸರಿಯಲ್ಲ. ಅಧಿಕಾರಿಯೊಬ್ಬರು ಕಾಂಗ್ರೆಸ್‌ಗೆ ಮತ ಹಾಕಿದ್ದೀರಾ, ನಿಮಗೆ ಶೂನ್ಯ ಬಿಲ್ ಬಂದಿದೆ ನೋಡಿ ಎಂದು ಹೇಳಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಅಧಿಕಾರಿಗಳು ಹೀಗೆ ಮಾತನಾಡುವುದು ಉತ್ತಮ ನಡೆಯಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದಿರಾಗಾಂಧಿ ಕಾಲದಿಂದಲೂ ಗರೀಬಿ ಹಠಾವೋ ಎನ್ನುವ ಕಾಂಗ್ರೆಸ್‌ನವರಿಗೆ ದೇಶ ಬಡತನದಲ್ಲಿರುವುದೇ ಬೇಕು ಎನಿಸುತ್ತದೆ. ಕೋವಿಡ್ ಅವಧಿಯಲ್ಲಿ ಹಗರಣವಾಗಿದ್ದರೆ ತನಿಖೆ ಮಾಡಲಿ. ಹರಿವೆ ಹಾವು ಬಿಡುವುದು ಬೇಡ” ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ, “ಗೃಹಜ್ಯೋತಿ ಯೋಜನೆಯ ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಪಿ ಹರೀಶ್ ಭಾಗವಹಿಸಿದ್ದರು. ಈ ವೇಳೆ ಪ್ರಧಾನಿಯವರು ಅನ್ನಭಾಗ್ಯ ಯೋಜನೆಗೆ ಸ್ಪಂದಿಸಲಿಲ್ಲ ಎಂದು ಕಾಂಗ್ರೆಸ್‌ನವರು ಹೇಳಿದ್ದನ್ನು ಖಂಡಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ. ಶಾಸಕರು ಎಂದು ನೋಡದೆ ಅವಾಚ್ಯವಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಜಗದೀಶ್, ಶ್ರೀನಿವಾಸ್ ದಾಸಕರಿಯಪ್ಪ, ಲಿಂಗರಾಜ್, ಮಂಜಾನಾಯಕ್ ಇದ್ದರು….

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...