ದಾವಣಗೆರೆ | ಪ್ರಧಾನಿ, ಗೃಹ ಸಚಿವರ ವಿರುದ್ಧ ಕ್ರಮಕ್ಕೆ ವಕೀಲರ ಆಗ್ರಹ

Date:

ಮಣಿಪುರದ ಜನಾಂಗೀಯ ಗಲಭೆ,ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ರಾಷ್ಟ್ರಪತಿಗಳು ಸೂಕ್ತಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೀಪಲ್ಸ್‌ ಲಾಯರ್ಸ್ ಗಿಲ್ಡ್‌ ನೇತೃತ್ವದಲ್ಲಿ ವಕೀಲರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಕೀಲರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಮಣಿಪುರದಲ್ಲಿ ಕಳೆದ 82ದಿನಗಳಿಂದ ಜನಾಂಗೀಯ ಗಲಭೆ ನಡೆಯುತ್ತಿದೆ. 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 40 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯಗಳ ಹೆಗ್ಗಿಲ್ಲದೆ ನಡೆದಿವೆ. ಆದರೂ, ಪ್ರಧಾನಿ ಮೋದಿ ಆ ರಾಜ್ಯಕ್ಕೆ ಭೇಟಿ ನೀಡಿ, ಹಿಂಸಾಚಾರ ನಿಲ್ಲಿಸುವ ಪ್ರಯತ್ನ ಮಾಡಿಲ್ಲ” ಎಂದು ಕಿಡಿಕಾರಿದ್ದಾರೆ.

“ಇಂತಹ ಕೃತ್ಯಗಳನ್ನು ದೇಶದ ಸರ್ವೋಚ್ಛ ನ್ಯಾಯಾಲಯ ಖಂಡಿಸಿದ್ದು, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಪ್ರಧಾನಮಂತ್ರಿಗಳ ಹೇಳಿಕೆ ಜನರ ಕಣ್ಣೂರೆಸುವ ತಂತ್ರವಾಗಿದೆಯೇ ಹೊರತು, ಹಿಂಸಾಚಾರಕ್ಕೆ ಅಂತ್ಯವಾಡುವ ಉದ್ದೇಶವಿಲ್ಲ. ಅಲ್ಲಿನ ಗಲಭೆಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ. ಪ್ರಧಾನ ಮಂತ್ರಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕೇಂದ್ರಸರ್ಕಾರಕ್ಕೆ ದೇಶದ ಜನತೆಯ ನೆಮ್ಮದಿಗಿಂತ ಚುನಾವಣೆಯೇ ತುಂಬಾ ಪ್ರಾಮುಖ್ಯವಾಗಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಣಿಪುರದಲ್ಲಿ ನಡೆದಿರುವ ಜನಾಂಗೀಯ ಗಲಭೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೇರ ಹೊಣೆಯಾಗಿವೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಿರುವ ನಿರ್ಲಕ್ಷತನ ಮತ್ತು ತಪ್ಪಿಗೆ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರ ವಿರುದ್ಧ ರಾಷ್ಟ್ರಪತಿಗಳು ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ರಾಜಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಪೀಪಲ್ಸ್ ಲಾಯರ್ಸ್ ಗಿಲ್ಡ್‌ನ ಜಿಲ್ಲಾಧ್ಯಕ್ಷ ಅನೀಸ್ ಪಾಷ ,ಆಂಜನೇಯ ಗುರೂಜಿ, ಪ್ರಕಾಶ್ ಪಾಟೀಲ್, ಬೈರೇಶ್ವರ ಬಿ.ಎಂ., ಲೋಕಿಕೆರೆ ಪ್ರದೀಪ, ಹೆಚ್. ಎಂ.ನಾಯ್ಕ, ಸವಿತ.ಎಸ್‌. ಮಂಜುಳಾ, ನಾಗರಾಜ, ವಾಗೀಶ್ ಕಟಗಿಹಳ್ಳಿಮಠ, ಪ್ರಕಾಶ್ ಬಾತಿ, ಚಕ್ರವರ್ತಿ, ರುದ್ರೇಶ್, ಹನೀಫ್, ಗುರುಮೂರ್ತಿ, ಅಜಯ್, ಅಂಜಿನಪ್ಪ, ಶಿವರಾಜ್, ಕರಿಯಪ್ಪ, ಮಾಲತೇಶ್, ಪಾಪಣ್ಣ, ಮುಸ್ತಫಾ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...