ದಾವಣಗೆರೆ | ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ನಿಷ್ಠಾವಂತ ಕಾರ್ಯಕರ್ತರು ಕಣ್ಮರೆ: ಕೆಪಿಸಿಸಿ ಎಚ್ ದುಗ್ಗಪ್ಪ

Date:

ರಾಜ್ಯ ಕಾಂಗ್ರೆಸ್ ಸರ್ಕಾರವು ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಹಾಗೂ ಹಾಲಿ ಶಾಸಕರು, ಒಮ್ಮೆ ಅಧಿಕಾರ ಪಡೆದವರು, ಅಧಿಕಾರದಲ್ಲಿರುವವರ ಹೆಸರುಗಳೇ ಹೆಚ್ಚಾಗಿದೆ. ಪಕ್ಷಕ್ಕಾಗಿ ಸುಮಾರು 50 ವರ್ಷಗಳಿಂದ ಸೇವೆ ಸಲ್ಲಿಸಿರುವ ನಿಷ್ಠಾವಂತ ಕಾರ್ಯಕರ್ತರ ಹೆಸರುಗಳು ಕಣ್ಮರೆಯಾಗಿವೆ ಎಂದು ಕೆಪಿಸಿಸಿ ಸದಸ್ಯ ಎಚ್. ದುಗ್ಗಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, “ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು. ಈ ಹಿಂದೆಲ್ಲಾ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿಗೆ ಕಾರ್ಯಕರ್ತರನ್ನು ಕಡೆ ಗಣಿಸಿದ್ದೇ ಕಾರಣವಾಗಿದೆ. ಈಗಲೂ ಕಾರ್ಯಕರ್ತರನ್ನು ಕಡೆಗಣಿಸಿದರೆ ಮುಂಬರುವ ಚುನಾವಣೆಯನ್ನು ಎದುರಿಸುವುದು ಕಷ್ಟವಾಗುತ್ತದೆ. ಪಕ್ಷದಲ್ಲಿ ವಂಶ- ಪರಂಪರೆ ಸಂಸ್ಕೃತಿ ಈಗಲೂ ಹೆಚ್ಚಾಗುತ್ತಿದೆ. ಅಧಿಕಾರದಲ್ಲಿದ್ದವರ ಮಕ್ಕಳು, ಅಳಿಯ, ಹೆಂಡತಿ, ಮೊಮ್ಮಕ್ಕಳು ಹೀಗೆ ಅವರ ವಂಶದವರಿಗೆ ಟಿಕೇಟ್ ಕೊಡಿಸಲು ಬಹುತೇಕ ಪೈಪೋಟಿ ನಡೆಯುತ್ತದೆ” ಎಂದು ಅವರು ದೂರಿದರು.

ಪಕ್ಷ ಅಧಿಕಾರದಲ್ಲಿ ಇಲ್ಲದ ಸಮಯದಲ್ಲಿ ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವವನ್ನು ಸಿದ್ದರಾಮೋತ್ಸವವನ್ನಾಗಿ ಮಾಡಿ, ದಾವಣಗೆರೆ ಕಾರ್ಯಕರ್ತರು ಹತ್ತಾರು ಲಕ್ಷ ಜನರನ್ನು ಸೇರಿಸಿದ್ದರು. ರಾಜ್ಯದ 7 ಕೋಟಿ ಜನ ಮತ ಹಾಕಿ ಗೆಲ್ಲಿಸಿ, ಪಕ್ಷವನ್ನು ಸಿದ್ದರಾಮಯ್ಯ ನವರನ್ನು ಅಧಿಕಾರಕ್ಕೆ ತರಲು ಈ ಸಿದ್ದರಾಮೋತ್ಸವವೇ ಕಾರಣವಾಯಿತು. ಕಾಂಗ್ರೇಸ್ ಪಕ್ಷ ಹೀನಾಯ ಸ್ಥಿತಿಯಲ್ಲಿದ್ದಾಗ ದಾವಣಗೆರೆಯಲ್ಲಿನ ಸಿದ್ದರಾಮೋತ್ಸವ ಕಾರ್ಯಕ್ರಮ ಪಕ್ಷಕ್ಕೆ  ಅಪಾರ ಶಕ್ತಿ ತುಂಬಿತು. ಆದರೆ ಅವರು ಅಧಿಕಾರಕ್ಕೆ ಬಂದ ಮೇಲೆ ತಮ್ಮನ್ನು ಅಧಿಕಾರಕ್ಕೆ ತಂದ ದಾವಣಗೆರೆ ಕಾರ್ಯಕರ್ತರನ್ನೇ ಮರೆತಿದ್ದಾರೆ ಎಂದು ಅಸಹನೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬರಲು ದಾವಣಗೆರೆ ಕಾರ್ಯಕರ್ತರು ಪಟ್ಟ ಶ್ರಮ ಅಪಾರ. ಅದರ ಜೊತೆಗೆ ಡಿ. ಕೆ. ಶಿವಕುಮಾರ್‌ರವರು ಸಹ ತಮಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಸಿಎಂರವರೇ, ನಿಮ್ಮ ಕೈಯಲ್ಲೇ ಅಧಿಕಾರವಿದೆ. ಲೇಖನಿಯಿದೆ, ಆದರೂ ನೀವು ಏಕೆ ಕಾರ್ಯಕರ್ತರನ್ನು ಅಧಿಕಾರದಿಂದ ವಂಚಿತರನ್ನಾಗಿ ಮಾಡುತ್ತಿದ್ದೀರಿ? ಯಾವ ಕಾಣದ ಕೈ ನಿಮ್ಮನ್ನು ತಡೆಯುತ್ತಿದೆ? ದಯವಿಟ್ಟು ದಾವಣಗೆರೆ ಕಾರ್ಯಕರ್ತರಿಗೂ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ, ಗೌರವಿಸಿ ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...