ದಾವಣಗೆರೆ | ಮೋದಿಯವರು ಮೈಸೂರು ಮಹಾ ಸಂಸ್ಥಾನದ ಪ್ರತಿಧ್ವನಿಯಂತೆ ಕೆಲಸ ಮಾಡುತ್ತಿದ್ದಾರೆ: ಯದುವೀರ್ ಒಡೆಯರ್

Date:

ದಾವಣಗೆರೆಗೂ ಮೈಸೂರು ಅರಮನೆಗೂ ಅವಿನಾಭಾವ ಸಂಬಂಧವಿದೆ ಅದಕ್ಕೆ ಕಾರಣ ದಾವಣಗೆರೆ ಅಂದಿನ ಮೈಸೂರು ಮಹಾಸಂಸ್ಥಾನಕ್ಕೆ ಒಳಪಟ್ಟಿತ್ತು. ಮೋದಿಯವರು ಮೈಸೂರು ಮಹಾ ಸಂಸ್ಥಾನದ ಪ್ರತಿಧ್ವನಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದರು.

ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಬೃಹತ್ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಮಾತನಾಡಿದ ಅವರು, ದಾವಣಗೆರೆಯೊಂದಿಗಿನ ಒಡನಾಟದ ಬಗ್ಗೆ ಹೇಳಿದರು.

ಹಿಂದಿನಕಾಲದಲ್ಲಿ ಮೈಸೂರಿನ ಅರಸರು ಮಾಡಿದ ಅಭಿವೃದ್ಧಿ ಕಾರ್ಯದಂತೆ ಇಂದು ಮೋದಿಯವರು ಅಭಿವೃದ್ಧಿ ಕೈಗೊಂಡಿದ್ದಾರೆ. ಮೈಸೂರು ಬ್ರಾಂಡ್ ಮೂಲಕ ವಿಶ್ವ ವಿಖ್ಯಾತಿ ಪಡೆದಿದ್ದರು. ಆಧುನಿಕತೆಯ ಮೂಲಕ ಅನೇಕ ಯೋಜನೆಗಳನ್ನು ಕೈಗೊಂಡಿದ್ದರು.ಅದೇ ರೀತಿ ಪ್ರಧಾನಿಯವರು ಮೇಕ್‌ಇನ್ ಇಂಡಿಯಾ ಮೂಲಕ ಸ್ವದೇಶಿ ಉತ್ಪನ್ನಗಳ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಸೃಷ್ಟಿಸುವಂತಹ ಅವಕಾಶಗಳನ್ನು ನೀಡಿದ್ದಾರೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡುವಂತಹ ಯೋಜನೆಗಳನ್ನು ರೂಪಿಸಿದ್ದಾರೆ. ಮೀಸಲಾತಿ, ಮಹಿಳಾ ಸಬಲೀಕರಣ ಸೇರಿದಂತೆ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ನೆರವು ನೀಡಿದ್ದಾರೆ. ಪ್ರಧಾನಿಯವರು 56 ಯೋಜನೆಗಳ ಮೂಲಕ ದೇಶವನ್ನು ಮುನ್ನೆಲೆಗೆ ತಂದಿದ್ದಾರೆ ಎಂದರು.

ಮಹಿಳೆಯರು, ಯುವಕರಿಗೆ ಸ್ಟಾರ್ಟ್ ಅಪ್ ಸೃಷ್ಠಿಸಲು ಉತ್ತೇಜನ ನೀಡಿದ್ದಾರೆ. ಮೈಸೂರಿನ ಅರಸರಂತೆ ಹಿಂದೂ ಪರಂಪರೆ ಉಳಿಸುವಲ್ಲಿ ನಿರತರಾಗಿದ್ದಾರೆ. ರಾಮ ಜನ್ಮಭೂಮಿಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆ, ಕಾಶಿ ವಿಶ್ವನಾಥ ದೇಗುಲ ಅಭಿವೃದ್ಧಿ ಮಾಡಿದ್ದಾರೆ. ಅಂದಿನಕಾಲದಲ್ಲಿ ಮೈಸೂರು ಮಹಾಸಂಸ್ಥಾನ ಕೈಗೊಂಡ ಜನಪರ ಯೋಜನೆಗಳನ್ನು ಮೋದಿ ಮುಂದುವರೆಸಿದ್ದಾರೆ. ಭಾರತವನ್ನು ವಿಶ್ವಮಟ್ಟದಲ್ಲಿ ಎತ್ತಿಹಿಡಿದಿದ್ದಾರೆ ಎಂದರು.

ವಿಕಸಿತ ಭಾರತಕ್ಕಾಗಿ ಮೋದಿ ಕೈ ಬಲಪಡಿಸೋಣ ಅದಕ್ಕಾಗಿ ದಾವಣಗೆರೆ ಕ್ಷೇತ್ರದಲ್ಲಿ ಗಾಯತ್ರಿ ಸಿದ್ದೇಶ್ವರ್‌ಗೆ ಮತ ಹಾಕಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ಈ ವೇಳೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ನಾಗಪ್ಪ, ಬಿಜೆಪಿ ಮುಖಂಡರಾದ ಎಸ್.ಟಿ. ವೀರೇಶ್, ಪಿ. ಶ್ರೀನಿವಾಸ್, ವಾಣಿಭೂಷಣ್ ಸೇರಿದಂತೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...