ದಾವಣಗೆರೆ | ಕನ್ನಡೇತರ ನಾಮಫಲಕ ತೆರವು ಕಾರ್ಯಾಚರಣೆ

Date:

ದಾವಣಗೆರೆಯಲ್ಲಿ ಕನ್ನಡ ನಾಮಫಲಕ ಅಳವಡಿಸದ ವಾಣಿಜ್ಯ ಮಳಿಗೆಗಳು ಮತ್ತು ಇತರೆಡೆಗಳಲ್ಲಿ ನಾಮಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.

ಇತ್ತೀಚೆಗೆ, ಶೇ.60ರಷ್ಟು ನಾಮಪಲಕಗಳನ್ನು ಅಳವಡಿಸದ ಮಳಿಗೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಬುಧವಾರ ಕಾರ್ಯಾಚರಣೆ ಆರಂಭಿಸಿದ್ದಾರೆ.

ದಾವಣಗೆರೆ ನಗರದ ರೈಲ್ವೆ ಸ್ಟೇಷನ್ ಹಿಂಭಾಗ ಗಡಿಯಾರ ಕಂಬದಿಂದ ಮಂಡಿಪೇಟೆಯಲ್ಲಿ ಆಂಗ್ಲ ಭಾಷೆಯ ನಾಮಫಲಕಗಳನ್ನು ಎರಡು ಬದಿಗಳಲ್ಲಿ ತೆರವು ಗೊಳಿಸುವ ಕಾರ್ಯಚರಣೆ ನಡೆಯಿತು. ಈ ವೇಳೆ ಕೆಲವು ಅಂಗಡಿಯ ಮಾಲೀಕರು ಅವರು ಬರುವುದನ್ನು ಕಂಡು ತಾವೆ ಸ್ವತಃ ತೆರವುಗೊಳಿಸುತ್ತಿದ್ದರು. ಒಟ್ಟಿನಲ್ಲಿ ತಡವಾಗಿಯಾದರೂ ಕನ್ನಡ ಪರ ಆದೇಶದ ಪಾಲನೆಯಾಗುತ್ತಿರುವುದು ಕನ್ನಡ ಪ್ರಿಯರಲ್ಲಿ ಮತ್ತು ಹೋರಾಟಗಾರರಲ್ಲಿ ನಾಗರಿಕರಲ್ಲಿ ಸಂತಸ ಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‌ಈ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ ಮಾರುತಿ ಎರಡು ಮೂರು ತಂಡಗಳು ದಾವಣಗೆರೆಯಲ್ಲಿ ಶೇಕಡಾ 60ರಷ್ಟು ಕನ್ನಡ ಆದೇಶ ಪಾಲಿಸದ ನಾಮ ಫಲಕಗಳನ್ನು ತೆರವುಗೊಳಿಸಲು ಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಈ ಮುಂಚೆ ಹಲವು ಬಾರಿ ಆದೇಶ ಪಾಲಿಸದವರಿಗೆ ಎಚ್ಚರಿಸಿದ್ದರೂ , ಯಾರು ಆದೇಶ ಪಾಲನೆ ಮಾಡಿಲ್ಲವೋ ಅಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಎಲ್ಲೆಡೆಯೂ ತೆರವು ಗೊಳಿಸಬೇಕು ಎಂದು ಅಭಿಪ್ರಾಯ ಇದ್ದು, ದಾವಣಗೆರೆಯಲ್ಲಿ ಎಲ್ಲಾ ಕಡೆ ಹಂತ ಹಂತವಾಗಿ ತೆರವು ಗೊಳಿಸುವ ಕೆಲಸ ನಡೆಯುತ್ತದೆ ಎಂದು ತಿಳಿಸಿದರು.

ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯ ದಾವಣಗೆರೆ ಘಟಕ ಮಂಗಳವಾರ ಪ್ರತಿಭಟನೆ ನಡೆಸಿ ಆದೇಶ ಪಾಲನೆ ಮಾಡದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿತ್ತು. ನಿನ್ನೆ ನಡೆದ ದಾವಣಗೆರೆ ತಾಲೂಕು ಸಾಹಿತ್ಯ ಸಮ್ಮೇಳನದಲ್ಲೂ ಈ ಕುರಿತು ಕೂಗು ಕೇಳಿ ಬಂದಿತ್ತು.

ತೆರವು ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸಿಬ್ಬಂದಿಗಳಾದ ಆರೋಗ್ಯ ನಿರೀಕ್ಷಕ ರಾದ ಡಾ. ಚಂದ್ರಮೋಹನ್, ರಮೇಶ್ ಚಿನ್ನಿಕಟ್ಟೆ ವಿನಾಯಕ್, ರಾಘವೇಂದ್ರ, ಮಾರುತಿ, ಇನ್ನಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...