ದಾವಣಗೆರೆ | ಸಂವಿಧಾನ ಪೀಠಿಕೆ ಮೇಲೆ ಖಾಸಗಿ ಪ್ಲೆಕ್ಸ್‌; ಕ್ರಮಕ್ಕೆ ದಸಂಸ ಒತ್ತಾಯ

Date:

ದಾವಣಗೆರೆಯಲ್ಲಿ ಜಿಲ್ಲಾಡಳಿತದ ಅಂಬೇಡ್ಕರ್, ಗಾಂಧಿ ಚಿತ್ರ ಹಾಗೂ ಸಂವಿಧಾನ ಪೀಠಿಕೆ ಇರುವ ಪ್ಲೆಕ್ಸ್ ಮೇಲೆ ಖಾಸಗಿ ಪ್ಲೆಕ್ಸ್ ಹಾಕಲಾಗಿದ್ದು, ಅವುಗಳನ್ನು ತೆರವುಗೊಳಿಸಿ, ಕ್ರಮ ಕೈಗೊಳ್ಳಬೇಕೆಂದು ದಸಂಸ ಆಗ್ರಹಿಸಿದೆ.

75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ  ಭಗೀರಥ ಸರ್ಕಲ್‌ನಲ್ಲಿ ಅಳವಡಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮಾಗಾಂಧಿ ಮತ್ತು ಸಂವಿಧಾನ ಪೀಠಿಕೆ ಇರುವ ಪ್ಲೆಕ್ಸ್ ಮೇಲೆ (ಪುರೋಹಿತ ವೆಜ್) ಖಾಸಗಿ ಹೋಟೆಲ್‌ ಮಾಲೀಕರು ಅವರ ಅಂಗಡಿಯ ಪ್ರಚಾರದ  ಪ್ಲೆಕ್ಸ್ ಹಾಕಿದ್ದು, ರಾಷ್ಟ್ರೀಯ ನಾಯಕರು ಮತ್ತು ಸಂವಿಧಾನ ಪೀಠಿಕೆ ಇರುವ ಬ್ಯಾನರ್ ಮೇಲೆ ತಂತಿ ಇಂದ ಕಟ್ಟಿ ದೇಶ ದ್ರೋಹದ ಕೆಲಸವನ್ನು ಎಸಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಕೃತ್ಯದಿಂದ ಅಂಬೇಡ್ಕರ್ ಅನುಯಾಯಿಗಳಿಗೆ ಮತ್ತು ಅಂಬೇಡ್ಕರ್ ಸಂಘಟನೆಗಳಿಗೆ ಮತ್ತು ಅಂಬೇಡ್ಕರ್ ಅವರ ಸಮಸ್ತ ಅಭಿಮಾನಿಗಳಿಗೆ ಮತ್ತು ಡಿಎಸ್ಎಸ್ ಸಂಘಟನೆಗೆ ತೀವ್ರವಾದ ನೋವು ಉಂಟಾಗಿದೆ. ಈ ಅವಹೇಳನ ಕೆಲಸ ಮಾಡಿರುವ ಪುರೋಹಿತ ಹೋಟೆಲ್ ಮಾಲೀಕರ ಮೇಲೆ ಕ್ರಮ ಕೈ ಕೊಳ್ಳಬೇಕೆಂದು ಅಧಿಕಾರಿಗಳಿಗೆ ಮತ್ತು  ಜಿಲ್ಲಾಡಳಿತಕ್ಕೆ ಹೋರಾಟದ ಮೂಲಕ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಪ್ರದೀಪ್, ಮಂಜುನಾಥ್ ಆರ್, ಶಿವಶಂಕರ ಗಾಂಧಿನಗರ ಮತ್ತು ಮಾಗಡಿ ದ್ವಾರಕೀಶ್ ಶಿವಾನಂದಣ್ಣ ಮತ್ತು ಅಂಜಿನಪ್ಪ ವಕೀಲರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...