ದಾವಣಗೆರೆ | ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ

Date:

ಟೈಲರ್  ಕಲ್ಯಾಣ ಮಂಡಳಿ ಜಾರಿಗೆ ತರುವಂತೆ ಒತ್ತಾಯಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ಬಳಿ ಇಂದು (ಜ.31) ಎಐಟಿಯುಸಿ ಸಂಯೋಜಿತ ಟೈಲರ್ಸ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ.

ಈ ವೇಳೆ ಮಾತನಾಡಿದ ಟೈಲರ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ, ಆವರಗೆರೆ ಚಂದ್ರು, ರಾಜಕೀಯ ಅಧಿಕಾರಕ್ಕಾಗಿ ಕಿತ್ತಾಡುವುದನ್ನು ನಿಲ್ಲಿಸಿ ದುಡಿಯುವ ಜನರ ಹಿತ ಕಾಯುವಂತೆ ಸರ್ಕಾರಕ್ಕೆ ಮಾತಿನ ಮೂಲಕ ತಿವಿದ ಅವರು, ರಾಜ್ಯದಲ್ಲಿ ಸುಮಾರು 15 ಲಕ್ಷ ಜನ ಟೈಲರ್ ವೃತ್ತಿ ಮಾಡುತ್ತಿದ್ದು, ಅವರಿಗೆ ಕಲ್ಯಾಣ ಮಂಡಳಿ ಜಾರಿ ತರುವುದರ ಮೂಲಕ ಟೈಲರ್ ಕುಟುಂಬದವರ ಬದುಕಿಗೆ ಆಸರೆಯಾಗಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

2024ರ ಬಜೆಟ್‌ನಲ್ಲಿ ಟೈಲರ್ ಕಲ್ಯಾಣ ಮಂಡಳಿಯನ್ನು ಕೂಡಲೇ ಜಾರಿಗೆ ತರಬೇಕು ಎಂದರಲ್ಲದೆ , ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತರುವ ಕುರಿತು ಶೀಘ್ರದಲ್ಲೇ ಟೈಲರ್ ಸಂಘಟನೆಯಿಂದ ನಿಯೋಗದಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳು, ಕಾರ್ಮಿಕ ಮಂತ್ರಿಗಳು ಹಾಗೂ ಜವಳಿ ಖಾತೆ ಮಂತ್ರಿಗಳನ್ನು ಭೇಟಿ ಮಾಡಿ ಒತ್ತಾಯಿಸುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮುಖಂಡರುಗಳಾದ ಯಶೋದಮ್ಮ, ಸ್ಮಿತಾ, ಮಂಜಣ್ಣ, ಶಾರದಮ್ಮ ಮಾತನಾಡಿದರು. ಪ್ರತಿಭಟನೆಯಲ್ಲಿ ನೇತ್ರಾವತಿ, ಗದಿಗೇಶ, ಅನಸೂಯ, ಪಂಕಜ್, ಶಕುಂತಲಾ, ಶಿಲ್ಪ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.  ನಂತರ ಟೈಲರ್ ಸಂಘಟನೆಯ ಪ್ರತಿನಿಧಿಗಳು ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...