ದಾವಣಗೆರೆ | ರೈತರ ಮೇಲಿನ ಕೇಂದ್ರ ಸರ್ಕಾರದ ದಾಳಿ ಖಂಡಿಸಿ ಪ್ರತಿಭಟನೆ

Date:

ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದಾರೆ.

ದಾವಣಗೆರೆ ಜಿಲ್ಲೆಯ ಆನಗೋಡು ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡ ಉಮೇಶ್ ಆವರಗೆರೆ, “ಬಹಳ ಹಿಂದೆಯೇ ರೈತರ ಉತ್ಪನ್ನಗಳಿಗೆ ಎಂ.ಎಸ್ ಸ್ವಾಮಿನಾಥನ್ ಶಿಫಾರಸ್ಸಿನ ಸೂತ್ರದಂತೆ ಸಿ2+50% ಪ್ರಕಾರ ಎಂಎಸ್‌ಪಿಯನ್ನು ಶಾಸನಬದ್ದವಾಗಿ ಜಾರಿ ಮಾಡಬೇಕು. ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುಚ್ಚಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳವಾಗಬೇಕು. ರೈತರ ಆತ್ಮಹತ್ಯೆ ತಡೆಯಲು ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದರು.

“ರಾಷ್ಟ್ರೀಯ ಕನಿಷ್ಠ ವೇತನ ಮಾಸಿಕ 26,000 ರೂಗಳಿಗೆ ನಿಗದಿ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ, ಖಾಯಂ ಸ್ವರೂಪದ ಕೆಲಸದಲ್ಲಿ ತೊಡಗುವ ಕಾರ್ಮಿಕರ ಖಾಯಂಗೆ ಶಾಸನ ರೂಪಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

4 ಕಾರ್ಮಿಕ ಸಂಹಿತೆಗಳನ್ನು,ಎಫ್ ಟಿಐ ಪದ್ಧತಿಯನ್ನು ಹಾಗೂ ಕೆಲಸದ ಅವಧಿಯ ಹೆಚ್ಚಳವನ್ನು  ರದ್ದುಪಡಿಸಬೇಕು. ಅರಣ್ಯ ಹಕ್ಕು ಕಾಯ್ದೆ 2006ನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಕಾರ್ಪೋರೇಟ್ ಸ್ನೇಹಿ ರೈತ ಅರಣ್ಯ ಸಂರಕ್ಷಣಾ ತಿದ್ದುಪಡಿ ಕಾಯ್ದೆ 2023 ಹಾಗೂ ಜೀವ ವೈವಿಧ್ಯ ಕಾಯ್ದೆಯನ್ನು ರದ್ದುಪಡಿಸಬೇಕು. ಪ್ರತಿಯೊಬ್ಬರಿಗೂ ವಸತಿ ಹಕ್ಕು ಖಾತ್ರಿಪಡಿಸಬೇಕು. ಬಲವಂತದ ಭೂಸ್ವಾಧೀನ  ನಿಲ್ಲಿಸಿ ಪರಿಹಾರ ಕ್ರಮ ವೈಜ್ಞಾನಿಕ. ರೈತ ಸ್ನೇಹಿಯಾಗಿರಬೇಕು. ಬಗ‌ರ್ ಹುಕ್ಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ಉಳುಮ ರೈತರಿಗೆ ಭೂಮಿ ಹಕ್ಕು ಖಾತರಿಪಡಿಸಬೇಕು ಎಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹೊನ್ನೂರು ಮುನಿಯಪ್ಪ, ವರದರಾಜ, ಮಧು ತೊಗಲೇರಿ, ಭೀಮಪ್ಪ, ಐರಣಿ ಚಂದ್ರು, ತಿಪ್ಪೇಸ್ವಾಮಿ ಮತ್ತಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...