ದಾವಣಗೆರೆ | ಅಪ್ಪು ಅಗಲಿಕೆಯ ಚಿಂತೆಯಲ್ಲಿ ಊಟ ಬಿಟ್ಟಿದ್ದ ಯುವತಿ ಸಾವು

Date:

ನಟ ಪುನೀತ್‌ ರಾಜ್‌ಕುಮಾರ್‌ ಅಗಲಿಕೆಯಿಂದ ಮನನೊಂದಿದ್ದ ಯುವತಿ, ಅದೇ ಚಿಂತೆಯಲ್ಲಿ ಕ್ರಮೇಣ ಆಹಾರ ಸೇವನೆಯನ್ನೇ ತೊರೆದಿದ್ದರು. ಪರಿಣಾಮ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿ ಕೊನೆಯುಸಿರೆದಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ನಿವಾಸಿ ಕುಮಾರ ಹಾಗೂ ಮಂಜುಳಾ ದಂಪತಿ ಪುತ್ರಿ ಪ್ರೀತಿ ಮೃತ ದುರ್ದೈವಿ. ಪುನೀತ್‌ ಸಾವನ್ನಪ್ಪಿದ ನಂತರ ಯುವತಿ, ಪ್ರತಿ ದಿನ ಅಪ್ಪು ಫೋಟೋಗೆ ಪೂಜೆ ಮಾಡುತ್ತಿದ್ದರು. ಊಟ ಮಾಡುವುದನ್ನೂ ಬಿಟ್ಟಿದ್ದರು. ಇದರಿಂದಾಗಿ, ದೇಹದಲ್ಲಿ ರಕ್ತ ಕಡಿಮೆ ಆಗಿ ಕ್ರೇಟಿನ್ ಅಂಶ ಹೆಚ್ಚಾಗಿತ್ತು. ಅನಾರೋಗ್ಯಕ್ಕೆ ತುತ್ತಾಗಿದ್ದ ಆಕೆಯನ್ನು ಪೋಷಕರು ಆಸ್ಪತ್ರೆಗೆ ಸೇರಿಸಿದ್ದರು. ಆದರೂ, ಆಕೆ ಬದುಕುಳಿಯಲಿಲ್ಲ.

2017ರಲ್ಲಿ ಆರನೇ ತರಗತಿಯಲ್ಲಿ ಓದುತಿದ್ದ ಪ್ರೀತಿ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಎರಡೂ ಕಿಡ್ನಿಗಳು ವೈಫಲ್ಯವಾಗಿದ್ದರಿಂದ ಆಕೆಗೆ ಒಂದಾದರೂ ಕಿಡ್ನಿಯನ್ನು ಹಾಕಬೇಕೆಂದು ವೈದ್ಯರು ಹೇಳಿದ್ದರು. ಆದರೆ, ಪೋಷಕರು ಬಡವರಾಗಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಿಸುವುದು ಸವಾಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದಿದ್ದ ಪುನೀತ್‌ ರಾಜ್‌ಕುಮಾರ್‌, ಆಕೆಯನ್ನು ಬೆಂಗಳೂರಿಗೆ ಕರೆಸಿಕೊಂಡು 12.5 ಲಕ್ಷ ರೂ. ಆಸ್ಪತ್ರೆ ವೆಚ್ಚ ಭರಿಸಿ, ಶಸ್ತ್ರಚಿಕಿತ್ಸೆ ಮಾಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬಾಲಿವುಡ್‌ನಲ್ಲಿ ಆಂತರಿಕ ರಾಜಕಾರಣ ಕೊನೆಗೊಳ್ಳಬೇಕು: ಪ್ರಿಯಾಂಕಾ ಚೋಪ್ರಾ

ಪುನೀತ್‌ ಅಭಿಮಾನಿಗಳನ್ನು ಅಗಲಿದ ಬಳಿಕ ಆಕೆ ವಿಪರೀತ ದುಃಖಿತಳಾಗಿದ್ದಳು. ಅದೇ ಚಿಂತೆಯಲ್ಲಿ ದಿನಕಳೆದಂತೆ ಊಟ ಮಾಡುವುದನ್ನು ಕಡಿಮೆ ಮಾಡಿದ್ದ ಪ್ರೀತಿ, ಆಹಾರ ಸೇವನೆಯನ್ನು ತ್ಯಜಿಸಿದ್ದರು. ಇದೀಗ, ಆಕೆ ಕೊನೆಯುಸಿರೆಳೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...