ದಾವಣಗೆರೆ | ಗಣೇಶಮೂರ್ತಿ ಬಳಿ ಅಳವಡಿಸಿದ್ದ ವಿವಾದಿತ ಫ್ಲೆಕ್ಸ್‌ ತೆರವು: ಪೊಲೀಸರ ಕಾರ್ಯ ಯಶಸ್ವಿ

Date:

ದಾವಣಗೆರೆ ನಗರದ ಮಟ್ಟಿಕಲ್‌ನ ಗಣೇಶಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಅಳವಡಿಸಿದ್ದ ವಿವಾದಿತ ಫ್ಲೆಕ್ಸ್‌ ತೆರವುಗೊಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುರುವಾರ ರಾತ್ರಿ ನಿರ್ಮಾಣವಾಗಿದ್ದ ಬಿಗುವಿನ ವಾತಾವರಣ ಇಂದು ಮುಂಜಾನೆ ತಿಳಿಗೊಂಡಿದ್ದು, ಶಾಂತಿಯುತ ವಾತಾವರಣ ನಿರ್ಮಾಣವಾಗಿದೆ.

ಶಿವಾಜಿ ಮಹಾರಾಜ್ ಹಾಗೂ ಅಫ್ಜಲ್ ಖಾನ್ ನಡುವಿನ ಯುದ್ಧದ ಸನ್ನಿವೇಶದ ಆಕ್ಷೇಪಾರ್ಹ ಪ್ಲೆಕ್ಸ್ ತೆರವುಗೊಂಡಿದ್ದು, ಈ ಸ್ಥಳದಲ್ಲಿ ಶಿವಾಜಿಯ ಬೃಹತ್ ಚಿತ್ರವನ್ನು ಅಳವಡಿಸಲಾಗಿದೆ.

ನಗರದ ವೀರ ಸಾವರ್ಕರ್ ಯುವಕರ ಸಂಘ ಮಟ್ಟಿಕಲ್‌ನಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿಯ ಪೆಂಡಾಲ್ ಬಳಿ ಇತಿಹಾಸದ ಮಹನೀಯರ ಬೃಹತ್ ಗಾತ್ರದ ಪ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶಿವಾಜಿ ಚಿತ್ರ ಅಳವಡಿಕೆ

ಶಿವಾಜಿ ಹಾಗೂ ಅಫ್ಜಲ್‌ ಖಾನ್ ನಡುವಿನ ಯುದ್ಧದ ಸನ್ನಿವೇಶದ ಪ್ಲೆಕ್ಸ್‌ಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲವರು, ಕೋಮುಭಾವನೆ ಕೆರಳಿಸುವಂತಿರುವ ಫ್ಲೆಕ್ಸ್‌ ತೆರವುಗೊಳಿಸುವಂತೆ ಪೊಲೀಸರಿಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಡಿಜಿಟಲ್ ಆರೆಸ್ಟ್ ಪ್ರಕರಣ; ಪೊಲೀಸರಿಂದ ತನಿಖೆ, ಆರೋಪಿಯ ಬಂಧನ

ಗುರುವಾರ ರಾತ್ರಿ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು, ವಿವಾದಿತ ಫ್ಲೆಕ್ಸನ್ನು ತೆರವುಗೊಳಿಸುವಂತೆ ಗಣೇಶ ಉತ್ಸವ ಸಮಿತಿಗೆ ಸೂಚಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನೂರಾರು ಯುವಕರು, ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಇದರಿಂದ ಗುರುವಾರ ಮಧ್ಯರಾತ್ರಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸಂಘಪರಿವಾರದ ಸಂಘಟನೆಯ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಪೊಲೀಸರು ವಾತಾವರಣ ತಿಳಿಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...