ದಾವಣಗೆರೆ | ಗಣೇಶ ವಿಸರ್ಜನೆಯ ವೇಳೆ ಕಲ್ಲು ತೂರಾಟ: 30 ಮಂದಿ ಆರೋಪಿಗಳ ಬಂಧನ, ಪರಿಸ್ಥಿತಿ ಶಾಂತ

Date:

ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗುರುವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಹಲವಾರು ಮನೆಗಳು ಮತ್ತು ವಾಹನಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.

ಘಟನೆಯ ಸಂಬಂಧ ಈಗಾಗಲೇ 30 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಜನರು ಸಹಕಾರ ನೀಡಿದ್ದರಿಂದ ಶಾಂತಿಯುವ ವಾತಾವರಣವಿದೆ ಎಂದು ಪೂರ್ವ ವಲಯ ಐಜಿಪಿ ರಮೇಶ್ ಬಾನೋತ್ ಮಾಹಿತಿ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಗುರುವಾರ ಸಂಜೆ 6.30ರ ವೇಳೆಗೆ ಗಣೇಶ ವಿಸರ್ಜನೆಯ ಮೆರವಣಿಗೆ ನಡೆಯುತ್ತಿರುವಾಗ ಕಲ್ಲು ತೂರಾಟ ನಡೆಸಲಾಗಿದೆ. ಪೊಲೀಸರು ಸ್ಥಳದಲ್ಲೇ ಇದ್ದಿದ್ದರಿಂದ 8 ಗಂಟೆಯೊಳಗೆ ಪರಿಸ್ಥಿತಿಯನ್ನು ನಿಯಂತ್ರಿಸಿದ್ದೇವೆ. ಯಾವುದೇ ಅಮಾಯಕರನ್ನೂ ಬಂಧಿಸಿಲ್ಲ. ಬಂಧಿಸಲ್ಪಟ್ಟಿರುವ ಆರೋಪಿಗಳ ಪೈಕಿ 10 ಮಂದಿ ಆರೋಪಿಗಳು ಬಿಯರ್ ಬಾಟಲ್ ಹಿಡಿದುಕೊಂಡಿದ್ದು, ಪೊಲೀಸರ ಕೈಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚೆಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಾಟೆಯ ವಿರೋಧಿಸಿ ನಡೆಸಲಾಗಿದ್ದ ಪ್ರತಿಭಟನೆಯ ವೇಳೆ ಸತೀಶ್ ಪೂಜಾರಿ ಎಂಬಾತ ನೀಡಿದ ಪ್ರಚೋದನಕಾರಿ ಹೇಳಿಕೆಯಿಂದ ಈ ಅಶಾಂತಿ ಪರಿಸ್ಥಿತಿ ನಿರ್ಮಾಣವಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಗುರುವಾರ ತಡರಾತ್ರಿಯೇ ಕಾರ್ಯಾಚರಣೆ ನಡೆಸಿದ್ದು, ಈವರೆಗೆ ಎರಡೂ ಗುಂಪಿನ 30 ಜನರನ್ನು ಬಂಧಿಸಲಾಗಿದೆ” ಎಂದು ಐಜಿಪಿ ರಮೇಶ್ ಬಾನೋತ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಜಯಪುರ | ಲೆಕ್ಕಾಚಾರದ ವಿಚಾರ: ಗ್ರಾ.ಪಂ. ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಉಪಾಧ್ಯಕ್ಷೆ!

ಕಲ್ಲು ತೂರಾಟ ಘಟನೆಯಿಂದ ಬಂದೋಬಸ್‌ಗೆ ನಿಯುಕ್ತರಾಗಿದ್ದ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಅನ್ನಪೂರ್ಣ, ರಘು ಅವರಿಗೆ ಕಲ್ಲು ಬಡಿದು ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಗಲಭೆ ಆರಂಭವಾಗುತ್ತಿದ್ದಂತೆಯೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿತ್ತು. ನಗರದಲ್ಲಿ ಹೆಚ್ಚುವರಿಯಾಗಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಸದ್ಯ ವಾತಾವರಣ ಸಹಜ ಸ್ಥಿತಿಗೆ ಬಂದಿದೆ. ಅಂಗಡಿಮುಂಗಟ್ಟುಗಳು ಎಂದಿನಂತೆ ತೆರೆದಿವೆ. ಹಾಗಾಗಿ, 144 ಸೆಕ್ಷನ್ ಅಳವಡಿಸಿಲ್ಲ. ಶಾಂತಿ ಕಾಪಾಡಲು ಸಹಕರಿಸಿದ ಎಲ್ಲ ಸಾರ್ವಜನಿಕರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ಪೂರ್ವ ವಲಯ ಐಜಿಪಿ ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾಗಳಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ. ಕಲ್ಲು ತೂರಾಟ ಪ್ರಕರಣ ಸಂಬಂಧ ಎರಡೂ ಗುಂಪಿನವರ ವಿರುದ್ಧವೂ ಕೇಸು ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ್ದ ಬಗ್ಗೆ ಕೇಸು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಇದೇ ವೇಳೆ ಪೂರ್ವ ವಲಯ ಐಜಿಪಿ ರಮೇಶ್ ಬಾನೋತ್ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...