ದಾವಣಗೆರೆ | ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಕಿರುಕುಳ ಶಂಕೆ

Date:

ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೊನ್ನಾಳಿ ಮೂಲದ ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಶಿವಮೊಗ್ಗದ ಖಾಸಗಿ ಫೈನಾನ್ಸ್‌ನ ಸಾಲದ ಸುಳಿಗೆ ಸಿಲುಕಿ ನಲುಗಿದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.

ಭಾನುವಾರದಂದು ಪುಷ್ಪಲತಾ ಶಾಲೆಯ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಆದರೆ, ಶಾಲೆಯಿಂದ ವಾಪಸ್ ಆದ ಬಳಿಕ ಹೊನ್ನಾಳಿಯ ರಾಘವೇಂದ್ರ ಮಂಟಪದ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮನೆ ಕಟ್ಟಿಸಬೇಕೆಂಬ ಆಸೆ ಹೊಂದಿದ್ದ ಪತಿ ಹಾಲೇಶ್ ಹಾಗೂ ಪುಷ್ಪಲತಾ ಫೈನಾನ್ಸ್ ಕಂಪನಿ ಮೂಲಕ ಸುಮಾರು ₹38 ಲಕ್ಷ ಸಾಲ ಪಡೆದಿದ್ದರು. ಮರುಪಾವತಿ ಸಂಬಂಧ ಫೈನಾನ್ಸ್ ಸಿಬ್ಬಂದಿ ಹಣದ ಕಂತು ಹಾಗೂ ಬಡ್ಡಿ ಕಟ್ಟಲು ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. ಇದರಿಂದಾಗಿ ದಂಪತಿ ಆತಂಕಕ್ಕೆ ಒಳಗಾಗಿರಬಹುದು ಎಂದು ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಸಂವಿಧಾನವೇ ರಾಷ್ಟ್ರದ ಸರ್ವೋಚ್ಚ ಕಾನೂನು: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಸ್ಪಷ್ಟನೆ ನೀಡಿ, “ಶಿಕ್ಷಕಿ ತುಂಗಾಭದ್ರಾ ನದಿಗೆ ಹಾರಿರುವುದು ನಿಜ. ಆದ್ರೆ, ಫೈನಾನ್ಸ್ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಇಲ್ಲವೋ ಎಂಬುದು ತನಿಖೆಯಿಂದ ಇನ್ನಷ್ಟೇ ಗೊತ್ತಾಗಬೇಕಿದೆ. ಶಿವಮೊಗ್ಗದ ಫೈನಾನ್ಸ್ ನಲ್ಲಿ ₹35ರಿಂದ ₹40 ಲಕ್ಷ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ. ಯಾವ ವಿಚಾರಕ್ಕೆ ನದಿಗೆ ಹಾರಿದ್ದಾರೆ ಎಂಬ ಕುರಿತಂತೆ ಸ್ಪಷ್ಟತೆ ಇಲ್ಲ. ಶೀಘ್ರವೇ ತನಿಖೆ ಕೈಗೊಂಡು ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಲಾಗುವುದು. ಅಲ್ಲಿವರೆಗೆ ಯಾವುದೇ ಊಹಾಪೋಹ ಬೇಡ” ಎಂದು ತಿಳಿಸಿದರು.‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...