ದಾವಣಗೆರೆ | ನಾಮಫಲಕದಲ್ಲಿ ಕನ್ನಡವೇ ಮಾಯ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಕನ್ನಡ ನಾಮಫಲಕ ಕಡ್ಡಾಯ’ಕ್ಕಾಗಿ ಆಗ್ರಹಿಸಿ ನಡೆದ ಹೋರಾಟದ ಬೆನ್ನಲ್ಲೇ ದಾವಣಗೆರೆ ನಗರದಲ್ಲೂ ‘ಕನ್ನಡ ನಾಮಫಲಕ ಕಡ್ಡಾಯ’ದ ಕುರಿತಾದ ಗಟ್ಟಿ ಧ್ವನಿ ಎದ್ದಿದೆ. ಆದರೆ, ದಾವಣಗೆರೆ ನಗರದಲ್ಲಿನ ಹಲವು ಅಂಗಡಿ, ಹೋಟೆಲ್, ಮಳಿಗೆ, ವ್ಯಾಪಾರಿ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಮಾಯವಾಗಿದ್ದು, ಸಂಪೂರ್ಣ ಇಂಗ್ಲಿಷ್‌ ಹಾಗೂ ಹಿಂದಿಮಯವಾಗಿವೆ.

ಕನ್ನಡ ಸಂಘಟನೆಗಳ ಪ್ರತಿಭಟನೆ, ಕಪ್ಪು ಮಸಿ ಬಳಿಯುವ ಎಚ್ಚರಿಕೆಗೆ ಅನ್ಯ ಭಾಷೆಗಳ ನಾಮಫಲಕಗಳನ್ನು ಅಳವಡಿಸಿರುವವರು ‘ಕ್ಯಾರೆ’ ಎನ್ನುತ್ತಿಲ್ಲ. ನಗರದ ಹಲವು ಅಂಗಡಿ, ಹೋಟೆಲ್‌ ಸೇರಿದಂತೆ ಇನ್ನಿತರ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಕಣ್ಮರೆಯಾಗಿದೆ.

ನಗರದ ಪಿ.ಜೆ.ಬಡಾವಣೆ, ಆಂಜನೇಯ ಬಡಾವಣೆ, ಬಿ.ಇ.ಐ.ಟಿ. ಕಾಲೇಜು ರಸ್ತೆ, ಎ.ವಿ.ಕೆ. ರಸ್ತೆ, ಅಶೋಕ ರಸ್ತೆ, ಮಂಡಿಪೇಟೆ, ಎಚ್‌.ಎಂ.ರಸ್ತೆ, ಆಜಾದ್ ನಗರ, ಭಾಷಾ ನಗರ ಸೇರಿದಂತೆ ಪ್ರಮುಖ ರಸ್ತೆಗಳು, ವಾಣಿಜ್ಯ ಪ್ರದೇಶಗಳಲ್ಲಿರುವ ಮಳಿಗೆಗಳು, ಅಂಗಡಿ, ಹೋಟೆಲ್‌ ಹಾಗೂ ವಾಣಿಜ್ಯ ಸಂಸ್ಥೆಗಳ ಎದುರು ಇಂಗ್ಲಿಷ್‌ ಭಾಷೆಯ ನಾಮಫಲಕಗಳು ರಾರಾಜಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸುವಂತೆ ಒತ್ತಾಯಿಸಿ ಈ ಹಿಂದೆಯೂ ಕನ್ನಡ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಮನವಿಯನ್ನೂ ಸಲ್ಲಿಸಿದ್ದರು. ಆದರೂ ಪರಿಸ್ಥಿತಿ ಕಿಂಚಿತ್ತೂ ಬದಲಾಗಿಲ್ಲ.

ಜಾಹೀರಾತು ಫ್ಲೆಕ್ಸ್‌ಗಳಲ್ಲಿಲ್ಲ ಕನ್ನಡ ಶಾಲಾ-ಕಾಲೇಜುಗಳ ಪ್ರವೇಶಾತಿ, ತರಬೇತಿ ಶಿಬಿರ, ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಪಟ್ಟಂತೆ ನಗರದ ಹಲವೆಡೆ ಅಳವಡಿಸಿರುವ ಹೆಚ್ಚಿನ ಫ್ಲೆಕ್ಸ್‌ಗಳಲ್ಲಿ ಕನ್ನಡ ಭಾಷೆ ಇಲ್ಲವಾಗಿದ್ದು, ಇಂಗ್ಲಿಷ್‌ ಭರಾಟೆ ಹೆಚ್ಚಿದೆ. ಫ್ಲೆಕ್ಸ್‌, ಬ್ಯಾನರ್‌ಗಳಲ್ಲೂ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್‌.ರಾಮೇಗೌಡ ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯನ್ನು ಬಳಸದ ನಾಮಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ನಗರದಲ್ಲಿ ಅಳವಡಿಸುವ ನಾಮಫಲಕಗಳು ಶೇ.60 ಕನ್ನಡ ಭಾಷೆ, ಶೇ. 40ರಷ್ಟು ಇತರ ಭಾಷೆಯಲ್ಲಿ ಇರಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಾಲಿಕೆ ಮುಂದಾಗಿದೆ. ಈ ನಿಯಮ ಪಾಲಿಸುವಂತೆ ಬಂಟಿಂಗ್ಸ್‌, ಫ್ಲೆಕ್ಸ್‌, ಬ್ಯಾನರ್‌ ತಯಾರಿಸುವವರಿಗೆ ಆರೋಗ್ಯ ನಿರೀಕ್ಷಕರ ಮೂಲಕ ನೋಟಿಸ್‌ ನೀಡಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಡಾ.ಚಂದ್ರಮೋಹನ್‌ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...