ದಾವಣಗೆರೆ | ಅಕ್ರಮ ಮದ್ಯ ಮಾರಾಟ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ತಾತ್ಕಾಲಿಕ ವಾಪಸ್‌

Date:

ಕಳೆದ ಹದಿನೈದು ದಿನಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ತಡೆ ಹಾಕಲು ಕ್ರಮಕೈಗೊಳ್ಳಬೇಕು ಎಂದು ಚನ್ನಗಿರಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ದಲಿತಪರ, ರೈತಪರ, ಪ್ರಗತಿಪರ, ಕನ್ನಡಪರ, ಸಂಘಟನೆಗಳ ಹೋರಾಟಗಾರರ ವೇದಿಕೆ ನಿರ್ಧರಿಸಿತು.

ಅಕ್ರಮ ಮದ್ಯ ಮಾರಾಟಕ್ಕೆ ತಡೆ ಹಾಕಬೇಕು ಎಂಬ ಸಂಘಟನೆಗಳ ಬೇಡಿಕೆಗೆ ಅಪರ ಜಿಲ್ಲಾಧಿಕಾರಿಗಳು ಹಾಗೂ ಅಪರ ಪೊಲೀಸ್ ವರಿಷ್ಠಾಧಿಕಾರಿಗಳ ಭರವಸೆಯಿತ್ತ ಹಿನ್ನೆಲೆ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎನ್ನಲಾಗಿದೆ.

ನಗರದ ಅಬಕಾರಿ ಕಚೇರಿ ಮುಂದೆ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ದಾವಣಗೆರೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಪೊಲೀಸ್ ವರಿಷ್ಠಾಧಿಕಾರಿಗಳು  ಭೇಟಿ ನೀಡಿ ಹೋರಾಟಗಾರರ ಮನವೊಲಿಸಲು ಮುಂದಾದರು. ಅವರ ಮನವಿ ಮೇರೆಗೆ ಬೇಡಿಕೆ ಈಡೇರಿಸಲು 15 ದಿನಗಳ ಗಡುವು ನೀಡಿ ಹೋರಾಟಕ್ಕೆ ತಾತ್ಕಾಲಿಕ ತಡೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
add8f96f eee8 4906 9695 68fcc3f2703f

ಈ ವೇಳೆ ಮಾತನಾಡಿದ ವೇದಿಕೆ ಮುಖಂಡ ರಂಗನಾಥ್ ಬಸಾಪುರ ʼಕೂಡಲೇ ಕ್ರಮ ಕೈಗೊಂಡು ತಾಲೂಕಿನ ಅಕ್ರಮ ಮದ್ಯ ಮಾರಾಟ ನಿಲ್ಲಿಸಬೇಕು. 15 ದಿನಗಳ ಒಳಗಾಗಿ ಬೇಡಿಕೆ ಈಡೇರದಿದ್ದರೆ ತಾಲೂಕು ಕಚೇರಿ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡುವ ಮೂಲಕ ಹೋರಾಟ ಹಿಂಪಡೆದಿದ್ದೇವೆ. ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಯುವಜನತೆ, ಗಂಡಸರು ಸೇರಿದಂತೆ ಅನೇಕ ಕುಟುಂಬಗಳು ಬಲಿಯಾದ ಘಟನೆಗಳು ನೆಡೆಯುತ್ತಿವೆ.‌ 14-16 ವಯಸ್ಸಿನ ಚಿಕ್ಕ ಚಿಕ್ಕ ಮಕ್ಕಳು ಈ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಬಡಕುಟುಂಬಗಳಲ್ಲಿ ದುಡಿವ ಹಣವನ್ನು ಹೆಂಡಸಾರಾಯಿಗೆ ಖರ್ಚು ಮಾಡಿ, ಆರೋಗ್ಯ ಸಮಸ್ಯೆಗೆ ಒಳಗಾಗಿ, ಅವಲಂಬಿತರು ಅನಾಥವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಪ್ಪಿಸಲು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಕೆಲಸ‌ಮಾಡಬೇಕು. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟಕ್ಕೆ ಮುಂದಾಗುತ್ತೇವೆʼ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್‌ ನೆಲಕ್ಕುರುಳುವ ಸಾಧ್ಯತೆ: ದಸಂಸ ಆತಂಕ

ಪ್ರತಿಭಟನಾ ವೇದಿಕೆಯಲ್ಲಿ ಮದ್ಯ ವಿರೋಧಿ ಹೋರಾಟಗಾರ ಕುಭೇಂದ್ರ ಸ್ವಾಮಿ, ದಸಂಸ ಸಂಚಾಲಕ ಕೃಷ್ಣಪ್ಪ, ಮಾದಿಗ ಸಮಾಜದ ಅಧ್ಯಕ್ಷ ಮಂಜುನಾಥ, ಗಾಂಧಿನಗರ ಚಿತ್ರಲಿಂಗಪ್ಪ, ಮಾಚನಾಯಕನಹಳ್ಳಿ ಮಂಜುನಾಥ್, ಕೋಗಲೂರು ಪ್ರಕಾಶ್, ನೀತಿಗೆರೆ ಮಂಜಪ್ಪ, ಹರೀಶ್, ಸಲ್ಮಾ ಆಸ್ಪಿಯಾ ರಿದಾ, ಉಮಾಪತಿ ಹಾಗೂ ಇನ್ನಿತರ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...