ದಾವಣಗೆರೆ | ಬ್ಯಾಂಕ್ ಲಾಕರ್‌ನಲ್ಲಿದ್ದ ಚಿನ್ನವನ್ನೇ ಕದ್ದ ಕಳ್ಳರು

Date:

ಬ್ಯಾಂಕ್‌ಗಳಲ್ಲಿಯೇ ದರೋಡೆ ಮಾಡುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಇದೀಗ, ದಾವಣಗೆರೆಯಲ್ಲಿಯೂ ಅಂಥದ್ದೇ ಪ್ರಕರಣ ನಡೆದಿದ್ದು, ಬ್ಯಾಂಕ್‌ ಲಾಕರ್‌ನಲ್ಲಿ ಇರಿಸಲಾಗಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ದರೋಡೆ ಪ್ರಕರಣ ನಡೆದಿದೆ. ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆಕೋರರು ಚಿನ್ನಾಭರಣೆವನ್ನು ದೋಚಿಸಿದ್ದಾರೆ. ಕಳ್ಳರ ಬಂಧನಕ್ಕಾಗಿ ಪೊಲೀಸರ ಐದು ತಂಡವನ್ನು ರಚಿಸಲಾಗಿದೆ. ಜೊತೆಗೆ ಶ್ವಾನ ದಳವನ್ನೂ ನಿಯೋಜಿಸಲಾಗಿದೆ.

ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶಿಲನೆ ನಡೆಸಿದ್ದಾರೆ. ಬೆರಳಚ್ಚು ತಂಡವು ಬ್ಯಾಂಕ್‌ನಲ್ಲಿ ಸಾಕ್ಷ್ಯ ಸಂಗ್ರಹಿಸಿ, ಪ್ರಯೋಗಕ್ಕೆ ಒಳಪಿಸಿದೆ. ಪೊಲೀಸರ ತಂಡಗಳು ಎಲ್ಲ ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಳ್ಳುವುದರಲ್ಲಿ ನಿರತವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...