ದಾವಣಗೆರೆ | ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತಾಧಿಕಾರಿಗಳ ಮೌನ ಪ್ರತಿಭಟನೆ

Date:

ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ರಾಜ್ಯಾದ್ಯಂತ ನೆಡೆಸುತ್ತಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ತಾಲೂಕು ಕಚೇರಿ ಮುಂಬಾಗ ಕುವೆಂಪು ಪುತ್ಥಳಿ ಬಳಿ ಡಾ. ಬಿ ಆರ್ ಅಂಬೇಡ್ಕರ್, ಮಹಾತ್ಮಗಾಂಧಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕಪ್ಪುಬಟ್ಟೆ ಧರಿಸಿ ಮೌನ ಪ್ರತಿಭಟನೆಗೆ ಮುಂದಾಗಿದ್ದಾರೆ.

“ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು, ಅಂತರ್‌ ಜಿಲ್ಲಾ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರೂಪಿಸಬೇಕು. ನ್ಯಾಯಲಯ ಪ್ರಕರಣ ಹಿನ್ನೆಲೆಯಲ್ಲಿ ಕಳೆದ 4 ವರ್ಷಗಳಿಂದ ಬಡ್ತಿ ತಡೆಹಿಡಿಯಲಾಗಿದೆ. ಸರ್ಕಾರ ಪ್ರಕರಣ ಇತ್ಯರ್ಥ ಮಾಡಿ ಬಡ್ತಿಗೆ ಅವಕಾಶ ಮಾಡಿಕೊಡಬೇಕು, ಗ್ರಾಮ ಆಡಳಿತಾಧಿಕಾರಿಗಳದ್ದು ತಾಂತ್ರಿಕ ಹುದ್ದೆಯೆಂದು ಪರಿಗಣಿಸಬೇಕು” ಎಂದು ಒತ್ತಾಯಿಸಿದರು.

1001563749
ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟ ಮುಷ್ಕರ

ಈ ವೇಳೆ ಜಗಳೂರು ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಎಚ್ ಅರುಣ್ ಕುಮಾರ್ ಈ ದಿನ ಡಾಟ್ ಕಾಮ್‌ನೊಂದಿಗೆ ಮಾತನಾಡಿ, “2024 ಸೆ.26ರಿಂದ ಅಕ್ಟೋಬರ್ 3ರವರೆಗೆ ನಡೆದ ರಾಜ್ಯವ್ಯಾಪಿ ಮುಷ್ಕರದಂದು ನಡೆಸಲಾಗಿದ್ದ ಮೊದಲ ಹಂತದ ಪ್ರತಿಭಟನೆಯಲ್ಲಿ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಭರವಸೆಯಂತೆ ಪ್ರತಿಭಟನೆ‌ ಹಿಂಪಡೆಯಲಾಗಿತ್ತು. ಈ ವೃಂದದ ನೌಕರರ ಬೇಡಿಕೆ ಈವರೆಗೂ ಈಡೇರಿಸಿಲ್ಲ. ಅಲ್ಲದೆ ಪ್ರತಿಭಟನೆ ಪೂರ್ವಕ್ಕಿಂತಲೂ ಅಧಿಕ ಕಾರ್ಯಭಾರದ ಒತ್ತಡ ಉಂಟಾಗಿದೆ. ಕೂಡಲೇ ತಾಂತ್ರಿಕ ಸಮಸ್ಯೆ ಈಡೇರಿಸಬೇಕು. ಕಚೇರಿಗಳಿಗೆ ಮೂಲಸೌಕರ್ಯ ಒದಗಿಸಬೇಕು. ಅನುಕಂಪದ ನೇಮಕಾತಿ ವೃಂದ ಮತ್ತು ನೇಮಕಾತಿ ತಿದ್ದುಪಡಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಘನತೆಯ ಸಾವಿನ ಹಕ್ಕು; ಕರ್ನಾಟಕದ ಮೊದಲ ಫಲಾನುಭವಿಯಾಗಲು ನಿವೃತ್ತ ಶಿಕ್ಷಕಿ ಕರಿಬಸಮ್ಮ ತವಕ

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ವಿನಾಯಕ, ಪದಾಧಿಕಾರಿಗಳಾದ ಮಹೇಶ್, ಶಿವರಾಜ್, ಮಲ್ಲಿಕಾರ್ಜುನ್, ದಿಲೀಪ್, ಕೋಟೆಪ್ಪ, ಕೊಟ್ರೇಶ್, ಮಾರುತಿ‌, ಕೆ ಹೆಚ್ ನೇತ್ರಾಬಾಯಿ, ಸರ್ವಶ್ರೀ, ಸುವರ್ಣ, ಕೀರ್ತಿಕುಮಾರಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...