ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ದೇಶದಾದ್ಯಂತ ಕರೆ ಮೇರೆಗೆ ಪ್ರತಿಭಟನೆ ನಡೆಸಿದ ಕಾರ್ಮಿಕರು ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ಆವರಗೆರೆ ಉಮೇಶ್ ಮಾತನಾಡಿ, ರಾಜ್ಯಾದ್ಯಂತ ಹಲವಾರು ನಕಲಿ ಕಟ್ಟಡ ಕಾರ್ಮಿಕರ ಕಾಡುಗಳು ಚಾಲ್ತಿಯಲ್ಲಿವೆ. ಇವುಗಳನ್ನು ಕೂಡಲೇ ರದ್ದುಪಡಿಸಬೇಕೆಂದು ಕಳೆದ ಆರು ತಿಂಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆದರೆ, ಕಾರ್ಮಿಕ ಇಲಾಖೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಟ್ಟಡ ಕಾರ್ಮಿಕ ಮಂಡಳಿ ನೀಡುತ್ತಿರುವ ಲ್ಯಾಪ್ ಟಾಪ್‌ಗಳು ಕಳಪೆಯಾಗಿವೆ. ಒಂದು ಲ್ಯಾಪ್ ಟಾಪ್ ಬೆಲೆ ಮಾರುಕಟ್ಟೆಯಲ್ಲಿ 32,000 ಇದ್ದು, ಅದನ್ನ 72,000 ರೂ ಗಳಿಗೆ ಖರೀದಿ ಮಾಡಲಾಗಿದೆ ಎಂದು ತೋರಿಸಿದ್ದಾರೆ. ಇದು ಅಕ್ಷಮ್ಯ, ದುರಾಡಳಿತಕ್ಕೆ ಹಿಡಿದ ಕೈಗನ್ನಡಿ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಆಗಿರುವ ಲೋಪದೋಷಗಳನ್ನ ಸರಿಪಡಿಸಿ ಕಟ್ಟಡ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂಕ್ತ ರೀತಿಯಲ್ಲಿ ಗುಣಮಟ್ಟದ ಪರಿಕರಗಳನ್ನು ನೀಡಬೇಕು. ಅವರಿಗೆ ಜೀವನ ಭದ್ರತೆ ಒದಗಿಸಬೇಕು. ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಅನಾಹುತ ಆದಲ್ಲಿ 5 ಲಕ್ಷ ರೂ. ಪರಿಹಾರ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘಟನೆ ಅಧ್ಯಕ್ಷ ಸಿ. ಲಕ್ಷ್ಮಣ್, ಗೌರವಾಧ್ಯಕ್ಷ ರಾಘವೇಂದ್ರ ನಾಯರಿ, ಐರಣಿ ಚಂದ್ರು ಹಾಗೂ ಪುರಂದರ ಲೋಕಿಕೆರೆ ಅವರು ಹೋರಾಟದ ಹಾಡುಗಳನ್ನು ಹಾಡಿ ಗಮನ ಸೆಳೆದರು.

ಮೆರವಣಿಗೆಯಲ್ಲಿ ನೂರಾರು ಕಟ್ಟಡ ಕಾರ್ಮಿಕರು ಸೇರಿದಂತೆ ಜಿಲ್ಲೆಯ ಜಗಳೂರು,  ಹೊನ್ನಾಳಿ, ಚನ್ನಗಿರಿ, ಹರಿಹರ,  ತಾಲೂಕಿನ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...