ಉಡುಪಿ | ಕೊಲ್ಲೂರು ಸೌಪರ್ಣಿಕ ನದಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪತ್ತೆ

Date:

ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌಪರ್ಣಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಬೆಂಗಳೂರು ಮೂಲದ ಮಹಿಳೆಯ ಮೃತದೇಹ ಇಂದು ಮಧ್ಯಾಹ್ನ ವೇಳೆ ಮಾವಿನಕಾರು ಬಳಿ ಪತ್ತೆಯಾಗಿದೆ.

ಮೃತರನ್ನು ಬೆಂಗಳೂರಿನ ತ್ಯಾಗರಾಜ ನಗರದ ಗೋವಿಂದರಾಜು ಎಂಬವರ ಮಗಳು ವಸುಧ ಚಕ್ರವರ್ತಿ(45) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಆ.27ರಂದು ಕೊಲ್ಲೂರಿಗೆ ಆಗಮಿಸಿದ್ದು, ಇದೇ ಚಿಂತೆಯಲ್ಲಿ ಸೌಪರ್ಕಣಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

WhatsApp Image 2025 08 30 at 7.05.49 AM

ನೀರಿನ ರಭಸಕ್ಕೆ ಮೃತದೇಹ ಕೊಚ್ಚಿಕೊಂಡು ಹೋಗಿದ್ದು, ಕಳೆದ ಎರಡು ದಿನಗಳಿಂದ ಕೊಲ್ಲೂರು ಪೊಲೀಸರು, ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ವಸುಧ ನದಿಗೆ ಹಾರಿದ ಸ್ಥಳದಿಂದ ಸುಮಾರು 3ಕಿ.ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...