ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಗಡುವು; ಆಯುಕ್ತ ಮಹೇಶ್ವರ್ ರಾವ್ ಹೇಳಿದ್ದೇನು?

Date:

ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಮಾರ್ಚ್ 2026ರ ವೇಳೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬನ್ನೇರುಘಟ್ಟ ರಸ್ತೆ ಸಕಲವಾರ ಗ್ರಾಮದ ಸೆಗ್ಮೆಂಟ್ ಕಾಸ್ಟಿಂಗ್ ಯಾರ್ಡ್ ಗೆ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಮೇಲ್ಸೇತುವೆಗೆ ಕಾಸ್ಟಿಂಗ್ ಮಾಡುವ ಕಾರ್ಯವನ್ನು ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು.

“ಈಜೀಪುರ ಮುಖ್ಯ ರಸ್ತೆಯಲ್ಲಿ 2.38 ಕಿ.ಮೀ ಉದ್ದದ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದೆ. ಮೇಲ್ಸೇತುವೆಗೆ ಒಟ್ಟು 762 ಸೆಗ್ಮೆಂಟ್ ಕಾಸ್ಟಿಂಗ್‌ಗಳು ಬರಲಿದ್ದು, ಈಗಾಗಲೇ 437 ಸೆಗ್ಮೆಂಟ್ ಕಾಸ್ಟಿಂಗ್ ಅಳವಡಿಸಲಾಗಿದೆ. ಇನ್ನು 325 ಸೆಗ್ಮೆಂಟ್ ಕಾಸ್ಟಿಂಗ್ ಅಳವಡಿಸಬೇಕಿದೆ. ಈ ಸಂಬಂಧ ಪ್ರತಿ ತಿಂಗಳು 45 ಸೆಗ್ಮೆಂಟ್ ಗಳನ್ನು ಸಿದ್ದಪಡಿಸಿ ಅಳವಡಿಸಬೇಕು” ಎಂದು ಸೂಚಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 18 at 1.22.53 PM

“ಸೆಗ್ಮೆಂಟ್ ಕಾಸ್ಟಿಂಗ್ ಅಳವಡಿಸುವ ಕಾಮಗಾರಿಗೆ ವೇಗ ನೀಡಿ ಕಾಸ್ಟಿಂಗ್ ಅಳವಡಿಸುವ ಪ್ರಕ್ರಿಯೆಯನ್ನು ವರ್ಷಾಂತ್ಯದೊಳಗಾಗಿ ಪೂರ್ಣಗೊಳಿಸಬೇಕು. ಇನ್ನುಳಿದ ಕಾಮಗಾರಿಯನ್ನು ಮಾರ್ಚ್ 2026ರ ಒಳಗಾಗಿ ಪೂರ್ಣಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿ ಸೆಂಟ್ ಜಾನ್ಸ್ ಆಸ್ಪತ್ರೆ ಹಾಗೂ ಸೆಂಟ್ ಜಾನ್ಸ್ ಹಾಸ್ಟೆಲ್ ಬಳಿಯ 2 ಕಡೆ ಭೂಸ್ವಾಧೀನಪಡಿಸಿಕೊಳ್ಳಬೇಕಾಕಿದ್ದು, ಈ ಸಂಬಂಧ ಈಗಾಗಲೇ ಸಂಬಧಪಟ್ಟವರ ಜೊತೆ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಶೀಘ್ರ ರ‍್ಯಾಂಪ್ ಕಾಮಗಾರಿಯನ್ನು ಪ್ರಾರಂಭಿಸಿ ಪೂರ್ಣಗೊಳಿಸಿ” ಎಂದು ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯ ಅಭಿಯಂತರ ಡಾ. ರಾಘವೇಂದ್ರ ಪ್ರಸಾದ್ ಮಾತನಾಡಿ, “ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ರೂಪುರೇಶೆಗಳನ್ನು ಸಿದ್ದಪಡಿಸಿಕೊಂಡು ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ. ಮೇಲ್ಸೇತುವೆಯಲ್ಲಿ ಕಾಸ್ಟಿಂಗ್ ಸೆಗ್ಮೆಂಟ್ ಎರೆಕ್ಷನ್ ಅನ್ನು ರಾತ್ರಿ 11 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಮಾತ್ರ ಮಾಡಲಾಗುತ್ತಿದ್ದು, ಇರುವ ಸಮಯದಲ್ಲಿ ತ್ವರಿತವಾಗಿ ಕೆಲಸ ಮಾಡಲಾಗುತ್ತಿದೆ. ಸಂಚಾರ ದಟ್ಟಣೆ ನಡುವೆ ಕೆಲಸ ಮಾಡಲಾಗುತ್ತಿದೆ. ಇನ್ನು ಪಾದಚಾರಿ ಮಾರ್ಗ ಕಾಮಗಾರಿಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಮೇಲ್ಸೇತುವೆ ಕಾಮಗಾರಿ ಆಗಿರುವ ಕೆಳಭಾಗದಲ್ಲಿ ಡಾಂಬರೀಕರಣ ಮಾಡಲಾಗಿದ್ದು, ಇತರೆಡೆ ಪ್ರಗತಿಯಲ್ಲಿದೆ‌. ಶೋಲ್ಡರ್ ಡ್ರೈನ್ ಹಾಗೂ ಮೀಡಿಯನ್ ಕೆಲಸ ಪ್ರಗತಿಯಲ್ಲಿದೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರು | ಮೂಡಬಿದ್ರೆ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ: ಉಪನ್ಯಾಸಕರಿಬ್ಬರು ಸೇರಿ ಮೂವರ ಬಂಧನ

ಈ ವೇಳೆ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...