ಬೀದರ್ |‌ ಸಾಲದ ಹೊರೆ : ಒಂದೇ ದಿನ ಇಬ್ಬರು ರೈತರ ಆತ್ಮಹತ್ಯೆ

Date:

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ.

ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಯುವ ರೈತ ಕಾರ್ತಿಕ್ (21) ಎಂಬುವವರು ಖಾನಾಪುರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಕಾರ್ತಿಕ್ ಬೇರೆಯವರ ಜಮೀನು ಗುತ್ತಿಗೆ ಪಡೆದು ಬೇಸಾಯ ಮಾಡುವುದಕ್ಕಾಗಿ ಬ್ಯಾಂಕ್‌ ಹಾಗೂ ಖಾಸಗಿಯವರ ಬಳಿ ಕೈಸಾಲ ಸೇರಿ ಒಟ್ಟು ₹4 ಲಕ್ಷ ಸಾಲ ಪಡೆದಿದ್ದರು. ನಿರೀಕ್ಷೆಯಂತೆ ಬೆಳೆ ಬೆಳೆಯದೆ ಸಂಕಷ್ಟಕ್ಕೆ ಸಿಲುಕಿದ್ದರು. ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಧನ್ನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾವಿಗೆ ಹಾರಿ ರೈತ ಆತ್ಮಹತ್ಯೆ :

ಬಸವಕಲ್ಯಾಣ ತಾಲ್ಲೂಕಿನ ಇಲ್ಲಾಳ ಗ್ರಾಮದ ರೈತ ಜಗದೀಶರೆಡ್ಡಿ ಪ್ರಲ್ಹಾದರೆಡ್ಡಿ (49) ತಮ್ಮ ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಮಂಗಳವಾರ ನಸುಕಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಈ ಹಿಂದೆ ಎರಡೂವರೆ ಎಕರೆ ಜಮೀನು ಇತ್ತು. ರೇಷ್ಮೆ ಹಾಗೂ ಇತರೆ ಬೆಳೆ ಬೆಳೆಯುತ್ತಿದ್ದರು. ಕೃಷಿಗಾಗಿ ಬ್ಯಾಂಕ್‌ನಲ್ಲಿ ₹1.25 ಲಕ್ಷ ಹಾಗೂ ಖಾಸಗಿ ಕೈಸಾಲ ಮಾಡಿಕೊಂಡಿದ್ದರು. ಸರಿಯಾಗಿ ಬೆಳೆ ಬಾರದೆ ಹಾಗೂ ರೇಷ್ಮೆ ಬೆಲೆ ಕುಸಿತದಿಂದ ಸಾಲದ ಹೊರೆಯಾಗಿತ್ತು. ಸಾಲ ತೀರಿಸುವುದಕ್ಕಾಗಿ ಕೆಲ ತಿಂಗಳ ತಮ್ಮ ಒಂದು ಎಕರೆ ಜಮೀನು ಸಹ ಮಾರಾಟ ಮಾಡಿದ್ದರು. ಉಳಿದ ಒಂದೂವರೆ ಎಕರೆಯಲ್ಲಿ ಬೆಳೆದ ರೇಷ್ಮೆ ಬೆಳೆದಿದ್ದರು, ನಿರೀಕ್ಷೆಯಂತೆ ಫಸಲು ಬರಲಿಲ್ಲ. ಸಾಲ ತೀರಿಸುವುದು ಹೇಗೆ ಎಂದು ಚಿಂತೆಗೀಡಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೋಗಿಲೆ ಕಂಠದ ಪ್ರಕೃತಿಗೆ ಬೇಕಿದೆ ಪ್ರೋತ್ಸಾಹ

ಮೃತರಿಗೆ ಪುತ್ರ, ಪುತ್ರಿ ಹಾಗೂ ಪತ್ನಿ ಇದ್ದಾರೆ. ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...