ವಿಜಯಪುರ | ಆನೆಕಾಲು ರೋಗ ತಡೆಗೆ ಡಿಇಸಿ ಮಾತ್ರೆಗಳು ಅಗತ್ಯ: ತಹಶೀಲ್ದಾರ್

Date:

ಆನೆಕಾಲು ರೋಗ ತಡೆಗಟ್ಟುವಿಕೆ ಡಿಇಸಿ ಮಾತ್ರೆಗಳನ್ನು ಸೇವಿಸುವುದು ಅಗತ್ಯ. ಮಾತ್ರೆಗಳನ್ನು ಸೇವಿಸುವುದರಿಂದ ಆನೆಕಾಲು ರೋಗದ ಹರಡುವಿಕೆಯನ್ನು ತಡೆದು, ರೋಗವನ್ನು ನಿರ್ಮೂಲನೆ ಮಾಡಬಹುದು ಎಂದು ವಿಜಯಪುರ ಜಿಲ್ಲೆಯ ಆಲಮೇಲ ತಹಶೀಲ್ದಾರ್‌ ಡಾ. ಮಹದೇವ ಸನಮುರಿ ಹೇಳಿದ್ದಾರೆ.

ಆಲಮೇಲದಲ್ಲಿ ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮದಡಿ ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪಟ್ಟಣ ಪಂಚಾಯಿತಿ, ಪಂಚಾಯತ್ ರಾಜ್ಯ ಇಲಾಖೆ ಆಯೋಜಿಸಿದ್ದ ಡಿಇಸಿ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಡಿಇಸಿ ಮಾತ್ರೆಗಳನ್ನು ಸೇವನೆ ಮಾಡಿದಾಗ ಸಣ್ಣಪುಟ್ಟ ಜ್ವರ, ಮೈ ಕೈ ನೋವು, ಸುಸ್ತು, ವಾಕರಿಕೆ ಕಾಣಿಸಿಕೊಳ್ಳಬಹುದು. ಆದರೆ, ಯಾವುದೇ ಪ್ರಾಣಾಪಾಯವಿಲ್ಲ. ಮಾತ್ರೆಗಳನ್ನು ಸೇವನೆ ಮಾಡದೆ ಬಿಟ್ಟರೆ ಆನೆಕಾಲು ರೋಗ ಉಲ್ಬಣಗೊಂಡು ನರಕಯಾತನೇ ಅನುಭವಿಸಬೇಕಾಗುತ್ತದೆ” ಎಂದರು.

“ಗ್ರಾಮಗಳಲ್ಲಿ ಪರಿಸರ ಸ್ವಚ್ಛತೆ ಕಾಪಾಡುವುದು, ತಿಪ್ಪೆಗುಂಡಿ, ಚರಂಡಿಗಳಲ್ಲಿ ನೀರುಗಳು ನಿಲ್ಲದಂತೆ ನೋಡಿಕೊಳ್ಳುವುದು ಲೇರಿಯ ಕ್ಯೂಲೆಕ್ಸ್ ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ ಪೂಜಾರಿ ಮಾತನಾಡಿ, “ಡಿಇಸಿ ಮಾತ್ರಗಳ ಸೇವನೆ ಮಾಡುವುದರ ಜೊತೆಗೆ ತಮ್ಮ ಕುಟುಂಬಸ್ಥರಿಗೂ ಕೂಡ ಮಾತ್ರೆಗಳನ್ನು ನೀಡಿವುದು ಎಲ್ಲರ ಕರ್ತವ್ಯ. ಆನೆಕಾಲು ರೋಗ ತಡೆಗೆ ಮುಂಜಾಗ್ರತ ಕ್ರಮ ಕೈಗೊಳ್ಳಲು ಕಳೆದ 15 ವರ್ಷಗಳಿಂದ ನಿರಂತರವಾಗಿ ಡಿಇಸಿ ಸಾಮೂಹಿಕ ಔಷಧಿ ವಿತರಣೆ ಮಾಡಲಾಗುತ್ತಿದೆ. ಆಲಮೇಲಾದಲ್ಲಿ ಸೊಳ್ಳೆಗಳನ್ನು ಹಿಡಿದು, ಪರೀಕ್ಷಿಸಿದಾಗ ಆನೆಕಾಲು ರೋಗ ಉತ್ಪತ್ತಿ ಮಾಡುವ ಪರಾವಲಂಬಿ ಜೀವಿಗಳು ಕಂಡುಬಂದಿವೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಉಪತಹಸೀಲ್ದಾರ್ ಎಸ್.ಐ ಚೌಹಾಣ್. ಶಿರಸ್ತೆದಾರ ಪಿ.ಎಸ್‌ ಮೂಕಿಹಾಳ, ವೈದ್ಯಾಧಿಕಾರಿ ಡಾ ಪ್ರಶಾಂತ ದೊಮಗೊಂಡ, ಡಾ. ಎಸ್ ಜಿ ಪತ್ತಾರ, ಆರೋಗ್ಯ ಇಲಾಖೆಯ ಮಲ್ಲಿಕಾರ್ಜುನ ಪೂಜಾರಿ, ಸಂತೋಷ್, ಸಂದೇಶ್ ಜೋಗುರ್, ಮಾರ್ಥಾಂಡ್ ವಗ್ಗೆ, ನಿಂಗಪ್ಪ ಬೋಡ್ಕೆ, ಸಂತೋಷ್ ಕುಂಬಾರ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...