ಡಿ.30: ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಬಿಎಸ್‌ಡಬ್ಲ್ಯೂಟಿ ವರ್ಷದ ವ್ಯಕ್ತಿ ಪ್ರಶಸ್ತಿ; 9ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ

Date:

ಧರ್ಮ, ರಾಜಕೀಯ, ಜಾತಿ ಎಂಬಂತಹ ಯಾವುದೇ ಭೇದಭಾವವಿಲ್ಲದೇ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಇತರ ಹಿಂದುಳಿದ ಜಿಲ್ಲೆಗಳಲ್ಲಿ ತನ್ನದೇ ವೈಶಿಷ್ಟ್ಯಪೂರ್ಣ ಶೈಲಿಯಲ್ಲಿ ಸಾಮಾಜಿಕ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಬಂದಿರುವ ಮಂಗಳೂರಿನ ಭಾರತ್ ಸೋಷಿಯಲ್ ಮತ್ತು ವೆಲ್ಫೇರ್ ಟ್ರಸ್ಟ್(BSWT) ವತಿಯಿಂದ 9ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಡಿ.30ರಂದು ಆಯೋಜಿಸಿದೆ.

2023 ನೇ ಸಾಲಿನ 9ನೇ ವರ್ಷದ ವಿದ್ಯಾರ್ಥಿ ವೇತನಾ ವಿತರಣಾ ಸಮಾರಂಭದಲ್ಲಿ ನಾಡಿನ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು (ವಿಜಯ ಟೈಮ್ಸ್ ಡಿಜಿಟಲ್ ಮೀಡಿಯಾ) ಅವರಿಗೆ ‘ಭಾರತ್ ಸೋಷಿಯಲ್ ಮತ್ತು ವೆಲ್ಪೇರ್ ಟ್ರಸ್ಟ್ ಇದರ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷರಾದ ನೂರುಲ್ ಅಮೀನ್ ತಿಳಿಸಿದ್ದಾರೆ.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.30ರ ಶನಿವಾರ ಸಂಜೆ 3ಕ್ಕೆ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಪ್ರಶಸ್ತಿ ಮತ್ತು ಫಲಕವನ್ನು ನೀಡಿ ಗೌರವಿಸಲಾಗುವುದು. ಮತ್ತು ಈ ಪ್ರಶಸ್ತಿಯೂ 25,000 ರುಪಾಯಿ ಗೌರವಧನ ಒಳಗೊಂಡಿರುತ್ತದೆ. ಆ ದಿನದಂದು 175 ಅರ್ಹ ವಿದ್ಯಾರ್ಥಿಗಳಿಗೆ ತಲಾ ನಾಲ್ಕು ಸಾವಿರ ರೂಪಾಯಿ ವಿದ್ಯಾರ್ಥಿ ವೇತನವನ್ನು ನೀಡಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

bswt

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯರಾಜ್ ಅಮೀನ್, ಮಂಗಳ ಗಂಗೋತ್ರಿಯ ಸೂಪರಿಡೆಂಟ್ ಹರೀಶ್ ಕುಮಾರ್ ಕುತ್ತಡ್ಕ, ಗೋಕರ್ಣನಾಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಆಶಾಲತ ಎಸ್ ಸುವರ್ಣ, ಮಿಲಾಗ್ರಿಸ್ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಮೆಲ್ವಿನ್ ವಾಸ್, ಖದೀಜಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಅಶ್ರಫ್ ಎಂ. ಸಿ, ಡಾ. ಅರುಣ್ ಉಳ್ಳಾಲ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸದಸ್ಯರಾದ ನಿಯಾಝ್ ಪೆರ್ಲ, ಅಶೀರುದ್ದೀನ್ ಮಾಸ್ಟರ್ ಸಾರ್ತಬೈಲ್, ಅಬ್ದುಲ್ಲಾ, ಅಡ್ವೊಕೇಟ್ ಕೆ. ಮುಹಮ್ಮದ್ ಝಮೀರ್, ಆಕಿಫ್ ಇಂಜಿನಿಯರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...