ಹಾಸನ | ಹಿಂದುತ್ವ ಕೋಮು ಸಂಘಟನೆಗಳ ಪ್ರತಿಭಟನೆ ವೇಳೆ ಇಸ್ಲಾಂ ಪರ ಘೋಷಣೆ; ವ್ಯಕ್ತಿ ಬಂಧನ

Date:

  • ಬೇಲೂರು ರಥೋತ್ಸವದ ವೇಳೆ ಕುರಾನ್‌ ಪಠಣ ವಿರೋಧಿಸಿ ಪ್ರತಿಭಟನೆ
  • ಘೋಷಣೆ ಕೂಗಿದ ಮುಸ್ಲಿಂ ಯುವಕನನ್ನು ವಶಕ್ಕೆ ಪಡೆದ ಪೊಲೀಸರು

ವಿಶ್ವವಿಖ್ಯಾತ ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವಕ್ಕೂ ಮುನ್ನ ಕುರಾನ್‌ ಪಠಣ ಮಾಡಬಾರದು ಎಂದು ಆಗ್ರಹಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಮುಸ್ಲಿಂ ಯುವಕನೊಬ್ಬ ‘ಕುರಾನ್‌ ಜಿಂದಾಬಾದ್‌’ ಎಂದು ಘೋಷಣೆ ಕೋಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಂಗಳವಾರ ನಡೆದಿದೆ.

ಹಾಸನ ಜಿಲ್ಲೆ ಬೇಲೂರಿನಲ್ಲಿ ಚನ್ನಕೇಶವಸ್ವಾಮಿ ರಥೋತ್ಸವ ಏಪ್ರಿಲ್‌ 4ರಂದು ನಡೆಯಲಿದೆ. ರಥೋತ್ಸವಕ್ಕೂ ಮುನ್ನ ಕುರಾನ್‌ ಪಠಣ ಮಾಡುವುದು ವಾಡಿಕೆಯಾಗಿದೆ. ಆದರೆ, ಈ ಬಾರಿಯ ರಥೋತ್ಸವದಲ್ಲಿ ಕುರಾನ್‌ ಪಠಣ ಮಾಡಬಾರದೆಂದು ನಾನಾ ಹಿಂದುತ್ವವಾದಿ ಕೋಮು ಸಂಘಟನೆಗಳು ಬೇಲೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿವೆ.

ಬೇಲೂರು ಪಟ್ಟಣದ ಜೂನಿಯರ್‌ ಕಾಲೇಜು ಮೈದಾನದಿಂದ ಚನ್ನಕೇಶವಸ್ವಾಮಿ ದೇವಾಲಯದ ವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಹಿಂದುತ್ವವಾದಿ ಕೋಮು ಕಾರ್ಯಕರ್ತರು ಘೋಷಣೆ ಕೂಗುತ್ತಾ ಮೆರವಣಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಮುಸ್ಲಿಂ ಯುವಕನೊಬ್ಬ ‘ಕುರಾನ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ಉದ್ರಿಕ್ತಗೊಂಡ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮುಸ್ಲಿಂ ಯುವಕನನ್ನು ಅಟ್ಟಾಡಿಸಿ ಹಲ್ಲೆ ನಡೆಸಲು ಮುಗಿ ಬಿದ್ದಿದ್ದಾರೆ. ತಕ್ಷಣವೆ ಎಚ್ಚೆತ್ತ ಪೊಲೀಸರು ಅನಾಹುತ ತಡೆದು, ಮುಸ್ಲಿಂ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳದಿಂದ ಕರೆದೊಯ್ದಿದ್ದಾರೆ.

ಬೇಲೂರು ಪ್ರತಿಭಟನೆ 01

ಇತ್ತೀಚೆಗೆ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಎನ್‌ ರಮೇಶ್ ಬರೆದಿದ್ದ ‘ಬೇಲೂರಿನ ಶ್ರೀಚನ್ನಕೇಶವನಿಗೆ ಬೇಕಿಲ್ಲ ಕುರಾನ್ ಪಠಣ’ ಎನ್ನುವ ಪುಸ್ತಕವನ್ನು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಬಿಡುಗಡೆ ಮಾಡಿದ್ದರು. ಈ ಪುಸ್ತಕದಲ್ಲಿ ‘1932ರಲ್ಲಿ ರಥೋತ್ಸವಕ್ಕೂ ಮುನ್ನ ಕುರಾನ್‌ ಪಠಣ ಮಾಡುವ ಸಂಪ್ರದಾಯವನ್ನು ದೇವಾಲಯದ ಮಾರ್ಗಸೂಚಿಗಳಲ್ಲಿ ಸೇರಿಸುವ ಮೂಲಕ ಪರಂಪರೆಗೆ ಅಪಚಾರ ಎಸಗಲಾಗಿದೆ’ ಎಂದು ವಿಡಂಬನೆ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಅಲೆಮಾರಿ ಸಮುದಾಯಗಳ ಮೀಸಲಾತಿ ಪ್ರಮಾಣ ಶೇ.2ರಷ್ಟು...

ಬಳಿಕ ‘ಬೇಲೂರಿನ ಶ್ರೀಚನ್ನಕೇಶವನಿಗೆ ಬೇಕಿಲ್ಲ ಕುರಾನ್ ಪಠಣ’ ಎಂಬ ಪುಸ್ತಕ ಮತ್ತು ಕೆಲವು ದಾಖಲೆಗಳನ್ನು ಮುಂದಿಟ್ಟು ರಥೋತ್ಸವದ ವೇಳೆ ಕುರಾನ್ ಪಠಣ ನಿಲ್ಲಬೇಕು ಎಂದು ಹಿಂದು ಸಂಘಟನೆಗಳ ಮುಖಂಡ ಇತ್ತೀಚೆಗೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು.

ಕಳೆದ ವರ್ಷ ಬೇಲೂರು ಜಾತ್ರೆ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ವಿವಾದ ಸೃಷ್ಟಿಸಲಾಗಿತ್ತು. ಈ ವರ್ಷ ಕುರಾನ್‌ ಪಠಣ ವಿಚಾರದಲ್ಲಿ ವಿವಾದ ಹುಟ್ಟಿಕೊಂಡಿದೆ. ಶಾಂತಿಯ ನೆಲೆಯಾಗಿದ್ದ ಬೇಲೂರಿನಲ್ಲಿ ಈಗ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಹಿಂದುತ್ವವಾದಿಗಳು ಎಬ್ಬಿಸಿರುವ ವಿವಾದವು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಲಿರುವ ಬೇಲೂರು ಚನ್ನಕೇಶವಸ್ವಾಮಿ ದೇವಾಲಯಕ್ಕೆ ಕಪ್ಪುಚುಕ್ಕಿ ಆಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...