ಚಿಂತಾಮಣಿ | ಖಾತೆ ಮಾಡಲು ವಿಳಂಬ; ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಎಸ್ಪಿ ಗರಂ

Date:

ನಿವೇಶನ ಖಾತೆಗೆ ಅರ್ಜಿ ಸಲ್ಲಿಸಿ ವರ್ಷವಾದರೂ ಖಾತೆ ಮಾಡಿಕೊಡದ ಗ್ರಾಪಂ ಪಿಡಿಒ ವಿರುದ್ಧ ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್‌ ಗರಂ ಆದರು.

ಚಿಂತಾಮಣಿ ನಗರದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಕುರುಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಕಲ್ ಗ್ರಾಮದ ಮುನಿರತ್ನಮ್ಮ ಲೇಟ್ ಮುನಿಯಪ್ಪ ಎಂಬುವರು ನಿವೇಶನದ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿ ಒಂದು ವರ್ಷವಾದರೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಖಾತೆ ಮಾಡಿಕೊಡಲು ವಿಳಂಬ ಮಾಡಿದ ಕಾರಣ ಮುನಿರತ್ನಮ್ಮ ಎಂಬವರು ಲೋಕಾಯುಕ್ತ ಎಸ್ಪಿಗೆ ಲಿಖಿತ ಮೂಲಕ ದೂರು ಸಲ್ಲಿಸಿದರು.

ಅರ್ಜಿ ಪರಿಶೀಲಿಸಿದ ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್‌ ಗ್ರಾಪಂ ಪಿಡಿಒ ಅವರನ್ನು ಕೂಡಲೇ ಅಮಾನತು ಮಾಡುವಂತೆ ತಾಪಂ ಇಒಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ಸಾರ್ವಜನಿಕರಿಗೆ ಕಾನೂನು ರೀತಿಯಲ್ಲಿ ಆಗಬೇಕಾದ ಕೆಲಸಗಳು ವಿಳಂಬವಾಗಿದ್ದರೆ, ಮಾಡಿಕೊಡಲು ಅಧಿಕಾರಿಗಳು ತೊಂದರೆ ನೀಡಿದರೆ ಅಂಥವರು ದೂರು ನೀಡಬಹುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಕಂದಾಯ ಇಲಾಖೆ, ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ದೂರುಗಳು ಸಲ್ಲಿಕೆಯಾದವು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಈ ಸಂದರ್ಭದಲ್ಲಿ ಲೋಕಾಯುಕ್ತ ಡಿ ವೈ ಎಸ್ ಪಿ ವೀರೇಂದ್ರ ಕುಮಾರ್, ಇನ್ಸ್ಪೆಕ್ಟರ್ ಮೋಹನ್ ಎನ್ ಹೆಚ್, ಶಿವಪ್ರಸಾದ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ, ಪೌರಾಯುಕ್ತ ಜಿಎನ್ ಚಲಪತಿ, ಉಪತಾಹಸಿಲ್ದಾರ್ ರಾಜೇಂದ್ರ, ರೆವೆನ್ಯೂ ಇನ್ಸ್ಪೆಕ್ಟರ್ ಗೋಕುಲ್‌, ಸಿಬ್ಬಂದಿಗಳಾದ ಅರುಣ್ ಕುಮಾರ್, ಮಂಜುಳಾ, ರಮೇಶ್, ಗುರುಮೂರ್ತಿ, ದೇವರಾಜ್, ಮೊಳಪ್ಪ ಮೊಗ ಮೊರೆ, ಅಬ್ದುಲ್ ಖಾದರ್, ನರಸಿಂಹ ಮೂರ್ತಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...