ಉಡುಪಿ | ಮಣಿಪಾಲದ “ಡೆಲ್ಲಿ ಡಾಬಾ”ದಲ್ಲಿ ಶಾರ್ಟ್ ಸರ್ಕ್ಯೂಟ್, ಪ್ರಾಣಾಪಾಯದಿಂದ ಪಾರು

Date:

ಉಡುಪಿ ನಗರದ ಮಣಿಪಾಲದ ಡೆಲ್ಲಿ ಡಾಬಾ ಉಪಹಾರ ಗೃಹದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಘಟನೆ ಮಂಗಳವಾರ ಸಂಭವಿಸಿದೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಿಚಾರಗಳು ಕಂಡುಬಂದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಡಾಬಾದ ಒಳಭಾಗದಲ್ಲಿದ್ದ ಸಿಲಿಂಡರ್‌ಗಳು ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಸ್ಫೋಟಗೊಂಡಿದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಸ್ಥಳದಲ್ಲಿ ಅಗ್ನಿ ನಂದಿಸುವ ಕಾರ್ಯ ಕೂಡ ತಕ್ಷಣ ಕೈಗೊಳ್ಳಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಹರಿರಾಂ ಶಂಕರ್, ಘಟನೆಯ ಬಗ್ಗೆ ಸುಳ್ಳು ಸುದ್ದಿ ಅಥವಾ ವದಂತಿ ಹರಡುವ ಅಗತ್ಯವಿಲ್ಲ. ಯಾವುದೇ ಅನುಮಾನಾಸ್ಪದ ಅಂಶ ಕಂಡುಬಂದಿಲ್ಲ. ಸಾರ್ವಜನಿಕರು ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...