ಕಲಬುರಗಿ | ₹1ಲಕ್ಷ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ

Date:

ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆ ಕೊಡಿಸುವುದಾಗಿ ₹1ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿ, ಮುಂಗಡವಾಗಿ ₹15 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ (ಎಫ್‌ಡಿಎ) ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಂತೋಷ್ ರಾಮಚಂದ್ರ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಎಫ್‌ಡಿಎ ಶಿಲ್ಪಾ ಅವರನ್ನು ಬಂಧಿಸಿದ್ದಾರೆ.

ಅಂಗನವಾಡಿ ಕೇಂದ್ರಗಳ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿತ್ತು. ಸಹಾಯಕಿ ಹುದ್ದೆ ಕೊಡಿಸಲು ಶಿಲ್ಪಾ ಅವರು ಸಂತೋಷ್ ಅವರಿಗೆ ₹1 ಲಕ್ಷಕ್ಕೆ ಬೇಡಿಕೆ ಇರಿಸಿದ್ದರು. ಮೊದಲನೇ ಹಂತದಲ್ಲಿ ₹30 ಸಾವಿರ ಲಂಚ ಪಡೆದಿದ್ದರು. ಈ ಬಗ್ಗೆ ಸಂತೋಷ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ನೇಮಕಾತಿಯ ಆದೇಶ ಪತ್ರ ನೀಡುವಾಗ ಸಂತೋಷ ಅವರಿಂದ ₹15 ಸಾವಿರ ಲಂಚ ಪಡೆಯುತ್ತಿದ್ದಾಗ ಶಿಲ್ಪಾ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ಪ್ರತಿ ಆಕಾಂಕ್ಷಿಯೊಬ್ಬರಿಂದ ₹500, ₹1000 ಪಡೆಯುತ್ತಿದ್ದ ದಲ್ಲಾಳಿ ದೇವಪ್ಪ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ದಾಳಿಯ ವೇಳೆ ಲೋಕಾಯುಕ್ತ ಪೊಲೀಸ್‌ ಸಿಬ್ಬಂದಿಯೊಂದಿಗೆ ಅತಿರೇಕದಿಂದ ವರ್ತಿಸಿದ್ದರು. ನನಗೆ ರಾಜಕೀಯ ಮುಖಂಡರು ಗೊತ್ತಿದ್ದಾರೆ ದೇವಪ್ಪ ಎಂದು ಹೆದರಿಸುವ ಪ್ರಯತ್ನ ಮಾಡಿದರು ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ದಂಪತಿ ಸಾವು

ಲೋಕಾಯುಕ್ತ ಎಸ್ಪಿ ಉಮೇಶ ಬಿ.ಕೆ. ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಸಿಬ್ಬಂದಿ ಮಲ್ಲಿನಾಥ್, ಮಸೂದ್‌, ಬಸವರಾಜ, ಸಂತೋಷಿ, ಮಧುಮತಿ, ಪ್ರಮೋಧ್‌ ತಂಡ ದಾಳಿ ನಡೆಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...