ಬೀದರ್‌ | ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಕಾವಲುಗಾರರ ನೇಮಕಕ್ಕೆ ಆಗ್ರಹ

Date:

ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸಮಾಜ ಕಲ್ಯಾಣ, ಹಿಂದುಳಿದಳ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಸರ್ಕಾರಿ ಪ್ರಾಥಮಿಕ, ಪದವಿ, ಪದವಿ ಪೂರ್ವ, ಇಂಜಿನಿಯರಿಂಗ್ ಡಿಪ್ಲೋಮಾ, ಮೋರಾರ್ಜಿ, ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ನಿಲಯಗಳು ಮತ್ತು ವಸತಿ ಶಾಲೆಗಳಲ್ಲಿ ರಾತ್ರಿ ಮತ್ತು ಹಗಲು ಹೊತ್ತಿನಲ್ಲಿ ಕಾವಲುಗಾರರನ್ನು ನೇಮಕ ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ಸೋನಾರೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಪ್ರವೇಶ ಪಡೆದು ವ್ಯಾಸಂಗ ಮಾಡುವ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಬಡವರ ಮಕ್ಕಳಾಗಿದ್ದಾರೆ. ಆದರೆ ವಸತಿ ನಿಲಯ ಹಾಗೂ ಶಾಲೆಗಳಲ್ಲಿ ಕಾವಲುಗಾರರು ಇಲ್ಲದ ಕಾರಣ ವಿದ್ಯಾರ್ಥಿಗಳು ರಾತ್ರಿ ವೇಳೆ ಬೇಕಾಬಿಟ್ಟಿ ಓಡಾಡುವುದು, ತಡರಾತ್ರಿವರೆಗೆ ಹೊರಗಡೆ ಸುತ್ತಾಡಿ ಹಾಸ್ಟೆಲ್‌ ಬರುವುದು ಮಾಡುತ್ತಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ವಸತಿ ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ರಾತ್ರಿ ಕಾವಲುಗಾರರು ಇಲ್ಲದ ಕಾರಣ ಬಡಾವಣೆಯ ಪುಂಡರು ಹಾಸ್ಟೆಲ್ ಆವರಣಗಳಲ್ಲಿ ಸರಾಯಿ ಕುಡಿಯುವುದು,‌ ಅನೈತಿಕ ಚಟುವಟಿಕೆಗಳು ನಡೆಸುವ ಮೂಲಕ ಅವ್ಯವಸ್ಥೆಯ ತಾಣವಾಗಿ ಮಾಡುತ್ತಿದ್ದಾರೆ. ಇದರಿಂದ ನಿಲಯದ ಪ್ರತಿಭಾವಂತ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿ  ವಿದ್ಯಾಭ್ಯಾಸಕ್ಕೆ ಅಡಚಣೆ ಉಂಟಾಗುತ್ತಿದೆ. ರಾತ್ರಿ ಕಾವಲುಗಾರರನ್ನು ನೇಮಿಸಿದರೆ ಹಾಸ್ಟೆಲ್‌ ಆವರಣದೊಳಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವುದಿಲ್ಲ. ವಸತಿ ವಿದ್ಯಾರ್ಥಿಗಳಿಗೂ ಸುರಕ್ಷಿತವಾಗಿರಲು ಅನುಕೂಲವಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ವಿದ್ಯಾರ್ಥಿಗಳ ಉಜಲ್ವ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ವಸತಿ ನಿಲಯ ಹಾಗೂ ವಸತಿ ಶಾಲೆಗಳಿಗೆ ರಾತ್ರಿ ಕಾವಲುಗಾರರ ನೇಮಕಾತಿಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...