ಯಾದಗಿರಿ | ರಾಜ್ಯದಲ್ಲಿ 250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಆಗ್ರಹ

Date:

ಕರ್ನಾಟಕದಲ್ಲಿ 250 ಅಡಿ ಎತ್ತರದ ಡಾ. ಬಿ.ಆರ್ ಅಂಬೇಡ್ಕ‌ರ್ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಕರ್ನಾಟಕ ಭೀಮ್ ಸೇನೆ ಒತ್ತಾಯಿಸಿದೆ. ಸಂಘಟನೆಯ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸಿ ಮಾನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ ಕುಮಾರ, “ಸಮಾನತೆಯ ಸಂಕೇತ, ಭಾರತ ರತ್ನ ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಹು ಎತ್ತರದ ಪ್ರತಿಮೆಯನ್ನು ಈಗಾಗಲೇ ಆಂಧ್ರಪ್ರದೇಶದಲ್ಲಿ ನಿರ್ಮಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ 250 ಅಡಿ ಎತ್ತರದ ಬೃಹತ್ ಪ್ರತಿಮೆ ನಿರ್ಮಾಣ ಮಾಡಬೇಕು” ಎಂದರು.

“ಮುಖ್ಯಮಂತ್ರಿಗಳು ಕ್ಯಾಬಿನೆಟ್ ಸಭೆ ಕರೆದು ಈ ವಿಚಾರದ ಬಗ್ಗೆ ಚರ್ಚೆ ನಡೆಸಿ, ನಿರ್ಣಯ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...